ತೀವ್ರಗೊಂಡ ವಿಐಎಸ್‌ಎಲ್ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

 ವಿಜಯ ಸಂಘರ್ಷ



ಭದ್ರಾವತಿ: ವಿಐಎಸ್‌ಎಲ್ ಕಾರ್ಖಾನೆ ಮುಚ್ಚುವ ಆದೇಶದ ವಿರುದ್ಧ ಕಳೆದ 12 ದಿನಗಳಿಂದ ನಿರಂತರವಾಗಿ ಕಾರ್ಖಾನೆ ಮುಂಭಾಗ ಹೋರಾಟ ನಡೆಸುತ್ತಿರುವ ಗುತ್ತಿಗೆ ಕಾರ್ಮಿಕರು ಪ್ರತಿಭಟನೆ ಏಕಾಏಕಿ ತೀವ್ರಗೊಳಿ ಸಿದ್ದು, ಇದರಿಂದಾಗಿ ಸಂಸದ ಬಿ.ವೈ.ರಾಘ ವೇಂದ್ರ ಸಹ ದಿಗ್ಭ್ರಮೆಗೊಳ್ಳುವಂತೆ ಮಾಡಿತು.

   

   ನಗರದಲ್ಲಿ ಆಯೋಜಿಸಲಾಗಿದ್ದ ಶಿವಮೊಗ್ಗ ಜಿಲ್ಲಾ ಬಿಜೆಪಿ ಕಾರ್ಯಕಾರಿ ಣಿ ಸಭೆಗೆ ಸಂಸದರು ಆಗಮಿಸುವ ಹಿನ್ನಲೆಯಲ್ಲಿ ಪ್ರತಿಭಟನೆಗೆ ನಡೆಸಲು ಪೂರ್ವ ಸಿದ್ದತೆ ಮಾಡಿಕೊಂಡಿದ್ದ ಗುತ್ತಿಗೆ ಕಾರ್ಮಿಕರು ಕೆಎಸ್‌ಆರ್‌ಟಿಸಿ ಮುಖ್ಯಬಸ್‌ನಿಲ್ದಾಣದ ಬಳಿ ಆಗಮಿ ಸಿದ್ದು, ಅಷ್ಟರಲ್ಲಿ ಪೊಲೀಸರು ಬ್ಯಾರಿ ಗೇಡ್ ಬಳಸಿ ಗುತ್ತಿಗೆ ಕಾರ್ಮಿಕರನ್ನು ತಡೆಯುವಲ್ಲಿ ಯಶಸ್ವಿಯಾದರು. ಇದರಿಂದ ಆಕ್ರೋಶಗೊಂಡ ಕಾರ್ಮಿಕ ರು ಪ್ರತಿಭಟನೆಯನ್ನು ಏಕಾಏಕಿ ತೀವ್ರಗೊಳಿಸಿದ್ದು, ನಂತರ ಸ್ಥಳಕ್ಕೆ ಆಗಮಿಸಿದ ಸಂಸದರ ವಿರುದ್ಧ ಧಿಕ್ಕಾರ ಹಾಕುವ ಮೂಲಕ ತಮ್ಮ ಅಳಲು ತೋರ್ಪಡಿಸಿಕೊಂಡರು.


    ಈ ನಡುವೆ ಕೆಲವು ಕಾರ್ಮಿಕರು ಸಂಸದರ ಕಾಲಿಗೆ ಬಿದ್ದರೇ, ಇನ್ನೂ ಕೆಲವು ಕಾರ್ಮಿಕರು ಕಣ್ಣೀರಿನ ಕೋಡಿ ಸುರಿಸಿ ತಮ್ಮ ಸಂಕಷ್ಟಗಳನ್ನು ತೋರ್ಪಡಿಸಿಕೊಂಡರು. ಮಹಿಳಾ ಕಾರ್ಮಿಕರು ಬಿ.ವೈ ರಾಘವೇಂದ್ರ ಹಾಗು ಬಿ.ಎಸ್ ಯಡಿಯೂರಪ್ಪ ನವರಿಗೆ ಹಿಡಿಶಾಪ ಹಾಕುತ್ತಿರುವುದು ಸಹ ಕಂಡು ಬಂದಿತು. ಕಾರ್ಮಿಕರ ಪ್ರತಿಭಟನೆ ತೀವ್ರಗೊಂಡ ಹಿನ್ನಲೆ ಯಲ್ಲಿ ಸಂಸದರು ದಿಕ್ಕುಕಾಣದೆ ಮುಂದಿನ 2 ದಿನಗಳ ಒಳಗಾಗಿ ಸಭೆ ನಡೆಸಿ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿ ಸ್ಥಳದಿಂದ ಕಾಲ್ಕಿತ್ತರು.

   

   ಸಂಸದರು ಹಿಂದಿರುಗಿದ ನಂತರ ಕಾರ್ಮಿಕರು ಅಂಬೇಡ್ಕರ್ ವೃತ್ತದಲ್ಲಿ ರಸ್ತೆ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿ ಸಿದರು. ಇದರಿಂದಾಗಿ ಸುಮಾರು ಅರ್ಧ ಗಂಟೆಗೂ ಹೆಚ್ಚು ಸಮಯ ಸಂಚಾರ ವ್ಯವಸ್ಥೆ ಅಸ್ತವ್ಯಸ್ತಗೊಂಡಿತ್ತು.

   

  ಕಾರ್ಮಿಕರ ಪ್ರತಿಭಟನೆಗೆ ಶಾಸಕ ಬಿ.ಕೆ ಸಂಗಮೇಶ್ವರ್, ಜೆಡಿಎಸ್ ಪಕ್ಷದ ಮುಖಂಡರ ಶಾರದ ಅಪ್ಪಾಜಿ, ಹಿರಿಯ ಕಾರ್ಮಿಕ ಮುಖಂಡರಾದ ಡಿ.ಸಿ ಮಾಯಣ್ಣ, ಕಾಳೇಗೌಡ, ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್ ರಾಜು, ಆಮ್ ಆದ್ಮಿ ಪಕ್ಷದ ಎಚ್. ರವಿ ಕುಮಾರ್ ಸೇರಿದಂತೆ ಇನ್ನಿತರ ರಾಜಕೀಯ ಪಕ್ಷಗಳ, ಸಂಘ- ಸಂಸ್ಥೆಗಳ, ಕಾರ್ಮಿಕ ಸಂಘಟನೆಗಳ ಮುಖಂಡರು ಬೆಂಬಲ ಸೂಚಿಸಿದರು. ಕಾರ್ಮಿಕರ ಪ್ರತಿಭಟನೆ ಹಿನ್ನಲೆಯಲ್ಲಿ ನಗರದಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು.


ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ

+919743225795

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು