ವಿಜಯ ಸಂಘರ್ಷ
ಭದ್ರಾವತಿ: ನಗರದ ವಿಐಎಸ್‌ಎಲ್ ಕಾರ್ಖಾನೆ ಮುಚ್ಚುವ ಆದೇಶದ ವಿರುದ್ಧ ಕಾರ್ಖಾನೆ ಮುಂಭಾಗ ಗುತ್ತಿಗೆ ಕಾರ್ಮಿಕರು ನಡೆಸುತ್ತಿರುವ ಅನಿರ್ಧಿ ಷ್ಟಾವಧಿ ಹೋರಾಟ 11 ನೇ ದಿನ ಪೂರೈಸಿದ್ದು, ಹೋರಾಟಕ್ಕೆ ಕರ್ನಾಟಕ ರಾಜ್ಯ ಬಂಜಾರ ಸಮಾಜದವತಿ ಯಿಂದ ಬೆಂಬಲ ಸೂಚಿಸಿ ಪ್ರತಿಭಟನೆ ನಡೆಸಿತು.
ಬಂಜಾರ ಸಂಘದ ರೈತ ಯುವ ಘಟಕದ ರಾಜ್ಯಾಧ್ಯಕ್ಷ ಕೃಷ್ಣನಾಯ್ಕ ಮಾತನಾಡಿ, ವಿಐಎಸ್‌ಎಲ್ ಕಾರ್ಖಾನೆ ಹೋರಾಟಕ್ಕೆ ಸಮಾಜದ ಸಂಪೂರ್ಣವಾಗಿ ಬೆಂಬಲ ನೀಡಲಿದೆ. ಯಾವುದೇ ರೀತಿಯ ಹೋರಾಟಕ್ಕೂ ಸಿದ್ದವಿದೆ. ಸರ್ಕಾರ ತಕ್ಷಣ ಮುಚ್ಚುವ ಆದೇಶ ಹಿಂಪಡೆಯಬೇಕು. ಅಗತ್ಯವಿರುವ ಬಂಡವಾಳ ತೊಡಗಿಸ ಬೇಕೆಂದು ಆಗ್ರಹಿಸಿದರು.
ಸಂಘದ ಕಲ್ಪನಹಳ್ಳಿ ಪ್ರವೀಣ್ ನಾಯ್ಕ ಮಾತನಾಡಿ, ಕೇಂದ್ರ ಸರ್ಕಾರದ ಸಚಿವರು ಹಿಂದೆ ಕೋಟ್ಯಾಂತರ ರೂ ಬಂಡವಾಳ ತೊಡಗಿಸಿ ಕಾರ್ಖಾನೆ ಉಳಿಸಿತ್ತೇವೆ ಎಂದು ಹೇಳಿ ಕಾರ್ಮಿಕರ ಮತ ಪಡೆದು ಮೋಸವೆಸಗಿದ್ದಾರೆ.
ಮುಂಬರುವ ಚುನಾವಣೆಗೂ ಸಹ ಅಲ್ಪಸ್ವಲ್ಪ ಹಣ ನೀಡಿ ತಮ್ಮನ್ನು ಮರಳು ಮಾಡುವ ರಾಜಕಾರಣಿಗಳನ್ನು ದೂರವಿಡಿ ಎಲ್ಲರೂ ಒಗ್ಗಟ್ಟಾಗಿ ಹೋರಾಟಕ್ಕೆ ಮುಂದಾಗಬೇಕು. ಕಾರ್ಮಿಕ ವಿರೋಧಿ ನೀತಿ ಅನುಸರಿಸುವ ಯಾವುದೇ ಸರ್ಕಾರವಿರಲಿ ಅದರ ವಿರುದ್ಧ ಜನರು ಹೋರಾಟಕ್ಕೆ ಮುಂದಾಗಬೇಕು. ಈ ನಿಟ್ಟಿನಲ್ಲಿ ಹೋರಾಟಕ್ಕೆ ಸಂಪೂರ್ಣವಾಗಿ ಸಹಕಾರ ನೀಡಲಿದೆ ಎಂದು ಭರವಸೆ ನೀಡಿದರು.
ಸಮಾಜದ ಪ್ರಮುಖರು,ಗುತ್ತಿಗೆ ಕಾರ್ಮಿಕರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ
+919743225795