19 ವರ್ಷದ ಯುವಕನಿಗೆ 20 ವರ್ಷ ಜೈಲು ಏಕೆ..ಸ್ಟೋರಿ ಓದಿ...?

 ವಿಜಯ ಸಂಘರ್ಷ



ಭದ್ರಾವತಿ: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಯುವಕನಿಗೆ  ಶಿವಮೊಗ್ಗ ನ್ಯಾಯಾಲಯ ಕಠಿಣ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿದೆ.


ಭದ್ರಾವತಿ ತಾಲೂಕಿನ 19 ವರ್ಷದ ಯುವಕನೊಬ್ಬ 6 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ. ಈ ಸಂಬಂಧ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸ್ ಇನ್ಸ್ ಪೆಕ್ಟರ್ ಲಕ್ಷ್ಮೀಪತಿ ಅವರು ನ್ಯಾಯಾಲಯಕ್ಕೆ  ದೋಷಾ ರೋಪ ಪಟ್ಟಿ ಸಲ್ಲಿಸಿದ್ದರು.


ಶಿವಮೊಗ್ಗ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯದ (ಪೋಕ್ಸೋ ವಿಭಾಗ) ನ್ಯಾಯಾಧೀಶರಾದ ನ್ಯಾ. ಜೆ.ಎಸ್.ಮೋಹನ್ ಅವರು ವಿಚಾರಣೆ ನಡೆಸಿದರು. ಆರೋಪ ಸಾಬೀತಾದ ಹಿನ್ನೆಲೆ 19 ವರ್ಷದ ಯುವಕನಿಗೆ ಶುಕ್ರವಾರ ಶಿಕ್ಷೆ ಪ್ರಕಟಿಸಿ ದ್ದಾರೆ ಎಂದು ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.


ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಹಿನ್ನೆಲೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 1 ಲಕ್ಷ ರೂ. ದಂಡ ವಿಧಿಸಲಾಗಿದೆ. ದಂಡ ಕಟ್ಟಲು ವಿಫಲವಾದರೆ 6 ತಿಂಗಳು ಸಾದಾ ಶಿಕ್ಷೆ ನೀಡಿ ಆದೇಶ ಹೊರಡಿಸಲಾಗಿದೆ. ಸರ್ಕಾರಿ ಅಭಿಯೋಜಕರಾಗಿ ಹರಿಪ್ರಸಾದ್ ಅವರು ವಾದ ಮಂಡಿಸಿದ್ದರು.


ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ

+919743225795

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು