ವಿಜಯ ಸಂಘರ್ಷ
ಭದ್ರಾವತಿ : ಕೇಂದ್ರ ಉಕ್ಕು ಪ್ರಾಧಿಕಾರ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಮುಚ್ಚುವ ಆದೇಶ ನೀಡಲಿದೆ ಎಂಬ ಭೀತಿಯಿಂದ ನಗರ ದಲ್ಲಿ ಹೋರಾಟ ತೀವ್ರಗೊಂಡಿದ್ದು, ಗುತ್ತಿಗೆ ಕಾರ್ಮಿಕರ ಸಂಘ ಅನಿರ್ದಿಷ್ಟಾವಧಿ ಹೋರಾಟ ಕೈಗೊಂಡಿದೆ.
ಹಿಂದೆಯೂ ಕಾರ್ಖಾನೆ ಖಾಸಗೀಕರಣ ವಿರೋಧಿಸಿ ಕಾರ್ಮಿಕ ಸಂಘಟನೆಗಳು ಸೇರಿದಂತೆ ಕ್ಷೇತ್ರದ ವಿವಿಧ ಸಂಘ- ಸಂಸ್ಥೆಗಳು, ಮಠ ಮಂದಿರಗಳು, ರಾಜಕೀಯ ಪಕ್ಷಗಳು, ವಾಹನ ಚಾಲಕರು, ವ್ಯಾಪಾರಸ್ಥರು, ರೈತ ಹಾಗು ಮಹಿಳಾ ಸಂಘಟನೆಗಳು, ಗಣ್ಯರು ಸೇರಿದಂತೆ ಸಮಸ್ತ ನಾಗರಿಕರು ಸುದೀರ್ಘ ಹೋರಾಟಕ್ಕೆ ವ್ಯಾಪಕ ಬೆಂಬಲ ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಖಾಸಗೀಕರಣ ಪ್ರಕ್ರಿಯೆಯಿಂದ ಹಿಂದೆ ಸರಿದಿತ್ತು. ಅಲ್ಲದೇ ರಾಜ್ಯ ಸರ್ಕಾರ ಕಾರ್ಖಾನೆಗೆ ಅಗತ್ಯವಿರುವ ಗಣಿ ಮಂಜೂರು ಮಾಡಿತ್ತು. ಇದೀಗ ಕಾರ್ಖಾನೆಯನ್ನು ಸಂಪೂರ್ಣವಾಗಿ ಮುಚ್ಚುವ ತೀರ್ಮಾನ ಮಾಡಲಾಗಿದೆ ಎಂಬ ಸುದ್ದಿ ನಗರದಲ್ಲಿ ಹರಡಿದ್ದು, ಆತಂಕದ ವಾತಾವರಣ ಸೃಷ್ಟಿಯಾ ಗಿದೆ. ಕಾರ್ಮಿಕ ಸಂಘಟನೆಗಳು ಹೋರಾಟಕ್ಕೆ ಮುಂದಾಗಿವೆ.
ಮಾಜಿ ಸೈನಿಕರ ಬೆಂಬಲ:
ಉಕ್ಕಿನ ನಗರ ಮಾಜಿ ಸೈನಿಕರ ಸಂಘವು ಗುತ್ತಿಗೆ ಕಾರ್ಮಿಕರ ಹೋರಾಟಕ್ಕೆ ಬೆಂಬಲ ಸೂಚಿಸಿ ಮಾತನಾಡಿ, ತಮ್ಮ ಹೋರಾಟಕ್ಕೆ ನಮ್ಮ ಸಂಘ ಸಂಪೂರ್ಣ ಬೆಂಬಲ ನೀಡಲಿದೆ. ತಮ್ಮ ಹೋರಾಟಕ್ಕೆ ಕುಟುಂಬದ ಸದಸ್ಯರೊಂದಿಗೆ ಬೆಂಬಲ ನೀಡುವುದಾಗಿ ಸಂಘದ ಕಾರ್ಯದರ್ಶಿ ವಿನೋದ್ ಪೂಜಾರಿ ತಿಳಿಸಿದ್ದಾರೆ.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ
+919743225795