ನೊಂದವರಿಗೆ ರಕ್ಷಣೆ ನೀಡದ ಗ್ರಾಮಾಂತರ ಇನ್ಸ್ ಪೆಕ್ಟರ್ ರನ್ನು ಅಮಾನುತುಗೊಳಿಸಿ

 ವಿಜಯ ಸಂಘರ್ಷ



ಭದ್ರಾವತಿ:  ಗ್ರಾಮಾಂತರ ಪೊಲೀಸ್ ವೃತ್ತ ನಿರೀಕ್ಷಕರು ಎ.ಸಿ ನ್ಯಾಯಾಲಯ ದ ಆದೇಶ ಕುರಿತು ನಿರ್ಲಕ್ಷ್ಯತನದಿಂದ ವರ್ತಿಸುವ ಜೊತೆಗೆ ಹಲ್ಲೆ ಮಾಡಿ ಕೊಲೆ ಬೆದರಿಕೆ ಹಾಕಿರುವವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೆ ದೂರು ದಾರರಿಗೆ ಅನ್ಯಾಯ ಮಾಡಿದ್ದಾರೆಂದು ಆರೋಪಿಸಿ ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ತಾಲೂಕು ಕಛೇರಿ ಮುಂಭಾಗ ಹಮ್ಮಿಕೊಳ್ಳಲಾಗಿರುವ ಅನಿರ್ಧಿಷ್ಟ ಧರಣಿ ಸತ್ಯಾಗ್ರಹ ಶನಿವಾರ ಮೂರನೇ ದಿನಕ್ಕೆ ಕಾಲಿಟ್ಟಿದೆ.



ಈ ಸಂದರ್ಭದಲ್ಲಿ ಮಾತನಾಡಿದ ಮಾದಿಗ ಸಮಾಜದ ರಾಜ್ಯಾಧ್ಯಕ್ಷ ಮಂಜುನಾಥ್, ತಾಲೂಕಿನ ಕಸಬಾ 2 ನೇ ಹೋಬಳಿ, ಬಾಳೇಮಾರನಹಳ್ಳಿ, ಗ್ರಾಮದ ಸರ್ವೆ ನಂ.39 ರಲ್ಲಿ 2 ಎಕರೆ ಮತ್ತು 30 ಗುಂಟೆ ಕರಾಬು ಜಮೀನು ಇದ್ದು, ಈ ಜಮೀನು ತಿಮ್ಮಾಭೋವಿ ಬಿನ್ ಬಸವಾ ಭೋವಿ ಇವರ ಹೆಸರಿಗೆ 1959-60 ರಲ್ಲಿ ಸಾಗುವಳಿ ಚೀಟಿ ಮಂಜೂರು ಆಗಿದ್ದು, ತಿಮ್ಮಾಭೋವಿ ಯವರು ಮರಣ ಹೊಂದಿದ ನಂತರ 2011 ರಲ್ಲಿ ಪಿಟಿಸಿಎಲ್ ಕಾಯ್ದೆ ಯಂತೆ ಇವರ ಪತ್ನಿ ಗಿಡ್ಡಮ್ಮ ಅವರ ಹೆಸರಿಗೆ ಪೌತಿ ಖಾತೆ ದಾಖಲಾಗಿದೆ.
ಇದರ ಅನ್ವಯ ಗಿಡ್ಡಮ್ಮ ಅವರ ಮರಣದ ನಂತರ ಈ ಸ್ವತ್ತು ಉಚ್ಛ ನ್ಯಾಯಾಲಯ, ಉಪವಿಭಾಗಾಧಿ ಕಾರಿಗಳ ಮತ್ತು ಜಿಲ್ಲಾಧಿಕಾರಿಗಳ ಆದೇಶದಂತೆ ಮಲ್ಲಮ್ಮ, ಗಣೇಶಪ್ಪ, ಪಾರ್ವತಮ್ಮ, ಬಾಬು ಭೋವಿ, ಮಂಜಮ್ಮರವರ ಹೆಸರಿಗೆ ಪೌತಿ ಖಾತೆಯ ಆಧಾರದ ಮೇರೆಗೆ ಖಾತೆ ದಾಖಲು ಮಾಡಲು ಅರ್ಹರಾಗಿ ರುತ್ತಾರೆ. ಈ ರೀತಿಯ ಎಲ್ಲಾ ದಾಖಲೆಗಳನ್ನು ಗ್ರಾಮಾಂತರ ಪೊಲೀಸ್ ನಿರೀಕ್ಷಕರಿಗೆ ಮಾಹಿತಿ ನೀಡಿದ್ದರು ಇನ್ಸ್ ಪೆಕ್ಟರ್ ಉಡಾಫೆ ಉತ್ತರ ನೀಡಿದ್ದಾರೆ ಎಂದು ಆರೋಪಿಸಿದರು.
ಇಲ್ಲಿಯವರೆಗೆ ಪ್ರತಿಭಟನಾ ಸ್ಥಳಕ್ಕೆ ಯಾವೊಬ್ಬ ಅಧಿಕಾರಿಗಳು ಬಾರದೆ ಇರುವುದು ಉಳ್ಳವರ ಪರ ಅಧಿಕಾರಿಗಳು ಎನ್ನುವಂತಾಗಿದೆ. ಕೂಡಲೇ ನೊಂದ ದಲಿತ ಕುಟುಂಬಸ್ಥರ ಸಮಸ್ಯೆಗೆ ಸ್ಪಂದಿಸದ ಪೊಲೀಸ್ ಅಧಿಕಾರಿಯನ್ನು ಅಮಾನತ್ತು ಪಡಿಸುವಂತೆ ಆಕ್ರೋಶ ವ್ಯಕ್ತಪಡಿಸಿದರು.
ಡಿಎಸ್‌ಎಸ್ ಜಿಲ್ಲಾ ಸಂಯೋಜಕ ಆರ್. ಸುರೇಶ್, ಡಿಎಸ್‌ಎಸ್ ಭೀಮಾ ವಾದ ಜಿಲ್ಲಾಧ್ಯಕ್ಷ ಕುಬೇಂದ್ರಪ್ಪ, ಡಿಎಸ್‌ಎಸ್ ಅಂಬೇಡ್ಕರ್‌ವಾದ ತಾಲೂಕು ಪ್ರಧಾನ ಸಂಚಾಲಕ ಎಸ್. ಪುಟ್ಟರಾಜು, ವೆಂಕಟೇಶ್ ಹಾಗು ಗಣೇಶಪ್ಪ ಕುಟುಂಬಸ್ಥರು ಸೇರಿದಂತೆ ಇನ್ನಿತರರು ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.


ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ

+919743225795

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು