ಯುವ ಕಾಂಗ್ರೆಸ್ ರಾಜ್ಯ ವಕ್ತಾರ ವರುಣ್‌ಗೌಡರಿಗೆ ಜೀವಬೆದರಿಕೆ

 ವಿಜಯ ಸಂಘರ್ಷ



ಭದ್ರಾವತಿ: ಯುವ ಕಾಂಗ್ರೆಸ್ ರಾಜ್ಯ ವಕ್ತಾರ ವರುಣ್‌ಗೌಡರಿಗೆ ವ್ಯಕ್ತಿ ಯೋರ್ವ ಮೊಬೈಲ್‌ಗೆ ಕರೆ ಮಾಡಿ ಜೀವ ಬೆದರಿಕೆ ಹಾಕಿರುವ ಘಟನೆ ನಡೆದಿದೆ.


    ಈ ಸಂಬಂಧ ಪೇಪರ್‌ಟೌನ್ ಪೊಲೀಸ್ ಠಾಣೆಗೆ ಶುಕ್ರವಾರ ಸಂಜೆ ದೂರು ನೀಡಿದ್ದಾರೆ. ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ ಶ್ರೀನಿವಾಸ್ ಹಾಗು ಶಾಸಕ ಬಿ.ಕೆ ಸಂಗಮೇಶ್ವರ್‌ ರವರು ನನ್ನನ್ನು ರಾಜ್ಯ ವಕ್ತಾರರನ್ನಾಗಿ ನನ್ನನ್ನು ಆಯ್ಕೆ ಮಾಡಿರುತ್ತಾರೆ. ಸುಮಾರು ಒಂದು ತಿಂಗಳಿನಿಂದ ಅಧಿಕಾರ ಪಡೆದು ಪಕ್ಷ ನಿಷ್ಠೆಯಿಂದ ಕಾರ್ಯನಿರ್ವಹಿಸು ತ್ತಿದ್ದೇನೆ. ಫೆ.23 ರ ಗುರುವಾರ ರಾತ್ರಿ ಸುಮಾರು 10.30 ರ ಸಮಯದಲ್ಲಿ ಗಗನ್ ಎಂಬ ವ್ಯಕ್ತಿ ಜೆಡಿಎಸ್ ಪಕ್ಷ ಎಂದು ಹೇಳಿಕೊಂಡು ಕರೆ ಮಾಡಿದ್ದು, ಜೀವ ಬೆದರಿಕೆ ಹಾಕಿರುತ್ತಾರೆಂದು ದೂರಿದ್ದಾರೆ.


    ಈ ಹಿನ್ನಲೆಯಲ್ಲಿ ಕಾನೂನು ಕ್ರಮ ಕೈಗೊಳ್ಳಬೇಕು. ಅಲ್ಲದೆ ನಾನು ಹೊರಗಡೆ ತಿರುಗಾಡುವಾಗ ದ್ವಿಚಕ್ರ ವಾಹನದಲ್ಲಿ ಅಡ್ಡಗಟ್ಟಿ ಹಿಂಬಾಲಿಸಿ ನಿಂದಿಸುತ್ತಾರೆ. ನನಗೆ ರಕ್ಷಣೆ ಅವಶ್ಯ ಕತೆ ಇದ್ದು, ಈ ಹಿನ್ನಲೆಯಲ್ಲಿ ರಕ್ಷಣೆ ನೀಡುವಂತೆ ಕೋರಿದ್ದಾರೆ. ಪೊಲೀಸ ರು ಪ್ರಕರಣ ದಾಖಲಿಸಿ ಕೊಂಡು ಮುಂದಿನ ಕೈಗೊಂಡಿದ್ದಾರೆ.


ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ

+919743225795

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು