ವಿಜಯ ಸಂಘರ್ಷ
ಭದ್ರಾವತಿ: ಶಿಕ್ಷಣ ಸಂಸ್ಥೆಗಳ ಮೂಲಕ ಮಕ್ಕಳನ್ನು ಉತ್ತಮ ಪ್ರಜೆಗಳನ್ನಾಗಿ ರೂಪಿಸುವ ಸೇವಾ ಕಾರ್ಯದ ಮೂಲಕ ಬದುಕನ್ನು ಸಾರ್ಥಕಗೊಳಿ ಸಿಕೊಳ್ಳಬೇಕೆಂದು ತರುಣ ಭಾರತಿ ವಿಶ್ವಸ್ಥ ಮಂಡಳಿ ಗೌರವಾಧ್ಯಕ್ಷ ಡಾ. ಮಹಾಬಲೇಶ್ವರ ಹೇಳಿದರು.
ಅವರು ನ್ಯೂಟೌನ್ ಪ್ರಶಾಂತಿ ಸೇವಾ ಟ್ರಸ್ಟ್, ಶ್ರೀ ಸತ್ಯಸಾಯಿ ಸಮಗ್ರ ಶಿಕ್ಷಣ ಸಂಸ್ಥೆ ಸಹಯೋಗದೊಂದಿಗೆ ಪ್ರಶಾಂತಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಈಶ್ವರಮ್ಮ ಪ್ರೌಢಶಾಲೆ-ಕನ್ನಡ ಮತ್ತು ಆಂಗ್ಲ ಮಾಧ್ಯಮ, ಶ್ರೀ ಸತ್ಯ ಸಾಯಿ ಜ್ಞಾನಪೀಠ ಸಿ.ಬಿ.ಎಸ್.ಇ ವತಿಯಿಂದ ಮೊದಲಬಾರಿಗೆ ಹಮ್ಮಿಕೊಳ್ಳಲಾಗಿದ್ದ ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ಶಿಕ್ಷಣ ಸಂಸ್ಥೆಗಳನ್ನು ಮುನ್ನಡೆಸು ವವರು ತಮ್ಮನ್ನು ತಾವು ಸೇವಾ ಮನೋಭಾವದಲ್ಲಿ ತೊಡಗಿಸಿ ಕೊಳ್ಳುವ ಜೊತೆಗೆ ಸಂಸ್ಕಾರಯುತ ವಾದ, ಮೌಲ್ಯಯುತವಾದ ಶಿಕ್ಷಣ ವನ್ನು ಮಕ್ಕಳಿಗೆ ನೀಡುವ ಜೊತೆಗೆ ಉತ್ತಮ ಸಮಾಜ ನಿರ್ಮಾಣಕ್ಕೆ ಕಾರಣಕರ್ತರಾಗಬೇಕೆಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಮಾತನಾಡಿ, ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಶಿಕ್ಷಣ ಸಂಸ್ಥೆಗಳ ಪಾತ್ರ ಪ್ರಮುಖವಾಗಿದೆ. ಈ ನಿಟ್ಟಿನಲ್ಲಿ ಶ್ರೀ ಸತ್ಯ ಸಾಯಿ ಸಮಗ್ರ ಶಿಕ್ಷಣ ಸಂಸ್ಥೆ ಶಿಕ್ಷಣ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ
+919743225795