ವಿಜಯ ಸಂಘರ್ಷ
ಭದ್ರಾವತಿ: ಪ್ರಾಮಾಣಿಕ, ಜನಪರ ಕಾಳಜಿ ಹೊಂದಿರುವ ವಿದ್ಯಾವಂತ ಮಹಿಳೆಯರಿಗೆ ರಾಜಕೀಯ ರಂಗ ಪ್ರವೇಶಿಸಲು 'ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ' ಮುಕ್ತ ಅವಕಾಶ ನೀಡಲಿ ದ್ದು, ಆಸಕ್ತ ಸ್ವಾಭಿಮಾನಿ ಕನ್ನಡದ ಮಹಿಳೆಯರು ಪಕ್ಷ ಸೇರ್ಪಡೆಗೆ ಮುಂದಾಗುವಂತೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಬೆಂಗಳೂರು ನಗರ ಕಾರ್ಯದರ್ಶಿ, ಮಹಿಳಾ ಉಸ್ತುವಾರಿ ಜನನಿ ವತ್ಸಲಾ ಹೇಳಿದರು.
ಅವರು ಪತ್ರಿಕಾಗೋಷ್ಠಿಯಲ್ಲಿ ಮಾತ ನಾಡಿ, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸುವ ಮೂಲಕ ವಿಧಾನಸಭೆ ಯಲ್ಲಿ ಮಹಿಳಾ ಶಕ್ತಿ ವೃದ್ದಿಸಬೇಕಾ ಗಿದೆ. ಈ ಹಿನ್ನಲೆಯಲ್ಲಿ ಪಕ್ಷವು ಮಹಿಳೆ ಯರನ್ನು ರಾಜಕೀಯಕ್ಕೆ ಆಹ್ವಾನಿಸು ತ್ತಿದೆ. ಪ್ರ್ರಾಮಾಣಿಕ ರಾಜಕಾರಣ ಮಾಡಬಯಸುವ ಅರ್ಹ ಮಹಿಳೆ ಯರು ಪಕ್ಷಕ್ಕೆ ಸೇರ್ಪಡೆಕೊಳ್ಳ ಬೇಕೆಂದು ಮನವಿ ಮಾಡಿದರು.
ಇತ್ತೀಚೆಗೆ ರಾಜಕೀಯ ಕ್ಷೇತ್ರದಲ್ಲಿ ಮಹಿಳೆಯರು ಅಷ್ಟಾಗಿ ಕಂಡು ಬರುತ್ತಿಲ್ಲ. ಪ್ರಸ್ತುತ ಜೆಡಿಎಸ್, ಕಾಂಗ್ರೆಸ್, ಬಿಜೆಪಿಯಂತಹ ರಾಜಕೀಯ ಪಕ್ಷಗಳು ಮಹಿಳಾ ಸಬಲೀಕರಣಕ್ಕೆ ಒತ್ತು ನೀಡುತ್ತಿಲ್ಲ. ಮಹಿಳೆಯರಿಗೆ ಲಭಿಸಬೇಕಾದ ರಾಜಕೀಯ ಸ್ಥಾನಮಾನಗಳನ್ನು ನೀಡುತ್ತಿಲ್ಲ. ಮಹಿಳಾ ಮೀಸಲಿರುವ ಕಡೆಯಲ್ಲಿಯೂ ಕೂಡ ಪುರುಷ ಪ್ರಾಬಲ್ಯವೇ ನಡೆಯುತ್ತಿದೆ. ಶಾಸನ ಸಭೆಯಲ್ಲಿ ಮಹಿಳೆಯರ ಬಗ್ಗೆ ಧ್ವನಿ ಎತ್ತುವಂತಹ ಮಹಿಳಾ ನಾಯಕಿ ಯರು ಬೇಕಾಗಿದ್ದಾರೆ. ಈ ನಿಟ್ಟಿನಲ್ಲಿ ರೈತಪರ, ಹೋರಾಟಪರ ಮಹಿಳೆ ಯರು ಕೆಆರ್‌ಎಸ್ ಪಕ್ಷಕ್ಕೆ ಸೇರ್ಪಡೆ ಗೊಳ್ಳುವುದು ಅವಶ್ಯಕವಾಗಿದೆ ಎಂದರು.
ಆರಂಭದಲ್ಲಿ ಕೇವಲ 20 ಕಾರ್ಯ ಕರ್ತರಿಂದ ಆರಂಭವಾದ ಪಕ್ಷದಲ್ಲಿ ಈಗ 30 ಸಾವಿರ ಕಾರ್ಯಕರ್ತರು ಇದ್ದಾರೆ. ಪಕ್ಷದ ನಿಲುವುಗಳಿಗೆ ಬದ್ಧರಾಗಿ ಸ್ವಚ್ಛ, ಜನಪರ ರಾಜಕಾ ರಣ ನಡೆಸಲು ನಿತ್ಯ ಸಾಕಷ್ಟು ಜನರು ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ. ಇದಕ್ಕೆ ಪೂರಕವಾಗಿ 'ಸ್ವಾಭಿಮಾನಿ ಕನ್ನಡದ ಹೆಣ್ಣೇ ಪವಿತ್ರ ರಾಜಕಾರಣಕ್ಕೆ ಮುಂದಾಗುವ' ಅಭಿಯಾನ ಆರಂಭಿಸಿದ್ದು, ಎರಡು ಹಂತದ ಅಭಿಯಾನ ಮುಕ್ತಾಯಗೊಳಿಸಲಾಗಿದೆ. ಇದೀಗ 3ನೇ ಹಂತದಲ್ಲಿ ಶಿವಮೊಗ್ಗ, ಚಿಕ್ಕಮಗ ಳೂರು, ದಾವಣಗೆರೆ, ಚನ್ನಗಿರಿ, ಚಿತ್ರದುರ್ಗ ನಗರಗಳಲ್ಲಿ ಅಭಿಯಾನ ನಡೆಸಲಾಗುತ್ತಿದೆ.
ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಮಹಿಳಾ ಘಟಕದ ಜಂಟಿ ಕಾರ್ಯದರ್ಶಿ ಪುಷ್ಪ, ರಾಮೇಶ್ವರಿ, ಅಂಬಿಕಾ, ಆನೇಕಲ್ ಜಯರಾಂ, ನಾಗರಾಜ್‌ರಾವ್ ಸಿಂಧೆ, ತ್ಯಾಗರಾಜ್, ಶಬರೀಶ್, ಸುಮಿತ್ರಾ ಬಾಯಿ, ಕಲಾವತಿ, ನಾಗರಾಜ್, ನಾಗರತ್ನಮ್ಮ ಇತರರು ಇದ್ದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ
+919743225795