ಹಿಂದಿನ ಇತಿಹಾಸ ಅರಿಯ ದವರು ಭವಿಷ್ಯದಲ್ಲಿ ಇತಿಹಾ ಸವನ್ನು ನಿರ್ಮಿಸಲಾರರು: ಬಿ.ವೈ.ರಾಘವೇಂದ್ರ

 


ವಿಜಯಸಂಘರ್ಷ /ಭದ್ರಾವತಿ

ದೇಶದ ಇತಿಹಾಸದಲ್ಲಿ ಮರೆಯಾಗಿರುವ ಹಿಂದೂ ಧರ್ಮದ ಹಲವಾರು ಸಂಸ್ಕೃತಿ, ಪರಂಪರೆ ಇದೀಗ ಅನಾವರಣಗೊಳ್ಳುತ್ತಿದ್ದು, ವಿಶ್ವ ಹಿಂದು ಪರಿಷತ್ ಸೇರಿದಂತೆ ಹಲವಾರು ಹಿಂದೂ ಪರ ಸಂಘಟನೆ ಗಳ ಹೋರಾಟಕ್ಕೆ ಇದೀಗ ಫಲ ಲಭಿಸುತ್ತಿದೆ ಎಂದು ಸಂಸದ ಬಿ.ವೈ ರಾಘವೇಂದ್ರ ಹೇಳಿದರು.

ಅವರು ಭಾನುವಾರ ವಿಶ್ವ ಹಿಂದೂ ಪರಿಷತ್ ವತಿಯಿಂದ ಹಮ್ಮಿಕೊಳ್ಳ ಲಾಗಿದ್ದ 38 ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಮಹೋತ್ಸವ ಹಾಗೂ ಧರ್ಮಶ್ರೀ ಸಭಾಭವನ ಮಹಡಿಗಳ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.

ಹಿಂದಿನ ಇತಿಹಾಸ ಅರಿಯದವರು ಭವಿಷ್ಯದಲ್ಲಿ ಇತಿಹಾಸವನ್ನು ನಿರ್ಮಿಸ ಲಾರರು. ನಮ್ಮ ದೇಶದ, ನಾಡಿನ ಇತಿಹಾಸ, ಧರ್ಮ, ಸಂಸ್ಕೃತಿಯನ್ನು ನಾವುಗಳು ಅರಿತುಕೊಳ್ಳುವ ಜೊತೆಗೆ ನಮ್ಮ ಮುಂದಿನ ಪೀಳಿಗೆಯವರಿಗೆ ತಿಳಿಸಿಕೊಡಬೇಕು. ಈ ಕಾರ್ಯದಲ್ಲಿ ವಿಶ್ವ ಹಿಂದೂ ಪರಿಷತ್ ನಿರಂತರ ವಾಗಿ ತೊಡಗಿಸಿಕೊಂಡು ಬಂದಿ ರುವುದು ಶ್ಲಾಘನೀಯ. ವಿಶ್ವ ಹಿಂದೂ ಪರಿಷತ್ ಕಾರ್ಯ ಚಟುವಟಿಕೆಗಳಿಗೆ ಬೆನ್ನೆಲುಬಾಗಿರುವ ಹಿಂದೂ ಅಭಿ ಮಾನಿಗಳು, ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.

ನರೇಂದ್ರ ಮೋದಿಯವರು ಪ್ರಧಾನಿಯಾದ ನಂತರ ದೇಶದಲ್ಲಿ ಮರೆಯಾಗಿರುವ ಹಿಂದೂ ಧರ್ಮದ ಹಲವಾರು ಸಂಸ್ಕೃತಿ, ಪರಂಪರೆ ಇದೀಗ ಅನಾವರಣಗೊಳ್ಳುತ್ತಿದ್ದು, ಜಮ್ಮು-ಕಾಶ್ಮೀರದ 370 ನೇ ವಿಧಿಯನ್ನು ರದ್ದುಗೊಳಿಸುವ ಮೂಲಕ ಈ ದೇಶದಲ್ಲಿ ಹಿಂದೂ ಧರ್ಮದ ನೆಲೆಗಟ್ಟಿನಲ್ಲಿ ಬದುಕು ತ್ತಿರುವ ಮುಸ್ಲಿಂ, ಕ್ರಿಶ್ಚಿಯನ್ ಸೇರಿದಂತೆ ಎಲ್ಲಾ ಧರ್ಮದವರು ಸಹ ಒಂದೇ ಎಂಬ ಭಾವನೆಯನ್ನು ಮೂಡಿಸಲಾಗಿದೆ. ಇದೀಗ ಜಮ್ಮು- ಕಾಶ್ಮೀರದಲ್ಲಿ ಮರೆಯಾಗಿದ್ದ ಹಿಂದೂ ಧರ್ಮದ ಹಲವಾರು ಸಂಸ್ಕೃತಿ, ಪರಂಪರೆ ಅನಾವರಣಗೊಳ್ಳುತ್ತಿವೆ. ಆಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯ ನಡೆಯುತ್ತಿದ್ದು, ನಮ್ಮ ಹಿರಿಯರ ಬಹಳ ವರ್ಷಗಳ ಕನಸು ನನಸಾಗುತ್ತಿದೆ. ಈ ರೀತಿಯ ಕಾರ್ಯಗಳಲ್ಲಿ ಕೈಜೋಡಿಸಿಕೊಂಡು ಬರುತ್ತಿರುವ ವಿಶ್ವ ಹಿಂದೂ ಪರಿಷತ್ ಅಂತರಾಷ್ಟ್ರೀಯ ಮಟ್ಟದಲ್ಲಿ ತನ್ನನ್ನು ಗುರುತಿಸಿಕೊಂಡಿದೆ ಎಂದರು.

ನಗರದಲ್ಲಿ ವಿಶ್ವ ಹಿಂದೂ ಪರಿಷತ್ ಸ್ವಂತ ನಿವೇಶನ ಹೊಂದುವ ಮೂಲಕ ಸಮುದಾಯ ಭವನ ನಿರ್ಮಿಸಿರು ವುದು ಹೆಮ್ಮೆಯ ವಿಚಾರವಾಗಿದೆ. ಸಮಾಜದ ಎಲ್ಲರ ಸಹಕಾರದೊಂದಿಗೆ ಭವನವನ್ನು ಹಂತ ಹಂತವಾಗಿ ಅಭಿವೃದ್ಧಿಗೊಳಿಸುವ ಕಾರ್ಯ ನಡೆಯುತ್ತಿದ್ದು, ಮುಂದಿನ ದಿನಗಳಲ್ಲಿ ಭವನದ ಅಭಿವೃದ್ಧಿಗೆ ಇನ್ನೂ ಹೆಚ್ಚಿನ ಅನುದಾನ ಬಿಡುಗಡೆಗೊಳಿಸು ವುದಾಗಿ ಭರವಸೆ ನೀಡಿದರು.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಕುಮಾರ್, ನಗರಸಭಾ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ವಿಶ್ವ ಹಿಂದು ಪರಿಷತ್ ಕ್ಷೇತ್ರಿಯ ಕಾರ್ಯದರ್ಶಿ ಕೇಶವ ಹೆಗ್ಡೆ, ಪ್ರಾಂತ್ಯ ಉಪಾಧ್ಯಕ್ಷ ಹಾ ರಾಮಪ್ಪ, ಜಿಲ್ಲಾಧ್ಯಕ್ಷ  ವಾಸುದೇವ ಮೂರ್ತಿ, ಗ್ರಾಮಾಂತರ ಅಧ್ಯಕ್ಷ ಎಸ್. ಮುತ್ತುರಾಮಲಿಂಗಮ್, ಮಾತೃ ಮಂಡಳಿ ಅಧ್ಯಕ್ಷೆ ಯಶೋಧ ವೀರಭದ್ರಪ್ಪ, ಸಭಾ ಭವನ ಕಟ್ಟಡ ಸಮಿತಿ ಅಧ್ಯಕ್ಷ ಕೆ.ಎಚ್ ತೀರ್ಥಯ್ಯ, ಪೌರಾಯುಕ್ತ ಮನುಕುಮಾರ್, ಸದಸ್ಯ ಆರ್. ಶ್ರೇಯಸ್, ದಾನಿ ವೇದಾವತಿ ಶಿವಮೂತಿ, ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ಎನ್ ಶ್ರೀಹರ್ಷ, ಆರ್. ಪೂರ್ವಚಾರ್, ವೈದ್ಯ ಡಾ. ನರೇಂದ್ರ ಭಟ್, ಡಿ.ಆರ್ ಶಿವಕು ಮಾರ್, ವೈ.ಎಸ್ ರಾಮ ಮೂರ್ತಿ, ಮಂಜುನಾಥ ಪವಾರ್, ಎನ್. ಎಸ್ ಮಹೇಶ್ವರಪ್ಪ, ಡಾ. ಬಿ.ಜಿ ಧನಂಜ ಯ, ಕೆ.ಆರ್ ಸತೀಶ್, ಮಂಜುನಾಥ್ ಕದಿರೇಶ್ ಮತ್ತಿತರರಿದ್ದರು.  

ವಿಶ್ವ ಹಿಂದೂ ಪರಿಷತ್, ಬಜರಂಗದಳ ಸೇರಿದಂತೆ ವಿವಿಧ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು, ಅಭಿಮಾನಿಗಳು ಪಾಲ್ಗೊಂಡಿದ್ದರು. ಒಂದು ಜೊತೆ ಸಾಮೂಹಿಕ ವಿವಾಹ ನಡೆಯಿತು. ವೇದಬ್ರಹ್ಮ ಕೃಷ್ಣಮೂರ್ತಿ ಸೋಮಯಾಜಿ ನೇತೃತ್ವದಲ್ಲಿ ಧಾರ್ಮಿಕ ಆಚರಣೆಗಳು ಜರುಗಿದವು.

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 

+91 9743225795


ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು