ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ 2 ನೇ ಅವಧಿಗೆ ಪುನರ್ ಆಯ್ಕೆ

 ವಿಜಯ ಸಂಘರ್ಷ



ಭದ್ರಾವತಿ: ನಗರಸಭೆಯಲ್ಲಿ ನಡೆದ ಸ್ಥಾಯಿ ಸಮಿತಿ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಕೆ. ಸುದೀಪ್‌ಕುಮಾರ್ ಮರು ಆಯ್ಕೆಯಾಗಿದ್ದಾರೆ.


    ನಗರಸಭೆಯಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿರುವ ಕಾಂಗ್ರೆಸ್ ಅಧ್ಯಕ್ಷ, ಉಪಾಧ್ಯಕ್ಷ ಮತ್ತು ಸ್ಥಾಯಿ ಸಮಿತಿ ಅಧ್ಯಕ್ಷರ ಅಧಿಕಾರವನ್ನು ಒಪ್ಪಂದದಂತೆ ಹಂಚಿಕೆ ಮಾಡಿ ಕೊಂಡಿದ್ದು, ಮೊದಲ ಅವಧಿಗೆ ಕೆ. ಸುದೀಪ್‌ಕುಮಾರ್ ಆಯ್ಕೆಯಾಗಿ ದ್ದರು. 1 ವರ್ಷ ಅವಧಿ ಅಧಿಕಾರ ಹಂಚಿಕೆ ಮಾಡಲಾಗಿತ್ತು. ಅದರಂತೆ 1 ವರ್ಷ ಅಧಿಕಾರ ನಡೆಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಈ ಹಿನ್ನಲೆ ಯಲ್ಲಿ ಚುನಾವಣೆ ನಡೆಯಿತು.


    ಕಾಂಗ್ರೆಸ್ ಪಕ್ಷದ ಸದಸ್ಯರು ಪ್ರಸ್ತುತ ಕ್ಷೇತ್ರದಲ್ಲಿ ರಾಜಕೀಯ ಬೆಳವಣಿಗೆ ಗಳನ್ನು ಗಮನಸಿ ಕೆ. ಸುದೀಪ್‌ ಕುಮಾರ್‌ ರವರನ್ನು 2ನೇ ಅವಧಿಗೂ ಮುಂದುವರೆಸುವುದು ಸೂಕ್ತ ಎಂಬ ತೀರ್ಮಾನ ಕೈಗೊಂಡು ಪುನಃ 2ನೇ ಅವಧಿಗೂ ಆಯ್ಕೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್ ಪಕ್ಷದಿಂದ ವಿಜಯರವರು ನಾಮಪತ್ರ ಸಲ್ಲಿಸಿದ್ದರು. ಕೆ. ಸುದೀಪ್‌ ಕುಮಾರ್‌ರವರು 6 ಮತಗಳನ್ನು ಹಾಗು ವಿಜಯರವರು 5 ಮತಗಳನ್ನು ಪಡೆದುಕೊಂಡಿದ್ದಾರೆ.


    2ನೇ ಅವಧಿಗೆ ಆಯ್ಕೆಯಾದ ಸುದೀಪ್‌ಕುಮಾರ್‌ರವರನ್ನು ಅಧ್ಯಕ್ಷೆ ಅನುಸುಧಾ ಮೋಹನ್ ಪಳನಿ, ಉಪಾಧ್ಯಕ್ಷ ಚನ್ನಪ್ಪ ಹಾಗು ಸದಸ್ಯರು, ನಗರಸಭೆ ಅಧಿಕಾರಿಗಳು, ಸಿಬ್ಬಂದಿ ಗಳು, ಪೌರಕಾರ್ಮಿಕರು ಅಭಿನಂದಿಸಿದ್ದಾರೆ.


ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ

+919743225795

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು