ಜನರ ಸಮಸ್ಯೆಗಳಿಗಿಂತ ಹಣ ಲೂಟಿ ಮಾಡುವ ಅಭಿವೃದ್ಧಿ ಕಾರ್ಯ ನಡೆಯುತ್ತಿದೆ : ಎಚ್ ಡಿಕೆ

 ವಿಜಯ ಸಂಘರ್ಷ



ಭದ್ರಾವತಿ: ಜನರ ಅಗತ್ಯ ಸಮಸ್ಯೆ ಗಳಿಗೆ ಜಿಲ್ಲೆಯ ರಾಜಕಾರಣಿಗಳು ಸ್ಪಂದಿಸದೆ ಹಣ ಲೂಟಿ ಮಾಡುವ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳು ತ್ತಿದ್ದಾರೆ. ಇದರಿಂದಾಗಿ ದಲಿತರು, ರೈತರು, ಕಾರ್ಮಿಕರು ಬಡವರಾಗಿಯೇ ಉಳಿಯುವಂತಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರ ಸ್ವಾಮಿ ಆರೋಪಿಸಿದರು.


ಅವರು ಮಂಗಳವಾರ ಹಳೇನಗರದ ಕನಕಮಂಟಪ ಮೈದಾನದಲ್ಲಿ ಜೆಡಿ ಎಸ್ ಪಕ್ಷ ಆಯೋಜಿಸಲಾಗಿದ್ದ ಪಂಚರತ್ನ ಯಾತ್ರೆ ವೇದಿಕೆ ಕಾರ್ಯ ಕ್ರಮ ಉದ್ಘಾಟಿಸಿ ಮಾತನಾಡಿದರು.


ಜಿಲ್ಲೆಯಲ್ಲಿ ಅಡಕೆ ಬೆಳೆಗಾರರ ಸಮ ಸ್ಯೆ, ಬಗರ್‌ಹುಕುಂ ರೈತರ ಸಮಸ್ಯೆ ಗಳಿವೆ. ಅಭಿವೃದ್ಧಿಗಾಗಿ ಭೂಮಿ ಕಳೆದುಕೊಂಡಿರುವ ರೈತರಿಗೆ ಸೂಕ್ತ ಪರಿಹಾರ ನೀಡಿಲ್ಲ. ಬೃಹತ್ ಕಾರ್ಖಾನೆ ಗಳು ಮುಚ್ಚಿ ಕಾರ್ಮಿಕರು ಬೀದಿ ಪಾಲಾಗಿದ್ದಾರೆ. ಸಾಕಷ್ಟು ಬಡವರಿಗೆ ಮನೆಗಳಿಲ್ಲವಾಗಿದೆ. ಇಂತಹ ಮೂಲ ಭೂತ ಸಮಸ್ಯೆಗಳಿಗೆ ಪರಿಹಾರ ಕಂಡು ಕೊಳ್ಳುವಲ್ಲಿ ಜಿಲ್ಲೆಯ ರಾಜಕಾರಣಿ ಗಳು ವಿಫಲರಾಗಿದ್ದಾರೆ.


ಈ ಮೂಲಭೂತ ಸಮಸ್ಯೆಗಳಿಗೆ ಪರಿ ಹಾರ ಕಲ್ಪಿಸಿಕೊಡುವ ಉದ್ದೇಶವೇ ಪಂಚರತ್ನ ಯಾತ್ರೆಯಾಗಿದೆ. ಇದನ್ನು ಜನರು ಅರ್ಥ ಮಾಡಿಕೊಂಡು ಈ ಬಾರಿ ಚುನಾವಣೆಯಲ್ಲಿ ನಮ್ಮನ್ನು ಬೆಂಬಲಿಸಬೇಕೆಂದರು.


ಜಿಲ್ಲೆಯ ರಾಜಕಾರಣಿಗಳು ಅಭಿವೃದ್ಧಿ ಹೆಸರಿನಲ್ಲಿ ಲೂಟಿ ಹೊಡೆಯುತ್ತಿದ್ದಾರೆ. ಕೇವಲ ಅವರು ಹಾಗು ಕುಟುಂಬ ದವರು ಸಮೃದ್ಧಿಯಾಗುತ್ತಿದ್ದಾರೆ. ಇಂತಹ ರಾಜಕಾರಣ ನಾನು ಎಂದಿ ಗೂ ಮಾಡಿಲ್ಲ. ಎರಡು ಬಾರಿ ಮುಖ್ಯ ಮಂತ್ರಿಯಾದರೂ ಸಹ ಪೂರ್ಣ ಅಧಿಕಾರ ನೀಡದಿದ್ದರೂ ಸಹ ರೈತರ ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸಿದ್ದೇನೆ. ಎರಡು ಬಾರಿ ಸಾಲ ಮನ್ನಾ ಮಾಡಿದ್ದೇನೆ. ಬಡವರ ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸಿದ್ದೇನೆ. ಪಂಚರತ್ನ ಯೋಜನೆ ಗಳನ್ನು ಜಾರಿಗೊಳಿಸಲು 2.5 ಲಕ್ಷ ಕೋಟಿ ಅನುದಾನದ ಅಗತ್ಯವಿದೆ. ರಾಜ್ಯದಲ್ಲಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವ ಮೂಲಕ ಅಗತ್ಯವಿರುವ ಅನುದಾನವನ್ನು ಜನರ ತೆರಿಗೆ ಹಣ ದಲ್ಲಿ ಬಳಸಿಕೊಳ್ಳುತ್ತೇನೆ. ಈ ಬಾರಿ ನನಗೆ ಪೂರ್ಣ ಪ್ರಮಾಣದ ಅಧಿಕಾರ ನೀಡುವಂತೆ ಮನವಿ ಮಾಡಿದರು.


ಕ್ಷೇತ್ರದ ವಿಐಎಸ್‌ಎಲ್ ಮತ್ತು ಎಂಪಿ ಎಂ ಕಾರ್ಖಾನೆಗಳನ್ನು ಮುಚ್ಚಲು ಹಣ ಬಿಡುಗಡೆ ಮಾಡಿರುವ ಈ ಹಿಂದಿನ ಬಿಜೆಪಿ ಮತ್ತು ಕಾಂಗ್ರೆಸ್ ಸರ್ಕಾರ ಗಳಿಗೆ ಈ ಕಾರ್ಖಾನೆಗಳನ್ನು ಉಳಿಸಿ ಕೊಳ್ಳುವುದಾಗಿ ಭರವಸೆ ನೀಡುವ ಯಾವುದೇ ನೈತಿಕತೆ ಇಲ್ಲವಾಗಿದೆ. ನಮ್ಮ ಸರ್ಕಾರ ಈ ಎರಡು ಕಾರ್ಖಾನೆ ಗಳನ್ನು ಪುನಶ್ಚೇತನಗೊಳಿಸಲು ಬದ್ಧ ವಾಗಿದೆ. ರಾಜ್ಯ ಸರ್ಕಾರವೇ ಈ ಎರಡು ಕಾರ್ಖಾನೆಗಳನ್ನು ಮುನ್ನಡೆಸಿ ಕೊಂಡು ಹೋಗಲಿದೆ. ಅಲ್ಲದೆ ಇಲ್ಲಿನ ಬಗರ್ ಹುಕುಂ ರೈತರ ಸಮಸ್ಯೆಗಳನ್ನು ಪರಿಹರಿಸುತ್ತೇನೆ. ಈ ಬಾರಿ ಚುನಾವ ಣೆಯಲ್ಲಿ ಪಕ್ಷದ ಅಭ್ಯರ್ಥಿ ಶಾರದ ಅಪ್ಪಾಜಿಯವರನ್ನು ಗೆಲ್ಲಿಸುವ ಮೂಲಕ ವಿಧಾನಸಭೆಗೆ ಆಯ್ಕೆ ಮಾಡಬೇಕೆಂದು ಮನವಿ ಮಾಡಿದರು.


ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ, ಪಕ್ಷದ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಶಾರದಾ ಅಪ್ಪಾಜಿ, ವಿಧಾನ ಪರಿಷತ್ ಸದಸ್ಯ ಎಸ್.ಎಲ್ ಬೋಜೇಗೌಡ, ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ನಜ್ಮಾ, ನಗರಸಭಾ ಸದಸ್ಯರಾದ ಬಸವರಾಜ್ ಬಿ ಆನೆಕೊಪ್ಪ, ವಿಜಯಮ್ಮ, ಜಯಶೀಲ ಸುರೇಶ್ ರಾಜ್ಯ ಕಾರ್ಯದರ್ಶಿ ಜೆ.ಪಿ ಯೋಗೇ ಶ್, ಜಿಲ್ಲಾಧ್ಯಕ್ಷ ಎಂ. ಶ್ರೀಕಾಂತ್, ಮಹಿಳಾ ಘಟಕದ ಗೀತಾಸತೀಶ್, ಯುವ ಘಟಕದ ಜಿಲ್ಲಾಧ್ಯಕ್ಷ ಮಧು ಕುಮಾರ್, ನಗರ ಘಟಕದ ಅಧ್ಯಕ್ಷ ಆರ್ ಕರುಣಾ ಮೂರ್ತಿ, ಗ್ರಾಮಾಂತರ ಅಧ್ಯಕ್ಷ ಧರ್ಮಕುಮಾರ್, ಯುವ ಘಟಕದ ಅಧ್ಯಕ್ಷ ಎಂ.ಎ ಅಜಿತ್, ಮುಖಂಡರಾದ ಕರಿಯಣ್ಣ, ಮೈಲಾ ರಪ್ಪ, ಉಜ್ಜನಿಪುರ ವೆಂಕ ಟೇಶ್ ಮುರ್ತುಜಾಖಾನ್ ಇನ್ನಿತರರಿದ್ದರು.


ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ

+919743225795

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು