ವಿಜಯ ಸಂಘರ್ಷ
ಭದ್ರಾವತಿ: ಖಾಸಗಿ ಹಣಕಾಸು ಸಂಸ್ಥೆ ಯ ಉದ್ಯೋಗಿಯೊಬ್ಬ ಲಕ್ಷಾಂತರ ರು. ಹಣ ಕಬಳಿಸಿರುವ ಘಟನೆ ಬೆಳಕಿಗೆ ಬಂದಿದ್ದು, ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಿದ್ದರೂಢ ನಗರದ ಭಾರತ್ ಪೈನಾನ್ಸಿಯಲ್ ಇನ್ ಕ್ಲೋಷನ್ ಲಿಮಿಟೆಡ್ ಸಿಬ್ಬಂದಿ ದಿನೇಶ್ ಸುಮಾರು ₹ 3,70,144 ಕಬಳಿ ಸಿದ್ದು, ಸುಮಾರು 1 ವರ್ಷದಿಂದ ದಿನೇಶ್ ಸಂಸ್ಥೆಯಿಂದ ಸಾಲ ನೀಡಿದಂತಹ ಒಟ್ಟು 25 ಮಹಿಳಾ ಸಂಘಗಳ ಹಣಕಾಸಿನ ವ್ಯವಹಾರ ನೋಡಿಕೊಳ್ಳುತ್ತಿದ್ದನು.
ಹಣವನ್ನು ಸಂಗ್ರಹಿಸಿ ಸಂಸ್ಥೆಯ ಖಾತೆಗೆ ಜಮಾ ಮಾಡುತ್ತಿದ್ದನು. ಲೆಕ್ಕ ಪರಿಶೋಧನೆ ಸಂದರ್ಭದಲ್ಲಿ ಒಟ್ಟು ₹ 3,70,144 ರು. ವ್ಯತ್ಯಾಸ ಕಂಡುಬಂದಿದ್ದು, ಹಣದ ಬಗ್ಗೆ ಈತನನ್ನು ವಿಚಾರ ಮಾಡಿದಾಗ ಹಣ ಸ್ವಂತಕ್ಕೆ ಬಳಸಿಕೊಂಡಿರು ತ್ತೆನೆಂದು ಹಾಗೂ 20 ದಿನಗಳಲ್ಲಿ ಹಣ ಜಮಾ ಮಾಡುವುದಾಗಿ ತಿಳಿಸಿದ್ದು, ಆದರೆ ಒಟ್ಟು ₹ 2,23,875 ಹಣ ಬಾಕಿ ಉಳಿಸಿಕೊಂಡಿದ್ದು, ಈ ಹಿನ್ನಲೆಯಲ್ಲಿ ಸಂಸ್ಥೆಯ ವ್ಯವಸ್ಥಾಪಕ ಬಸವರಾಜ್ ಎಂಬುವರು ಹಳೇನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ
+919743225795