ಉಕ್ಕಿನ ನಗರದ ನಾಗರಾಜ ರವರಿಗೆ ಯೋಗ ಸ್ಪರ್ಧೆಯಲ್ಲಿ ಚಿನ್ನದ ಪದಕ

 


ವಿಜಯಸಂಘರ್ಷ /ಭದ್ರಾವತಿ


3ನೇ ಅಂತರಾಷ್ಟ್ರೀಯ ಯೋಗಾಸನ ಚಾಂಪಿಯನ್‌ಶಿಪ್ ಪಂದ್ಯಾವಳಿಯಲ್ಲಿ ನಗರದ ವಿವೇಕಾನಂದ ಯೋಗ ಟ್ರಸ್ಟ್‌ನ ಡಿ. ನಾಗರಾಜ್‌ರವರು ಚಿನ್ನದ ಪದಕ ಪಡೆದುಕೊಂಡಿದ್ದಾರೆ.

8ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಬೆಂಗಳೂರಿನ ಬಸವನಗುಡಿಯ ಬಿ.ಎಂ.ಎಸ್ ಇಂಜನಿಯರಿಂಗ್ ಕಾಲೇಜಿನಲ್ಲಿ ಯೋಗ ಗಂಗೋತ್ರಿ ವತಿಯಿಂದ ಆಯೋಜಿಸಲಾಗಿದ್ದ ಪಂದ್ಯಾವಳಿಯಲ್ಲಿ 60 ವರ್ಷ ಮೇಲ್ಪಟ್ಟವರ ವಿಭಾಗದ ಯೋಗ ಸ್ಪರ್ಧೆಯಲ್ಲಿ ಡಿ. ನಾಗರಾಜ್‌ರವರು ಭಾಗವಹಿಸಿ ಪ್ರಶಸ್ತಿ ಪಡೆದು ಕೊಂಡಿದ್ದಾರೆ.


ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 

+91 9743225795

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು