ವಿಜಯ ಸಂಘರ್ಷ
ಭದ್ರಾವತಿ: ಮಾನವನ ಉತ್ತಮ ಆರೋಗ್ಯಕ್ಕಾಗಿ ಪ್ರತಿನಿತ್ಯ ವಾಯುವಿಹಾರ ಅಗತ್ಯ. ಕನಿಷ್ಠ ಒಂದು ಘಂಟೆ ವ್ಯಾಯಾಮ, ವಾಕಿಂಗ್ ಮಾಡುವುದರಿಂದ ಅರೋಗ್ಯ ಸುಧಾರಣೆ ಕಾಣಬಹುದು ಎಂದು ನಗರದ ಪ್ರಾಥಮಿಕ ಅರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಕವಿತಾ ಹೇಳಿದರು.
ಅವರು ಗುರುವಾರ ನಗರದ ಜನ್ನಾಪುರ ಸಮುದಾಯ ಭವನದಲ್ಲಿ ಆಶಾ ಕಾರ್ಯಕರ್ತರಿಗೆ ಏರ್ಪಡಿಸಲಾಗಿದ್ದ ಅರೋಗ್ಯ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಜೆಡಿಯು ಮುಖಂಡ ಶಶಿಕುಮಾರ್ ಎಸ್ ಗೌಡ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಆಶಾ ಕಾರ್ಯಕರ್ತರ ಕರ್ತವ್ಯ ಶ್ಲಾಘನೀಯ. ಕೊರೊನಾ ಸಂದರ್ಭದಲ್ಲಿ ತಮ್ಮ ಪ್ರಾಣ ತ್ಯಾಗ ಮಾಡಿ ಕರ್ತವ್ಯ ನಿರ್ವಹಿಸಿದ್ದಾರೆ. ಸರ್ಕಾರ ಇವರ ಕರ್ತವ್ಯಕ್ಕೆ ಸ್ಪಂದಿಸುವ ಕಾರ್ಯ ಮಾಡಬೇಕಿದೆ. ಇದುವರೆಗೂ ಹೆಚ್ಚಿನ ವೇತನ ನೀಡದೆ, ಕೇವಲ ಗೌರವ ಧನ ನೀಡುತ್ತಿರುವುದು ದುರಂತ.
ಕೂಡಲೇ ಸರ್ಕಾರ ರಾಜ್ಯದ ಎಲ್ಲಾ ಆಶಾ ಕಾರ್ಯಕರ್ತರಿಗೆ ಕನಿಷ್ಠ ವೇತನ ನಿಗಧಿ ಮಾಡಲಿ, ಕನಿಷ್ಠ ಡಿ ಗ್ರೂಪ್ ನೌಕರರ ಸೌಲಭ್ಯ ಕಲ್ಪಿಸಿಕೊಡಲು ಮುಂದಾಗಲಿ. ಇಲ್ಲವಾದಲ್ಲಿ ರಾಜ್ಯದ್ಯಂತ ಜೆಡಿಯು ಪಕ್ಷದ ವತಿಯಿಂದ ಸರ್ಕಾರದ ವಿರುದ್ದ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಅರೋಗ್ಯಇಲಾಖೆ ವಸಂತ, ಚೇತನ್ ಸೇರಿದಂತೆ ಸಿಬ್ಬಂದಿಗಳು, ಆಶಾ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ
+919743225795