ವಿಜಯ ಸಂಘರ್ಷ
ಭದ್ರಾವತಿ: ಕೇಂದ್ರ ಉಕ್ಕು ಪ್ರಾಧಿಕಾ ರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಗೆ ಅಗತ್ಯ ವಿರುವ ಬಂಡವಾಳ ತೊಡಗಿಸಿ ಅಭಿವೃದ್ಧಿಪಡಿಸುವಂತೆ ಸಂಸದ ಬಿ.ವೈ ರಾಘವೇಂದ್ರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರವರಿಗೆ ಮನವಿ ಮಾಡಿದ್ದಾರೆ.
ನವದೆಹಲಿ ಸಚಿವರ ಸಂಸತ್ತಿನ ಕಛೇರಿ ಯಲ್ಲಿ ಭೇಟಿಯಾಗಿ ಉಕ್ಕು ಪ್ರಾಧಿ ಕಾರದ ಮೂಲಕ ವಿಐಎಸ್‌ಎಲ್ ಕಾರ್ಖಾನೆಗೆ ಅಗತ್ಯವಿರುವ ಬಂಡ ವಾಳ ತೊಡಗಿಸುವ ಮೂಲಕ ಶಿವಮೊಗ್ಗ ಜಿಲ್ಲೆಯ ಆರ್ಥಿಕ ಬೆಳವ ಣಿಗೆಗೆ ಸಹಕರಿಸುವಂತೆ ಕೋರಿದರು.
ಕೇಂದ್ರ ಸರ್ಕಾರ ಇತ್ತೀಚೆಗೆ ಕಾರ್ಖಾನೆ ಯನ್ನು ಖಾಸಗೀಕರಣ ಗೊಳಿಸುವ ಪ್ರಕ್ರಿಯೆ ಕೈಬಿಟ್ಟಿದ್ದು, ಈ ನಡುವೆ ಉಕ್ಕು ಪ್ರಾಧಿಕಾರ ಕಾರ್ಖಾನೆಗೆ ಅಗತ್ಯವಿರುವ ಬಂಡವಾಳ ತೊಡಗಿ ಸಲು ಮೀನಾಮೇಷ ಮಾಡುತ್ತಿದೆ. ಈ ಹಿನ್ನಲೆಯಲ್ಲಿ ಕೆಲವು ದಿನಗಳಿಂದ ಪುನಃ ಹೋರಾಟಗಳು ಆರಂಭ ಗೊಂಡಿವೆ.
ಯಾವುದೇ ಕಾರಣಕ್ಕೂ ಕಾರ್ಖಾನೆ ಖಾಸಗಿಕರಣ ಕೈ ಬಿಡಬೇಕು ಅಗತ್ಯ ಬಂಡವಾಳ ತೊಡಗಿಸಿ ಅಭಿವೃದ್ಧಿ ಪಡಿಸುವಂತೆ ಕಾರ್ಮಿಕ ಸಂಘದ ಮನವಿ ಮೇರೆಗೆ ವಿತ್ತ ಸಚಿವರಿಗೆ ಮನವಿ ಮಾಡಲಾಯಿತು.
ಈ ಸಂದರ್ಭದಲ್ಲಿ ಕಾರ್ಮಿಕ ಸಂಘದ ಅಧ್ಯಕ್ಷ ಜೆ. ಜಗದೀಶ್, ಉಪಾಧ್ಯಕ್ಷೆ ಬಿ. ಸಿ. ಶೈಲಾಶ್ರೀ,ಪ್ರಧಾನ ಕಾರ್ಯದರ್ಶಿ ಬಸಂತ್ ಕುಮಾರ್, ಕಾರ್ಯದರ್ಶಿ ಕೆ. ಆರ್.ಮನು,ಖಜಾಂಚಿ ಮೋಹನ್ ಇದ್ದರು.