ವಿಜಯ ಸಂಘರ್ಷ
ಶಿವಮೊಗ್ಗ : ನಗರದ ಮೇಲಿನ ಹನಸವಾಡಿಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮಧ್ಯಾಹ್ನ ಊಟದ ಬಳಿಕ 30 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿರುವ ಘಟನೆ ನಡೆದಿರುವುದಾಗಿ ವರದಿಯಾಗಿದೆ.
ಅಸ್ವಸ್ಥರಾದ ಮಕ್ಕಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾ ಗಿದ್ದು, ಐದಕ್ಕೂ ಹೆಚ್ಚು ವೈದ್ಯರು ಹಾಗು ಸಿಬ್ಬಂದಿ ಮಕ್ಕಳ ಆರೋಗ್ಯ ತಪಾಸಣೆಯನ್ನು ನಡೆಸುತ್ತಿದ್ಧಾರೆ.
ಸುಮಾರು 250 ಕ್ಕೂ ಹೆಚ್ಚು ಮಕ್ಕಳನ್ನು ಹೊಂದಿರುವ ವಸತಿ ಶಾಲೆಯಲ್ಲಿ ಮಕ್ಕಳು ಊಟವಾದ ಕ್ರಮೇಣ ಅಸ್ವಸ್ಥರಾಗಿದ್ದಾರೆ.
ಮಕ್ಕಳಲ್ಲಿ ವಾಂತಿ ಸಮಸ್ಯೆ ಕಾಣಿಸಿ ಕೊಂಡಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಘಟನೆಗೆ ಕಾರಣ ವೇನು ಎಂಬುದು ಸ್ಪಷ್ಟವಾಗಿಲ್ಲ. ಸ್ಥಳಕ್ಕೆ ಅಧಿಕಾರಿಗಳು ದೌಡಾಯಿ ಸಿದ್ದು, ಮಕ್ಕಳ ಆರೋಗ್ಯದ ಬಗ್ಗೆ ಗಮನ ವಹಿಸಿದ್ಧಾರೆ. ಶಾಲೆಯ ಶಿಕ್ಷಕ ವೃಂದ ಮೆಗ್ಗಾನ್ ಆಸ್ಪತ್ರೆಯಲ್ಲಿ ಮೊಕ್ಕಾಂ ಹೂಡಿದೆ.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ
+919743225795