ಶಿಕ್ಷಣ ಎಂದರೆ ಪೂರಕವಾದ ಜ್ಞಾನದ ಕಲಿಕೆ : ಎ.ಕೆ ನಾಗೇಂದ್ರಪ್ಪ

 


ವಿಜಯಸಂಘರ್ಷ /ಭದ್ರಾವತಿ

ಶಿಕ್ಷಣ ಎಂದರೆ ಸಮಾಜದ ಲ್ಲಿ ಪರಿಪೂರ್ಣವಾಗಿ ಬದುಕಲು ಪೂರಕವಾದ ಜ್ಞಾನದ ಎಲ್ಲಾ ಬಗೆಯ ಕಲಿಕೆಯಾಗಿದ್ದು, ಇದು ಹುಟ್ಟಿನಿಂದ ಸಾವಿನವರೆಗೂ ಮುಂದುವರೆ ಯುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಹೇಳಿದರು.

ಅವರು ಶುಕ್ರವಾರ ಚುಂಚಾದ್ರಿ ಮಹಿಳಾ ವೇದಿಕೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪ್ರತಿಭಾವಂತ ಪುರಸ್ಕಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಮಗುವಿನ ಮೊದಲ ಕಲಿಕೆ ಮನೆಯಿಂದ ಆರಂಭಗೊಳ್ಳುತ್ತದೆ. ತಂದೆ-ತಾಯಿ ಮೊದಲ ಗುರುಗಳಾಗಿದ್ದು, ಈ ಹಿನ್ನಲೆಯಲ್ಲಿ ಮಗುವಿನ ಬೆಳವಣಿಗೆಗೆ ಪೂರಕವಾದ ವಾತಾವರಣ ರೂಪಿಸಿಕೊಡುವುದು ಪೋಷಕರ ಜವಾಬ್ದಾರಿಯಾಗಿದೆ.  ಶಿಕ್ಷಣ ಎಂದರೆ ಕೇವಲ ಪಠ್ಯಪುಸ್ತಕದ ಜ್ಞಾನ ವಲ್ಲ. ಪ್ರತಿಯೊಂದು ಕ್ಷೇತ್ರದಲ್ಲೂ ಕಲಿಕೆಯ ಪ್ರಕ್ರಿಯೆಯಲ್ಲಿ ತೊಡಗುವುದಾಗಿದೆ. ಇದನ್ನು ಸರಿಯಾಗಿ ಅರ್ಥಮಾಡಿಕೊಂಡು ಮುನ್ನಡೆಯಬೇಕೆಂದರು.


ವೇದಿಕೆ ಗೌರವಾಧ್ಯಕ್ಷೆ ಡಾ. ಆರ್. ಅನುರಾಧ ಪಟೇಲ್ ಮಾತನಾಡಿ, ಪ್ರತಿಯೊಂದಕ್ಕೂ ಜ್ಞಾನ ಬಹಳ ಮುಖ್ಯ.  ಮಹಾತ್ಮಗಾಂಧಿಜೀ ಸೇರಿದಂತೆ ಅನೇಕ ಮಹಾನ್ ಆದರ್ಶ ವ್ಯಕ್ತಿಗಳು ಶಿಕ್ಷಣದ ಮಹತ್ವದ ಬಗ್ಗೆ ತಿಳಿಸಿದ್ದಾರೆ. ಶಿಕ್ಷಣ ಎಂಬುದು ಕೇವಲ ಹೆಚ್ಚಿನ ಅಂಕಗಳನ್ನು ಪಡೆಯುವುದಲ್ಲ ಪರಿಶ್ರಮದ ಮೂಲಕ ಸಮಾಜಕ್ಕೆ ಪೂರಕವಾದ, ಮೌಲ್ಯಯುತ ಜ್ಞಾನವನ್ನು ಪಡೆಯುವುದಾಗಿದೆ. ಯಾವುದೇ ಕ್ಷೇತ್ರದಲ್ಲೂ ಪರಿಶ್ರಮವಿಲ್ಲದೆ ಏನನ್ನು ಸಹ ಸಾಧಿಸಲು ಸಾಧ್ಯವಿಲ್ಲ. ನಮ್ಮ ಸಾಧನೆಯ ಜೊತೆ ಜೊತೆಗೆ ಸೇವೆಯನ್ನು ಸಹ ಒಂದು ಭಾಗವನ್ನಾಗಿಸಿಕೊಳ್ಳಬೇಕೆಂದರು.



ಪೌರಾಯುಕ್ತ ಮನುಕುಮಾರ್ ಮಾತನಾಡಿ, ಶಿಕ್ಷಣ ಎಂಬುದು ನಮ್ಮ ಜೀವನದ ಒಂದು ಹಂತವಾಗಿದೆ. ನಾವು ಭವಿಷ್ಯದಲ್ಲಿ ಆಯ್ಕೆ ಮಾಡಿಕೊಳ್ಳುವ ಕ್ಷೇತ್ರ ಬಹಳ ಮುಖ್ಯವಾಗಿದೆ. ನಮ್ಮ ಗುರಿ ನಿರಂತರವಾಗಿರಬೇಕು. ಸಂಘಟನೆಗಳಲ್ಲಿ ವಿಶಿಷ್ಟ ಶಕ್ತಿ ಇದ್ದು, ಇದನ್ನು ಪ್ರತಿಯೊಬ್ಬರು ಅರ್ಥ ಮಾಡಿಕೊಂಡಾಗ ಮಾತ್ರ ಸಂಘಟನೆ ಮತ್ತಷ್ಟು ಬಲಿಷ್ಠಗೊಳ್ಳುತ್ತದೆ ಎಂದರು.

ವೇದಿಕೆ ಅಧ್ಯಕ್ಷೆ ಎಂ.ಎಸ್ ಸುಧಾಮಣಿ ಪ್ರಾಸ್ತಾವಿಕ ನುಡಿಗಳನ್ನಾಡಿ, ಸಂಘಟನೆಯಲ್ಲಿ ಮಹಿಳೆಯರು ನಿರಂತರವಾಗಿ ಕಾರ್ಯ ಚಟುವಟಿಕೆ ಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಪ್ರತಿ ಕಾರ್ಯಕ್ರಮ ಸಹ ಹೊಸ ಉತ್ಸಾಹ ತಂದು ಕೊಡುತ್ತಿವೆ. ವೇದಿಕೆ ಕಾರ್ಯ ಕ್ರಮಗಳಿಗೆ ಗೌರವಾಧ್ಯಕ್ಷರಾದ ಡಾ. ಅನುರಾಧಪಟೇಲ್‌ರವರು ಹೆಚ್ಚಿನ ಸಹಕಾರ, ಪೋತ್ಸಾಹ ನೀಡುತ್ತಿದ್ದಾರೆ. ಇದೀಗ ಪ್ರತಿಭಾವಂತ ವಿದ್ಯಾರ್ಥಿ ಗಳನ್ನು ವೇದಿಕೆ ವತಿಯಿಂದ ಸನ್ಮಾನಿಸಿ ಅಭಿನಂದಿಸುವ ಕಾರ್ಯಕ್ರಮ ಆಯೋಜಿಸಿರುವುದು ಹೆಮ್ಮೆಯ ವಿಚಾರವಾಗಿದೆ ಎಂದರು.

ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625ಕ್ಕೆ 625ಅಂಕ ಪಡೆದುಕೊಂಡು ತಾಲೂಕಿಗೆ ಕೀರ್ತಿ ತಂದಿರುವ ನಗರದ ಬಿ.ಎಚ್ ರಸ್ತೆ ಪೂರ್ಣಪ್ರಜ್ಞ ವಿದ್ಯಾಸಂಸ್ಥೆಯ ಪ್ರತೀಕ್ಷಾ ದಯಾನಂದ ಹಾಗು ನ್ಯೂಟೌನ್ ಶ್ರೀ ಆದಿಚುಂಚನಗಿರಿ ವಿದ್ಯಾಸಂಸ್ಥೆಯ ಪ್ರೇರಣಾ .ಬಿ ಅವರಿಗೆ 5 ಸಾವಿರ ರು. ಪ್ರೋತ್ಸಾಹ ಧನದೊಂದಿಗೆ  ಮತ್ತು  ಸೇಂಟ್ ಚಾರ್ಲ್ಸ್ ವಿದ್ಯಾಸಂಸ್ಥೆಯ ವಿಧಿತಾ ಅವರಿಗೆ 2 ಸಾವಿರ ರು. ಪ್ರೋತ್ಸಾಹ ಧನದೊಂದಿಗೆ 3 ವಿದ್ಯಾರ್ಥಿನಿಯ ರನ್ನು ಸನ್ಮಾನಿಸಿ ಗೌರವಿಸಲಾಯಿತು.

ವೇದಿಕೆ ಪ್ರಧಾನ ಕಾರ್ಯದರ್ಶಿ ಲತಾ ಪ್ರಭಾಕರ್ ನಿರೂಪಿಸಿದರು. ಉಪಾಧ್ಯಕ್ಷೆ ಪುಷ್ಪ ಕೇಶವಮೂರ್ತಿ, ಕಾರ್ಯದರ್ಶಿ ಶೀಲಾರವಿ ಮತ್ತು ಖಜಾಂಚಿ ಭಾರತಿಕುಮಾರ್ ಸೇರಿದಂತೆ ವೇದಿಕೆ ಸದಸ್ಯರು, ಪ್ರತಿಭಾವಂತ ವಿದ್ಯಾರ್ಥಿಗಳ ಪೋಷಕರು ಉಪಸ್ಥಿತರಿದ್ದರು.

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 

+91 9743225795

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು