ಶ್ರೀಗಳ ಜನ್ಮದಿನದಿನ: ಆಸ್ಪತ್ರೆಯಲ್ಲಿ ಹಣ್ಣು ಹಾಲು ವಿತರಣೆ

 ವಿಜಯ ಸಂಘರ್ಷ



ಭದ್ರಾವತಿ: ಬಾಳೆಹೊನ್ನೂರು ಶ್ರೀ ಶ್ರೀಮದ್ ರಂಭಾಪುರಿ 1008 ಜಗದ್ಗುರು ಶ್ರೀ ವೀರಸೋಮೇಶ್ವರ ರಾಜದೇಶಿ ಕೇಂದ್ರ ಭಗವತ್ಪಾದರ 67ನೇ ಜನ್ಮದಿನೋತ್ಸವದ ಅಂಗವಾಗಿ

ಶನಿವಾರ ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ವತಿಯಿಂದ ಸರ್ಕಾರಿ ಆಸ್ಪತ್ರೆ ರೋಗಿಗಳಿಗೆ ಹಣ್ಣು ಹಾಲು ಬ್ರೆಡ್ ವಿತರಿಸಲಾಯಿತು. ಬಿಳಿಕಿ ಹಿರೇಮಠದ ಶ್ರೀ ರಾಚೋಟೇ ಶ್ವರ ಶಿವಾಚಾರ್ಯ ಸ್ವಾಮೀಜಿಗಳು ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ವಹಿಸಿದ್ದರು.

ಈ ಸಂದರ್ಭದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭೆ ಯ ಅಧ್ಯಕ್ಷ ಸುರೇಶಯ್ಯ, ನಗರಸಭಾ ಸದಸ್ಯ ಬಿ.ಕೆ.ಮೋಹನ್ ಉದ್ಯಮಿ ಬಿ.ಕೆ.ಜಗನ್ನಾಥ್, ಮಹಾಸಭೆಯ ಮಾಜಿ ಅಧ್ಯಕ್ಷ ಸಿದ್ದಲಿಂಗಯ್ಯ, ಉಪಾಧ್ಯಕ್ಷ ಎಸ್.ವಾಗೀಶ್ ತಾಲೂ ಕು ಸೇವಾ ವೀರಶೈವ ಸಮಾಜದ ಅಧ್ಯಕ್ಷ ರಾಜಣ್ಣ,ಮಹಿಳಾ ಘಟಕದ ಅಧ್ಯಕ್ಷರಾದ ರೂಪಾ ನಾಗರಾಜ್, ಸಾರ್ವಜನಿಕ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಎಲ್ಲಾ ವೈದ್ಯರು ಮತ್ತು ಸಿಬ್ಬಂದಿಗಳು ಸೇರಿದಂತೆ ವಿವಿಧ ಘಟಕಗಳ ಪದಾಧಿಕಾರಿಗಳು, ವೀರಶೈವ ಸಮಾಜದ ಮುಖಂಡರು ಭಾಗವಹಿಸಿದ್ದರು.


ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ

+919743225795

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು