ವಿಜಯ ಸಂಘರ್ಷ
ಭದ್ರಾವತಿ: ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕೂಲಿ ಕಾರ್ಮಿಕರ ಒಕ್ಕೂಟದಿಂದ ಫೆ.12 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಸಿ.ಎನ್ ರಸ್ತೆ ಶ್ರೀ ಗಂಗಾಪರಮೇಶ್ವರಿ ಸಮುದಾಯ ಭವನದಲ್ಲಿ ತಾಲೂಕು ಮಟ್ಟದ ಐಕ್ಯತಾ ಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಒಕ್ಕೂ ಟದ ರಾಜ್ಯಾಧ್ಯಕ್ಷ ವಿ. ವಿನೋದ್ ತಿಳಿಸಿದರು.
ಅವರು ಗುರುವಾರ ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿ, ಒಕ್ಕೂಟ ಕಾರ್ಮಿಕರಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಪ್ರಾಮಾಣಿಕವಾಗಿ ತಲುಪಿಸುವ ನಿಟ್ಟಿನಲ್ಲಿ ಕಾರ್ಯೊ ನ್ಮುಖವಾಗಿದೆ. ಈ ಹಿನ್ನಲೆಯಲ್ಲಿ ಕಾರ್ಮಿಕರಿಗೆ ಜಾಗೃತಿ ಮೂಡಿಸಲು ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದರು.
ಸಮಾವೇಶದಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಯದಲ್ಲಿ ಉತ್ತಮ ಸೇವೆ ಸಲ್ಲಿಸಿದ ಕಾರ್ಮಿಕರಿಗೆ ಗೌರವ, ಸನ್ಮಾನ ಹಾಗು ಪ್ರಶಸ್ತಿ ನೀಡಲಾಗು ವುದು. ಅಲ್ಲದೆ ಆಯ್ಕೆಯಾದ ಫಲಾ ನುಭವಿಗಳಿಗೆ ಫ್ಲಂಬರ್ ಕಿಟ್, ಎಲೆಕ್ಟ್ರಿಷನ್ ಕಿಟ್ ಹಾಗು ಮಹಿಳಾ ಪೌಷ್ಠಿಕಾಂಶ ಕಿಟ್, ನೊಂದಾಯಿತ ಫಲಾನುಭವಿಯ ಗುರುತಿನ ಚೀಟಿ ಹಾಗು ಒಕ್ಕೂಟದ ಸದಸ್ಯತ್ವ ಗುರುತಿನ ಚೀಟಿ ವಿತರಿಸಲಾಗುವುದು ಎಂದರು.
ಸಮಾವೇಶದಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಕೂಲಿ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿ ಗೊಳಿಸುವಂತೆ ಕೋರಿದರು.
ಪತ್ರಿಕಾಗೋಷ್ಠಿಯಲ್ಲಿ ಸಹ ಕಾರ್ಯ ದರ್ಶಿ ಸುಶೀಲಮ್ಮ, ನಗರ ಅಧ್ಯಕ್ಷ ಪಳನಿ, ಉಪಾಧ್ಯಕ್ಷ ಶ್ರೀಕಾಂತ, ಕಾರ್ಯಾಧ್ಯಕ್ಷ ಮಧು, ಮಹಿಳಾ ಘಟಕದ ಅಧ್ಯಕ್ಷೆ ಸಂಧ್ಯಾ, ತಾಲೂಕು ಅಧ್ಯಕ್ಷ ಮೋಹನ್, ಉಪಾಧ್ಯಕ್ಷರಾದ ಜಯಣ್ಣ, ರಮೇಶ್, ತಾಲೂಕು ಕಾರ್ಯದರ್ಶಿ ಆಶೀರ್ವಾದ್, ಗ್ರಾಮಾಂತರ ಕಾರ್ಯದರ್ಶಿ ಸಂದೇಶ್ ಪೈ, ಕಾರ್ಯಕಾರಿ ಸಮಿತಿ ಸದಸ್ಯರಾದ ರಾಜು ಮತ್ತು ಸುರೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಸುದ್ದಿ ಹಾಗೂ ಜಾಹೀರಾತಿಗಾಗಿ saprkid