ವಿಜಯ ಸಂಘರ್ಷ
ಭದ್ರಾವತಿ: ಜಿಲ್ಲೆಯಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣದಲ್ಲಿ ಸ್ಥಳೀಯರಿಗೆ ಉದ್ಯೋಗ ಮೀಸಲಿಡಲು ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ನೇತೃತ್ವದಲ್ಲಿ ಬುಧವಾರ ಪ್ರತಿಭಟನೆ ನಡೆಸಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು ಫೆ: 12ರಂದು ಜಿಲ್ಲೆಗೆ ಆಗಮಿಸುತ್ತಿರುವ ಪ್ರಧಾನಿಗಳು ವಿಮಾನ ನಿಲ್ದಾಣ ಲೋಕಾರ್ಪಣೆಗೆ ಮುಂದಾಗಿರು ವುದು ಶ್ಲಾಘನೀಯ. ಆದರೆ ಕರ್ನಾಟಕ ಹಾಗೂ ಸ್ಥಳೀಯ ರಿಗೆ ಉದ್ಯೋಗ ನೀಡುವ ಭರವಸೆ ಇರುವುದಿಲ್ಲ ಎಂದರು.
ರಾಜ್ಯದಲ್ಲಿರುವ ಎಲ್ಲಾ ವಿಮಾನ ನಿಲ್ದಾಣ ಹಾಗೂ ಎಲ್ಲಾ ಕ್ಷೇತ್ರಗಳಲ್ಲಿ ಹೊರ ರಾಜ್ಯದವರೇ ಆವರಿಸಿ ಕೊಂಡಿದ್ದಾರೆ. ಈ ಉದ್ದೇಶದಿಂದ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.
ಪ್ರತಿಭಟನೆಯಲ್ಲಿ ಕನ್ನಡ ರಕ್ಷಣಾ ವೇದಿಕೆಯ ಮುರಳಿ, ಮಾನವ ಹಕ್ಕುಗಳ ಹೋರಾಟ ಸಮಿತಿಯ ಬಿ. ಎನ್. ರಾಜು ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಮಾತನಾಡಿದರು.
ಈ ಸಂದರ್ಭದಲ್ಲಿ ಕೆಆರ್‌ಎಸ್ ಪಕ್ಷದ ಮುಖಂಡರಾದ ತ್ಯಾಗರಾಜ್ ಅರಳಿ ಹಳ್ಳಿ,ನಾಗರಾಜ್ ರಾವ್ ಶಿಂಧೆ, ವಿನೋದ್ ಕುಮಾರ್. ತೀರ್ಥ ಕುಮಾರ್, ರಾಜೇಂದ್ರ,ಆನಂದ, ಸುಮಿತ್ರಮ್ಮ, ವಾಣಿ, ಭಾನುಪ್ರಿಯ ಮತ್ತಿತರರು ಭಾಗವಹಿಸಿದ್ದರು.
ನಂತರ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ
+919743225795