ವಿಕಲಚೇತನ ಮಕ್ಕಳಲ್ಲಿರುವ ಶಕ್ತಿ ಯಾರಿಗೂ ಕಡಿಮೆ ಇಲ್ಲ : ಡಾ.ಟಿ. ನರೇಂದ್ರಭಟ್

 


ವಿಜಯಸಂಘರ್ಷ /ಭದ್ರಾವತಿ


ಈ ಬಾರಿ ಎಸ್‌ಎಸ್‌ಎಲ್‌ ಸಿ ಪರೀಕ್ಷೆಯಲ್ಲಿ ನ್ಯೂಟೌನ್ ತರಂಗ ಕಿವುಡು ಮಕ್ಕಳ ಶಾಲೆಯ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆದುಕೊಳ್ಳುವ ಮೂಲಕ ವಿಕಲಚೇತನರಲ್ಲೂ ವಿಶೇಷ ಶಕ್ತಿ ಇದ್ದು, ಯಾರಿಗೂ ಕಡಿಮೆ ಇಲ್ಲ ಎಂಬುದನ್ನು ಸಾಧಿಸಿ ತೋರಿಸಿದ್ದಾ ರೆಂದು ಶಾಲೆಯ ಅಧ್ಯಕ್ಷ ಡಾ. ಟಿ. ನರೇಂದ್ರ ಭಟ್ ಹೇಳಿದರು.

ಅವರು ಶಾಲೆಯಲ್ಲಿ ಹಮ್ಮಿಕೊಳ್ಳಲಾ ಗಿದ್ದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಶಿವಭದ್ರ ಟ್ರಸ್ಟ್ ವತಿಯಿಂದ ಆರಂಭಿ ಸಲಾಗಿರುವ ಈ ಶಾಲೆ ಕಳೆದ 3 ದಶಕಗಳಿಂದ ತನ್ನದೇ ಆದ ಕೊಡುಗೆಯನ್ನು ನೀಡಿದೆ. ಮಕ್ಕಳು ತಾಯಿಯ ಗರ್ಭದಲ್ಲಿ ಬೆಳವಣಿಗೆ ಹಂತದಲ್ಲಿದ್ದಾಗ ಒಂದು ವೇಳೆ ತಾಯಿ ಅನಾರೋಗ್ಯಕ್ಕೆ ಒಳಗಾಗಿ ಸೂಕ್ತ ಚಿಕಿತ್ಸೆ ಪಡೆಯದಿದ್ದಲ್ಲಿ ಅಥವಾ ಜನನ ಸಂದರ್ಭದಲ್ಲಿ ಉಂಟಾಗುವ ಕೆಲವು ನ್ಯೂನ್ಯತೆಗಳಿಂದಾಗಿ ಅಥವಾ ನಿರ್ಲಕ್ಷ್ಯತನದಿಂದಾಗಿ ವಿಕಲಚೇತನ ಮಕ್ಕಳು ಹುಟ್ಟುವುದು ಸಹಜ. ಇದು ಮಕ್ಕಳ ಶಾಪವಲ್ಲ. ಪೋಷಕರು ಇಂತಹ ಮಕ್ಕಳ ಮೇಲೆ ವಿಶೇಷ ಕಾಳಜಿವಹಿಸಬೇಕು.  ಟ್ರಸ್ಟ್ ಇಂತಹ ಮಕ್ಕಳ ಸೇವೆಯಲ್ಲಿ ನಿರಂತರವಾಗಿ ತೊಡಗಿಸಿಕೊಂಡು ಮುನ್ನಡೆಯು ವುದು ವಿಶೇಷವಾಗಿದೆ ಎಂದರು.

ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಒಟ್ಟು 7ಮಕ್ಕಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣ ರಾಗುವ ಮೂಲಕ ಶೇ.100ರಷ್ಟು ಫಲಿತಾಂಶ ತಂದು ಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮಕ್ಕಳ ಸಾಧನೆಯನ್ನು ಟ್ರಸ್ಟ್ ಅಭಿನಂದಿಸುತ್ತದೆ ಎಂದರು.


ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 

+91 9743225795

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು