ಯುವ ಕಾಂಗ್ರೆಸ್ ರಾಜ್ಯ ವಕ್ತಾರರಾಗಿ ವರುಣ್‌ಗೌಡ

 ವಿಜಯ ಸಂಘರ್ಷ



ಭದ್ರಾವತಿ: ಒಕ್ಕಲಿಗ ಸಮಾಜದ ಯುವ ಮುಖಂಡ, ಕಾಗದನಗರ ವಾರ್ಡ್ ನಂ. 6 ರ ನಿವಾಸಿ ವರುಣ್‌ ಗೌಡರನ್ನು ಯುವ ಕಾಂಗ್ರೆಸ್ ರಾಜ್ಯ ವಕ್ತಾರರಾಗಿ ನೇಮಕಗೊಳಿಸಲಾಗಿದೆ.


ಹಳೇನಗರದ ಕನಕಮಂಟಪ ಮೈದಾನದಲ್ಲಿ ಪ್ರಜಾಧ್ವನಿ ಕಾರ್ಯ ಕ್ರಮದಲ್ಲಿ ಪಾಲ್ಗೊಂಡಿದ್ದ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ ಶ್ರೀನಿವಾಸ್‌, ಶಾಸಕ ಬಿ.ಕೆ ಸಂಗಮೇ ಶ್ವರ್‌ರವರ ಸೂಚನೆ ಮೇರೆಗೆ ವರುಣ್‌ ಗೌಡರನ್ನು ಯುವ ಕಾಂಗ್ರೆಸ್ ರಾಜ್ಯ ವಕ್ತಾರರನ್ನಾಗಿ ನೇಮಕಗೊಳಿಸಿ ಆದೇಶ ಹೊರಡಿಸಿ ಆದೇಶ ಹೊರಡಿಸಿದ್ದಾರೆ.


ಕಾಂಗ್ರೆಸ್ ಸರ್ಕಾರದಲ್ಲಿನ ಸಾಧನೆಗ ಳು ಹಾಗೂ ಪಕ್ಷದ ಕಾರ್ಯಕ್ರಮಗಳ ಕುರಿತು ಸುದ್ದಿ ಮಾಧ್ಯಮಗಳಲ್ಲಿ ಸಾರ್ವಜನಿಕರಿಗೆ ಪರಿಣಾಮಕಾರಿ ಯಾಗಿ ತಲುಪಿಸುವ ಮೂಲಕ ಪಕ್ಷ ಸಂಘಟನೆಯಲ್ಲಿ ತೊಡಗಿಸಿ ಕೊಳ್ಳುವಂತೆ ಸೂಚಿಸಿದ್ದಾರೆ.


ರಾಜ್ಯ ವಕ್ತಾರರಾಗಿ ನೇಮಕಗೊಂಡಿ ರುವ ವರುಣ್‌ಗೌಡರನ್ನು ಶಾಸಕ ಬಿ.ಕೆ ಸಂಗಮೇಶ್ವರ್, ಪಕ್ಷದ ನಗರ ಹಾಗು ಗ್ರಾಮಾಂತರ ಘಟಕದ ಅಧ್ಯಕ್ಷರು, ಮುಖಂಡರು ಅಭಿನಂದಿಸಿದ್ದಾರೆ.


ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ

+919743225795

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು