ಕಾರ್ಮಿಕರಿಗೆ ಅನ್ಯಾಯ ವಾಗಲು ಬಿಡುವುದಿಲ್ಲ: ಶಾರದಾ ಅಪ್ಪಾಜಿ

 ವಿಜಯ ಸಂಘರ್ಷ



ಭದ್ರಾವತಿ: ಕಾರ್ಖಾನೆ ಉಳಿವಿಗಾಗಿ ಕಾರ್ಮಿಕ ಸಂಘಟನೆಗಳು ವಿವಿಧ ಸಂಘಟನೆಗಳು ನಡೆಸುತ್ತಿರುವ ಹೋರಾಟಕ್ಕೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ ಬೆಂಬಲ ಸೂಚಿಸಿ ಜ :3 ರ ಶುಕ್ರವಾರ ಮದ್ಯಾಹ್ನ 3 ಗಂಟೆಗೆ ವಿಐಎಸ್ಎಲ್ ಕಾರ್ಖಾನೆ ಮುಂಭಾಗ ಆಗಮಿಸಲಿದ್ದಾರೆ ಎಂದು ಜೆಡಿಎಸ್ ಮುಖಂಡರಾದ ಶಾರದ ಅಪ್ಪಾಜಿ ತಿಳಿಸಿದರು.


ಗುತ್ತಿಗೆ ಕಾರ್ಮಿಕರು ಕಾರ್ಖಾನೆಯ ಮುಂಭಾಗ ಸ್ಥಾಪಿಸಿದ ಪ್ರತಿಭಟನೆಗೆ ಮಂಗಳವಾರ ಬೆಂಬಲ ವ್ಯಕ್ತವಾಯಿ ತು.ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ರವರು ಕುಷ್ಟಗಿ ವಿಧಾನಸಭಾ ಕ್ಷೇತ್ರದ ಪಂಚರತ್ನ ಕಾರ್ಯಕ್ರಮದಲ್ಲಿ ಭೇಟಿ ಮಾಡಿ ಆಹ್ವಾನಿಸಲು ಹೊರಡಬೇಕಿತ್ತು. ಅರೋಗ್ಯ ಸರಿಯಿಲ್ಲದ ಕಾರಣ ತಮ್ಮ ಮಗ ಅಜಿತ್ ಅಪ್ಪಾಜಿ ಹಾಗೂ ಕೆಲ ಮುಖಂಡರನ್ನು ಕಳುಹಿಸಲಾಗಿದೆ. ಅಲ್ಲಿ ಕುಮಾರಸ್ವಾಮಿ ರವರು ಬರುವ ದಿನಾಂಕ ನಿಗದಿ ಮಾಡಿ ತಿಳಿಸುತ್ತಾರೆ. ಈ ಹಿನ್ನಲೆಯಲ್ಲಿ ಕಾರ್ಖಾನೆ ಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕಾರ್ಮಿಕರಿಗೆ ಯಾವುದೇ ಕಾರಣಕ್ಕೂ ಅನ್ಯಾಯವಾಗಲು ಬಿಡುವುದಿಲ್ಲ, ಎಂದು ಬೆಂಬಲ ನೀಡಿ ಧರಣಿ ನಿರತ ಕಾರ್ಮಿಕರಿಗೆ ಆತ್ಮ ಧೈರ್ಯ ತುಂಬಿದರು.


ಈ ಸಂದರ್ಭದಲ್ಲಿ ಪಕ್ಷದ ಮುಖಂಡರಾದ ಆರ್. ಕರುಣಾಮೂರ್ತಿ, ಡಿಟಿ ಶ್ರೀಧರ್ ಗುತ್ತಿಗೆ ಕಾರ್ಮಿಕರು ಇದ್ದರು.


ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ

+919743225795



ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು