ಮುಸ್ಲಿಂ ಮಹಿಳೆಯರಿಗೆ ಪ್ರತ್ಯೇಕ ಕಾಲೇಜು ಸರ್ಕಾರ ದ ಮುಂದೆ ಪ್ರಸ್ತಾವನೆ ಇಲ್ಲ

 ವಿಜಯ ಸಂಘರ್ಷ 



ಭದ್ರಾವತಿ :ವಕ್ಫ್ ಮಂಡಳಿವತಿಯಿಂದ ಮುಸ್ಲಿಂ ಮಹಿಳೆಯರಿಗೆ ಪ್ರತ್ಯಕ ಕಾಲೇಜು ತೆರೆಯುವ ಬಗ್ಗೆ ಸರ್ಕಾರದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.



ಗುರುವಾರ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾ ಡಿದ ಅವರು, ವಕ್ಫ್ ಮಂಡಳಿ ಅಧ್ಯಕ್ಷರು ಮುಸ್ಲಿಂ ಮಹಿಳೆಯರಿಗೆ ಪ್ರತ್ಯೇಕವಾಗಿ ಕಾಲೇಜು ತೆರೆಯುವ ಬಗ್ಗೆ ನೀಡಿರುವ ಹೇಳಿಕೆಗೆ ಪ್ರತಿಕ್ರಿ ಯಿಸಿ, ಇದು ಕೇವಲ ಹೇಳಿಕೆ ಯಾಗಿದ್ದು, ಈ ರೀತಿಯ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ.  ಹಿಜಾಬ್ ನಿರ್ಣಯದ ನಂತರ ಮುಸ್ಲಿಂ ಹೆಣ್ಣುಮಕ್ಕಳ ಹಾಜರಾತಿ ಕಡಿಮೆಯಾಗಿದೆ ಎಂಬುದಕ್ಕೆ ಪ್ರತಿಕ್ರಯಿಸಿ, ಇದು ಸತ್ಯಕ್ಕೆ ದೂರ ವಾಗಿದ್ದು, ವಿದ್ಯಾರ್ಥಿನಿಯರ ಹಾಜರಾತಿ ಸಂಪೂರ್ಣವಾಗಿದೆ. ರಾಜ್ಯದ  ಸಾಕ್ಷರತಾ ದರ ಹೆಚ್ಚಾಗಿದ್ದು, ಅಲ್ಪಸಂಖ್ಯಾತ ಹೆಣ್ಣುಮಕ್ಕಳು ಆಸಕ್ತಿಯಿಂದ ವಿದ್ಯೆ ಕಲಿಯುತ್ತಿದ್ದಾರೆ. ಈ ವಿಷಯದಲ್ಲಿ ಯಾವುದೇ ಗೊಂದಲವಿಲ್ಲ ಎಂದರು.

ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳಲ್ಲಿ ನಿರ್ದಿಷ್ಠ ಸಮುದಾಯದ ಹೆಣ್ಣು ಮಕ್ಕಳ ಹಾಜರಾತಿ ಕಡಿಮೆ ಆಗಿದೆಯಾ ಎಂಬ ಮಾಧ್ಯಮದ ಪ್ರಶ್ನೆಗೂ ಉತ್ತರಿಸಿದ ಸಿಎಂ  ಹಿಜಾಬ್ ಸಂಘರ್ಷದಲ್ಲಿ ಹೆಣ್ಣು ಮಕ್ಕಳ ಹಾಜರಾತಿಯಲ್ಲಿ ಕಡಿಮೆ ಆಗಿಲ್ಲವೆಂದು ಸ್ಪಷ್ಟಪಡಿಸಿದ್ದಾರೆ.

ಕಾಲೇಜು ಸ್ಥಾಪನೆ ಕುರಿತಾಗಿ ಸರ್ಕಾರ ಮುಂದೆ ಯಾವ ಪ್ರಸ್ತಾವನೆ ಇಲ್ಲದಿರುವ ಕಾರಣ ಪ್ರಮೋದ್ ಮುತಾಲಿಕ್ ಸೇರಿದಂತೆ ಯಾವುದೇ ಸಂಘಟನೆಯ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಲಾರೆ ಎಂದರು.

ನಂತರ ತಾಲೂಕಿನ ಕಾರೇಹಳ್ಳಿ ಬಿಜಿಎಸ್ ಕೇಂದ್ರೀಯ ವಿದ್ಯಾಲಯ ದಲ್ಲಿ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ವತಿಯಿಂದ ಹಮ್ಮಿಕೊಳ್ಳಲಾ ಗಿದ್ದ ಅಂತರ್ ಶಾಲಾ ಕಾಲೇಜುಗಳ ರಜತ ಚುಂಚಾದ್ರಿ ಕ್ರೀಡೋತ್ಸವ, 25ನೇ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.


ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ +919743225795

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು