ವಿಜಯ ಸಂಘರ್ಷ
ಕೇಂದ್ರ ಉಕ್ಕು ಪ್ರಾಧಿಕಾರ ದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಮುಚ್ಚುವ ಆದೇಶದ ವಿರುದ್ಧ ಕಾರ್ಖಾನೆ ಮುಂಭಾಗದಲ್ಲಿ ಗುತ್ತಿಗೆ ಕಾರ್ಮಿಕರು ನಡೆಸುತ್ತಿರುವ ಅನಿರ್ಧಿಷ್ಟಾವಧಿ ಹೋರಾಟ 14 ನೇ ದಿನ ಪೂರೈಸಿತು.
ಈ ನಡುವೆ ಹೋರಾಟಕ್ಕೆ ತಾಲೂಕಿನ ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಉಪಮೇಯರ್ ಮಹಮದ್ ಸನ್ನಾವುಲ್ಲಾ ಬೆಂಬಲ ಸೂಚಿಸಿದ್ದಾರೆ.ಗುತ್ತಿಗೆ ಕಾರ್ಮಿಕರ ಎಲ್ಲಾ ರೀತಿಯ ಹೋರಾಟಕ್ಕೂ ಸಂಪೂರ್ಣ ಬೆಂಬಲ ನೀಡುವ ಜೊತೆಗೆ ತಕ್ಷಣ ಕಾರ್ಖಾನೆ ಮುಚ್ಚುವ ಆದೇಶ ಹಿಂಪಡೆಯಬೇಕು. ಅಗತ್ಯವಿರುವ ಬಂಡವಾಳ ತೊಡಗಿಸಿ ಅಭಿವೃದ್ಧಿ ಗೊಳಿಸುವಂತೆ ಒತ್ತಾಯಿಸಲಾಯಿತು.
ಕಾಂಗ್ರೆಸ್ ಪಕ್ಷದ ಮುಖಂಡರಾದ ಡಿ.ಎಚ್ ಕೃಷ್ಣ, ತರುಣ್ಕುಮಾರ್ ಹಾಗು ಗುತ್ತಿಗೆ ಕಾರ್ಮಿಕ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಭಾಗವಹಿಸಿದ್ದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ
+919743225795