ವಿಐಎಸ್‌ಎಲ್ ಕಾರ್ಖಾನೆ ಮುಚ್ಚುವ ಭೀತಿ: ಗುತ್ತಿಗೆ ಕಾರ್ಮಿಕರ ಅನಿರ್ಧಿಷ್ಟಾ ವಧಿ ಧರಣಿ

 ವಿಜಯ ಸಂಘರ್ಷ



ಭದ್ರಾವತಿ: ಕೇಂದ್ರ ಉಕ್ಕು ಪ್ರಾಧಿಕಾ ರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಮುಚ್ಚುವ ಆದೇಶದ ಭೀತಿಯಿಂದ ನಗರದಲ್ಲಿ ಹೋರಾಟ ತೀವ್ರಗೊಂಡಿದ್ದು, ಗುತ್ತಿಗೆ ಕಾರ್ಮಿಕರ ಸಂಘದಿಂದ ಅನಿರ್ಧಿಷ್ಟಾ ವಧಿ ಹೋರಾಟ ಕೈಗೊಂಡಿದೆ.


ಈ ಹಿಂದೆ ಸಹ ಕಾರ್ಖಾನೆ ಖಾಸಗೀಕ ರಣ ವಿರೋಧಿಸಿ ಕಾರ್ಮಿಕ ಸಂಘಟ ನೆಗಳು ಸೇರಿದಂತೆ ಕ್ಷೇತ್ರದ ವಿವಿಧ ಸಂಘ-ಸಂಸ್ಥೆಗಳು, ಮಠಮಂದಿರಗ ಳು, ರಾಜಕೀಯ ಪಕ್ಷಗಳು, ವಾಹನ ಚಾಲಕರು, ವ್ಯಾಪಾರಸ್ಥರು, ರೈತ ಹಾಗು ಮಹಿಳಾ ಸಂಘಟನೆಗಳು, ಗಣ್ಯರು ಸೇರಿದಂತೆ ಸಮಸ್ತ ನಾಗರೀಕ ರು ಸುದೀರ್ಘ ಹೋರಾಟಕ್ಕೆ ವ್ಯಾಪಕ ಬೆಂಬಲ ಸೂಚಿಸಿದ್ದರು. ಈ ಹಿನ್ನಲೆಯ ಲ್ಲಿ ಕೇಂದ್ರ ಸರ್ಕಾರ ಖಾಸಗೀಕರಣ ಪ್ರಕ್ರಿಯೆಯಿಂದ ಹಿಂದೆ ಸರಿದಿತ್ತು. ಅಲ್ಲದೆ ರಾಜ್ಯ ಸರ್ಕಾರ ಕಾರ್ಖಾನೆಗೆ ಅಗತ್ಯವಿರುವ ಗಣ ಸಹ ಮಂಜೂ ರಾತಿ ಮಾಡಿತ್ತು. ಇದೀಗ ಕಾರ್ಖಾನೆ ಯನ್ನು ಸಂಪೂರ್ಣವಾಗಿ ಮುಚ್ಚುವ ಹುನ್ನಾರ ನಡೆಸಲಾಗುತ್ತಿದೆ ಎಂಬ ಸುದ್ದಿ ಕಳೆದ ಒಂದು ವಾರದಿಂದ ಕ್ಷೇತ್ರದಲ್ಲಿ ಆತಂಕದ ವಾತಾವರಣ ಉಂಟು ಮಾಡಿದ್ದು, ಕಾರ್ಮಿಕ ಸಂಘಟನೆಗಳು ಹೋರಾಟಕ್ಕೆ ಮುಂದಾಗಿವೆ. 


ಗುತ್ತಿಗೆ ಕಾರ್ಮಿಕರ ಸಂಘ ಕಾರ್ಖಾನೆ ಮುಂಭಾಗ ಹೋರಾಟಕ್ಕೆ ಚಾಲನೆ ನೀಡಿದ್ದು, ಅನಿರ್ಧಿಷ್ಟಾವಧಿ ಹೋರಾ ಟಕ್ಕೆ ಕರೆ ನೀಡಿದೆ. ಕಾರ್ಖಾನೆ ಉಳಿಸಿ ಕೊಳ್ಳುವ ನಿಟ್ಟಿನಲ್ಲಿ ನಡೆಸುತ್ತಿರುವ ಹೋರಾಟಕ್ಕೆ ಎಲ್ಲರೂ ಸಂಪೂರ್ಣ ಸಹಕಾರ ನೀಡುವಂತೆ ಸಂಘದ ಪದಾಧಿಕಾರಿಗಳು ಮನವಿ ಮಾಡಿದ್ದಾರೆ.


ಈ ಸಂದರ್ಭದಲ್ಲಿ ವಿಐಎಸ್ಎಲ್ ಗುತ್ತಿಗೆ ಕಾರ್ಮಿಕರ ಸಂಘದ ಪದಾಧಿಕಾರಿಗಳಾದ ಎಚ್.ಜಿ. ಸುರೇಶ್, ಆರ್.ಮಂಜುನಾಥ್, ವಿನೋದ್ ಕುಮಾರ್, ಪಿ. ರಾಕೇಶ್, ವಿ. ಗುಣಶೇಖರ್, ಅಂತೋಣಿ ದಾಸ್, ಎಂ. ಆನಂದ್ ಸೇರಿದಂತೆ ನೂರಾರು ಕಾರ್ಮಿಕರಿದ್ದರು.


ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ

+919743225795

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು