ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಅವರ ಹೆಸರು ನಾಮಕರಣಗೊಳಿಸಿ

 ವಿಜಯ ಸಂಘರ್ಷ



ಭದ್ರಾವತಿ: ಜಿಲ್ಲೆಯಲ್ಲಿ ನಿರ್ಮಾಣ ಗೊಳ್ಳುತ್ತಿರುವ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಅವರ ಹೆಸರು ನಾಮಕರಣಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ(ಕೆಆರ್‌ಎಸ್) ಗುರುವಾರ ತಹಸೀಲ್ದಾರ್ ಮೂಲಕ ಮುಖ್ಯ ಮಂತ್ರಿಗಳಿಗೆ ಮನವಿ ಸಲ್ಲಿಸಿದೆ.


ಪಕ್ಷದ ವತಿಯಿಂದ ರಾಷ್ಟ್ರಕವಿ ಕುವೆಂಪು ಅವರ 119 ನೇ ಜನ್ಮದಿನ ಆಚರಿಸಲಾಗುತ್ತಿದ್ದು, ಕನ್ನಡನಾಡು ಅದರಲ್ಲೂ ಶಿವಮೊಗ್ಗ ಜಿಲ್ಲೆಗೆ ಕುವೆಂಪು ಅವರ ಕೊಡುಗೆ ಅನನ್ಯ ವಾಗಿದೆ. ಜನತೆ ಪರವಾಗಿ ಹುಟ್ಟು ಹಬ್ಬದ ಶುಭಾಶಯಗಳೊಂದಿಗೆ ಅವರ ಹೆಸರನ್ನು ಅಜರಾಮರ ವಾಗಿಸುವ ನಿಟ್ಟಿನಲ್ಲಿ ನೂತನ ವಿಮಾನ ನಿಲ್ದಾಣಕ್ಕೆ ಕುವೆಂಪು ಹೆಸರನ್ನು ನಾಮಕರಣಗೊಳಿಸುವಂತೆ ಮನವಿಯಲ್ಲಿ ಕೋರಿದೆ.


ತಹಸೀಲ್ದಾರ್ ಗ್ರೇಡ್-2 ರಂಗಮ್ಮ ಮೂಲಕ  ಮನವಿ ಸಲ್ಲಿಸಲಾಯಿತು. ಪಕ್ಷದ ಅಧ್ಯಕ್ಷ ನಾಗರಾಜ್‌ರಾವ್ ಶಿಂಧೆ, ಯುವ ಘಟಕದ ಅಧ್ಯಕ್ಷ ಅರಳಿಹಳ್ಳಿ ತ್ಯಾಗರಾಜ್, ಕಾರ್ಯ ದರ್ಶಿ ಶಬರೀಶ್, ಮುಖಂಡರಾದ ತೀರ್ಥಕುಮಾರ್, ರಾಜೇಂದ್ರ, ವೆಂಕಟೇಶ್, ಆನಂದ್, ವಿನೋದ್ ಮತ್ತಿತರರಿದ್ದರು.


ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ

+919743225795

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು