ವಿಜಯ ಸಂಘರ್ಷ
ಸಾಗರ: ತಾಲ್ಲೂಕಿನ ಕಾರ್ಗಲ್-ಜೋಗ ಪಟ್ಟಣ ಪಂಚಾಯಿತಿ ಸದಸ್ಯನೋರ್ವ ಲಂಚ ಪಡೆಯುವಾಗ ರೆಡ್‍ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಕೇಸ್ ಗೆ ಸಂಬಂಧಿಸಿದಂತೆ ಆತನ ಸದಸ್ಯತ್ವವನ್ನು ವಜಾಗೊಳಿಸಲಾಗಿದೆ.
ಜೋಗದ 8ನೇ ವಾರ್ಡ್‌ನ ಸದಸ್ಯ ಕೆ.ಸಿ. ಹರೀಶ್ ಗೌಡ ಕೋಳಿ ಅಂಗಡಿ ಮಾಲೀಕರೊಬ್ಬರಿಂದ ಇತ್ತೀಚೆಗೆ ಲಂಚ ಪಡೆಯುವಾಗ ರೆಡ್‍ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದನು. ಈತ ಬಜಾರ್ ಲೈನ್‍ನ ಕೋಳಿ ಅಂಗಡಿ ಮಾಲೀಕ ಅಹ್ಮದ್ ಅಬ್ದುಲ್ ಬಾಕಿ ಎಂಬುವವರಿಗೆ ಪರವಾನಿಗೆ ಮಾಡಿಸಿಕೊಡುವುದಾಗಿ 50 ಸಾವಿರ ರೂ. ಲಂಚ ಕೇಳಿದ್ದರು. ಮನೆಯಲ್ಲಿ ಲಂಚದ ಹಣ ತೆಗೆದುಕೊಳ್ಳುವಾಗ ಲೋಕಾಯುಕ್ತರು ದಾಳಿ ನಡೆಸಿದ್ದರು.
ಈ ವೇಳೆ ಗಾಬರಿಯಲ್ಲಿ ಹರೀಶ್ ಗೌಡ ಹಣವನ್ನು ಗ್ಯಾಸ್ ಸ್ಟೌ ಮೇಲಿಟ್ಟು ಸುಟ್ಟು ಹಾಕಲು ಪ್ರಯತ್ನಿಸಿದ್ದರು. ಇದನ್ನು ತಡೆದು ಲೋಕಾಯುಕ್ತ ಪೊಲೀಸರು ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆಯಡಿ ಪ್ರಕರಣವನ್ನು ದಾಖಲಿಸಿದ್ದರು.
ಈ ಹಿನ್ನೆಲೆಯಲ್ಲಿ ಉಪವಿಭಾಗಾಧಿ ಕಾರಿ ಪಲ್ಲವಿ ಸಾತೇನಹಳ್ಳಿ ಕರ್ನಾಟಕ ಪುರಸಭಾ ಕಾಯ್ದೆಯನ್ವಯ ತಕ್ಷಣ ಜಾರಿಗೆ ಬರುವಂತೆ ಹರೀಶ್ ಗೌಡ ಅವರನ್ನು ಸದಸ್ಯತ್ವ ಸ್ಥಾನದಿಂದ ವಜಾಗೊಳಿಸಿ ಆದೇಶ ಹೊರಡಿಸಿದ್ದಾರೆ.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ
+919743225795