ವಿಜಯ ಸಂಘರ್ಷ
ಕರ್ನಾಟಕ ಸ್ಟ್ರೇಟ್ ಕನ್ಸ್ಟ್ರಕ್ಷನ್ ವರ್ಕರ್ಸ್ ಸೆಂಟ್ರಲ್ ಯೂನಿಯನ್ ಹಾಗು ಶ್ರಮ ಶಕ್ತಿ ಅಸಂಘಟಿತ ಕಾರ್ಮಿಕರ ಒಕ್ಕೂಟದ ವತಿಯಿಂದ ಶುಕ್ರವಾರ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತವಾಗಿ ಗಾಲಿ ಕುರ್ಚಿ ಹಾಗು ಪ್ರೋಟಿನ್ ಪೌಂಡರ್ ಮತ್ತು ಮೊಟ್ಟೆ ವಿತರಣೆ ನಡೆಯಿತು.
ಜಿಲ್ಲಾಧಿಕಾರಿ ಡಾ. ಆರ್. ಸೆಲ್ವಮಣಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್, ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ಶಂಕರಪ್ಪ, ಕರ್ನಾಟಕ ಸ್ಟ್ರೇಟ್ ಕನ್ಸ್ಟ್ರಕ್ಷನ್ ವರ್ಕರ್ಸ್ ಸೆಂಟ್ರಲ್ ಯೂನಿಯನ್ ಜಿಲ್ಲಾ ಕಾರ್ಯಾಧ್ಯಕ್ಷ ಸುಂದರ್ ಬಾಬು, ತಾಲೂಕು ಅಧ್ಯಕ್ಷ ಚಂದ್ರಶೇಖರ್, ಗೌರವಾಧ್ಯಕ್ಷ ಸುರೇಶ್ಕುಮಾರ್, ಕಾರ್ಯಾಧ್ಯಕ್ಷ ಅಭಿಲಾಷ್, ಮನೋಹರ್, ಶಿವಣ್ಣಗೌಡ, ಆಶಾ ಕಾರ್ಯಕರ್ತೆ ಯರ ಸಂಘದ ಜಿಲ್ಲಾಧ್ಯಕ್ಷೆ ರಾಜೇಶ್ವರಿ, ತಾಲೂಕು ಅಧ್ಯಕ್ಷೆ ಚಂದ್ರಕಲಾ, ಪುಷ್ಪ, ಕವಿತಾ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಕೆ ಶ್ರೀನಾಥ್, ಯುವ ಘಟಕದ ಅಧ್ಯಕ್ಷ ವಿಜಯ್ ಸಾರಥಿ, ತಾಲೂಕು ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ರಾಮನಾಥ್ ಬರ್ಗೆ, ಪಿ. ಗಣೇಶ್ರಾವ್, ವಾಹನ ದುರಸ್ತಿ ಗಾರರ ಸಂಘದ ಅಧ್ಯಕ್ಷ ಬಾಬು ಮತ್ತಿತರರು ಉಪಸ್ಥಿತರಿದ್ದರು.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ
+91 9743225795