"ಕೈ ಬಿಟ್ಟು ತೆನೆ" ಹೊತ್ತ ಮುಖಂಡ ಅಮೋಸ್

 ವಿಜಯ ಸಂಘರ್ಷ



ಭದ್ರಾವತಿ: ಯುವ ಕಾಂಗ್ರೆಸ್ ಪಕ್ಷದ  ವಕ್ತಾರ ಅಮೋಸ್ ಕಾಂಗ್ರೆಸ್ ಪಕ್ಷ ತೊರೆದು ಅಧಿಕೃತವಾಗಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.


ಕಾಂಗ್ರೆಸ್ ಪಕ್ಷದಲ್ಲಿ ರಾಜ್ಯ ವಕ್ತಾರ ರಾಗಿ ಸೇವೆ ಸಲ್ಲಿಸಿರುವ ಅಮೋಸ್ ಕಡಿಮೆ ಅವಧಿಯಲ್ಲಿ ಹೆಚ್ಚಿನ ಜನಪ್ರಿಯತೆಗಳಿಸುವ ಮೂಲಕ ಎಲ್ಲರ ಗಮನ ಸೆಳೆದಿದ್ದರು. ಇದೀಗ ಏಕಾಏಕಿ ಕಾಂಗ್ರೆಸ್ ತೊರೆದಿದ್ದಾರೆ. 


 ತಾಲೂಕಿನ ಅಂತರಗಂಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆ.ಎಚ್ ನಗರದಲ್ಲಿ ಹಮ್ಮಿಕೊಳ್ಳಲಾಗಿದ್ದ ಅಪ್ಪಾಜಿಯ ಋಣಾನುಬಂಧ ಕಾರ್ಯಕ್ರಮದಲ್ಲಿ ಅಮೋಸ್ ತಮ್ಮ ಬೆಂಬಲಿಗರೊಂದಿಗೆ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಶಾರದ ಅಪ್ಪಾಜಿಯವರ ಸಮ್ಮುಖದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡರು.


ಪಕ್ಷದ ರಾಜ್ಯ ಕಾರ್ಯದರ್ಶಿ ಜೆ.ಪಿ ಯೋಗೇಶ್, ತಾಲ್ಲೂಕು ಅಧ್ಯಕ್ಷ ಆರ್.ಕರುಣಾಮೂರ್ತಿ, ಜಿಲ್ಲಾ ಯುವ ಘಟಕದ ಅಧ್ಯಕ್ಷ ಕೆ.ಮಧುಕುಮಾರ್, ಮುಖಂಡರಾದ ಎಂ.ಎ.ಅಜಿತ್, ಧರ್ಮೇಗೌಡ, ಆನಂದ್, ಲಕ್ಷ್ಮೀದೇವಿ, ಜಯರಾಂಗೊಂದಿ, ಧರ್ಮರಾಜ್, ಮುರ್ತುಜಾಖಾನ್, ಎಚ್.ಬಿ ರವಿ ಕುಮಾರ್, ಉಮೇಶ್ ಮತ್ತಿತರರು ಉಪಸ್ಥಿತರಿದ್ದರು

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ

+919743225795

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು