ವಿಜಯ ಸಂಘರ್ಷ
ಭದ್ರಾವತಿ: ವಿಐಎಸ್ಎಲ್ ಕಾರ್ಖಾನೆ ಮುಂಭಾಗ ಒಂದು ವಾರದಿಂದ ಗುತ್ತಿಗೆ ಕಾರ್ಮಿಕರು ಹಮ್ಮಿಕೊಳ್ಳಲಾ ಗಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹಕ್ಕೆ ಕರ್ನಾಟಕ ರಾಜ್ಯ ಪಡಿತರ ವಿತರಕರ ಸಂಘವು ಬೆಂಬಲ ವ್ಯಕ್ತಪಡಿಸಿದೆ.
ಈ ಕುರಿತು ಮಾತನಾಡಿದ ಪಡಿತರ ವಿತರಕರ ರಾಜ್ಯ ಕಾರ್ಯದರ್ಶಿ ಹಾಗೂ ಜಿಲ್ಲಾಧ್ಯಕ್ಷ ಸಿದ್ದಲಿಂಗಯ್ಯ ಮಾತನಾಡಿ. ವಿಐಎಸ್ಎಲ್ ಕಾರ್ಖಾನೆಯಲ್ಲಿ ಸುಮಾರು 2 ಸಾವಿರ ಗುತ್ತಿಗೆ. ಕಾರ್ಮಿಕರು ಬೀದಿ ಪಾಲಾಗ ಲಿದ್ದಾರೆ. ಅಂದಿನ ಪ್ರಧಾನಿ ಎಚ್.ಡಿ. ದೇವೇಗೌಡರು ಕೇಂದ್ರ ಉಕ್ಕು ಪ್ರಾಧಿಕಾರಕ್ಕೆ ಸೇರ್ಪಡೆ ಮಾಡಿದ್ದರು. ಆದರೆ ಇಂದಿನ ಪ್ರಧಾನಿಗಳು. ಕೂಡಲೇ ಮಧ್ಯ ಪ್ರವೇಶಿಸಿ ಕಾರ್ಖಾನೆಗೆ ಬಂಡವಾಳ ತೊಡಗಿಸಿ ಕಾರ್ಮಿಕರ ಭವಿಷ್ಯಕ್ಕೆ ಬದುಕು ರೂಪಿಸಬೇಕು ಎಂದು ಒತ್ತಾಯಿಸಲು. ಜ: 28ರ ಶನಿವಾರ ವಿಐಎಸ್ಎಲ್ ಮುಂಭಾಗ ಗುತ್ತಿಗೆ ಕಾರ್ಮಿಕರಿಗೆ. ಬೆಂಬಲ ನೀಡುವುದಾಗಿ ತಿಳಿಸಿದ್ದಾರೆ.
ಈ ಸಂಬಂಧ ಸಹಕಾರ ಸಂಘಗಳ ಕಾರ್ಯದರ್ಶಿಗಳು, ಸರ್ಕಾರಿ ನ್ಯಾಯಬೆಲೆ ಅಂಗಡಿ ಮಾಲೀಕರು, ಧರಣಿ ಸತ್ಯಾಗ್ರಹಕ್ಕೆ ಬೆಂಬಲ ನೀಡಲು ಆಗಮಿಸುವಂತೆ ಮನವಿ ಮಾಡಿದ್ದಾರೆ.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ
+919743225795