ವಿಜಯ ಸಂಘರ್ಷ /ಭದ್ರಾವತಿ
ತಾಲ್ಲೂಕಿನ ಹೊಳೆಹೊನ್ನೂರು ಪಟ್ಟಣ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಗ್ರಾಮಸ್ಥರು ಅಧಿಕಾರಿಗಳ ವಿಳಂಭ ನೀತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಪಂಚಾಯತ್ ಇ-ಸ್ವತ್ತು, ಎನ್‌ಒಸಿ, ಖಾತೆ ಬದಲಾವಣೆ, ಲೈಸೆನ್ಸ್ ಒದಗಿಸುವುದು ಸೇರಿದಂತೆ ಹಲವು ಕೆಲಸಗಳನ್ನು ಮಾಡಿಕೊಡುವಲ್ಲಿ ಅಧಿಕಾರಿಗಳು ವಿಳಂಬ ಮಾಡುತ್ತಿ ದ್ದಾರೆ. ಅದರಲ್ಲೂ ಪಟ್ಟಣ ಪಂಚಾ ಯಿತಿ ಎಂದು ಮೇಲ್ದರ್ಜೆ ಗೇರಿಸಿದ ಬಳಿಕ ಡಣಾಯಕಪುರ, ಎಮ್ಮೆಹಟ್ಟಿ, ಹೊಳೆಬೈರನಹಳ್ಳಿ, ಜಂಬರಘಟ್ಟ, ಕೆರೆಬೀಸನಹಳ್ಳಿ ಗ್ರಾಮಗಳ ಜನರಿಗೆ ದಾಖಲೆಗಳನ್ನು ಒದಗಿಸಲು ವಿಳಂಬ ಮಾಡಲಾಗುತ್ತಿದೆ ಎಂದು ಪ್ರತಿಭಟ ನಾಕಾರರು ಆಕ್ರೋಶ ವ್ಯಕ್ತ ಪಡಿಸಿ ದರು.
ವಸತಿ ಸೇರಿದಂತೆ ಹಲವು ಯೋಜನೆಗಳಿಗೆ ವಿನಾಕಾರಣ ದಾಖಲೆಗಳಿಗಾಗಿ ಅಲೆದಾಡಿಸ ಲಾಗುತ್ತಿದೆ. ಇದರಿಂದ ರೈತರು ತೀವ್ರ ಸಂಕಷ್ಟಕ್ಕೀಡಾಗಿದ್ದಾರೆ. ತಮ್ಮೆಲ್ಲ ಕೆಲಸ ಬಿಟ್ಟು ಪಟ್ಟಣ ಪಂಚಾಯಿತಿ ಕಚೇರಿ ಸುತ್ತುವ ಕೆಲಸವಾಗಿದೆ ಎಂದು ರೈತರು ಆರೋಪಿಸಿದರು.
ನಿರ್ಲಕ್ಷ ಮತ್ತು ವಿಳಂಬ ಮಾಡುತ್ತಿ ರುವ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಈ ಸಂಬಂಧ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಅವರಿಗೆ ಮನವಿ ಸಲ್ಲಿಸಲಾಯಿತು.
ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯ ದರ್ಶಿ ಡಿ.ವಿ.ವೀರೇಶ್, ತಾಲೂಕು ಅಧ್ಯಕ್ಷ ಹಿರಣ್ಣಯ್ಯ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ
+91 9743225795