ವಿಜಯ ಸಂಘರ್ಷ
ಭದ್ರಾವತಿ: ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಮುಚ್ಚುವ ಆದೇಶದ ವಿರುದ್ಧ ಶುಕ್ರವಾರ ಹಮ್ಮಿಕೊಂಡಿದ್ದ ಭದ್ರಾವತಿ ಬಂದ್ ಸಂಪೂರ್ಣ ಯಶಸ್ವಿಯಾಗಿದೆ
.
ರಾಜ್ಯ ರೈತ ಸಂಘದ ವರಿಷ್ಟ ಕೆ.ಟಿ. ಗಂಗಾಧರ್ ಬೆಂಬಲ ವ್ಯಕ್ತ ಪಡಿಸಿ ಮಾತನಾಡಿ, ನೂರು ವರ್ಷದ ಇತಿಹಾಸ ಇರುವ ಕಾರ್ಖಾನೆ ಇಂದು ಇಂತಹ ದುಸ್ಥಿತಿ ಬಂದೋದಗಿರು ವುದಕ್ಕೆ ರಾಜಕೀಯ ದಿವಾಳಿತನ ಎದ್ದು ತೋರುತ್ತಿದೆ. ರಾಜ್ಯದ ಹಲವು ಜಿಲ್ಲೆಗಳ ನಿರುದ್ಯೋಗಿಗಳಿಗೆ ಉದ್ಯೋಗ ಸೃಷ್ಟಿ ಮಾಡುವಲ್ಲಿ ಹೆಸರುವಾಸಿಯಾದ ಜಿಲ್ಲೆಯಾಗಿತ್ತು.
ಇಡೀ ರಾಜ್ಯದ ಬಡಜನರ ಬವಣೆ ತೀರಿಸಿದ್ದ ಕಾರ್ಖಾನೆಯಾಗಿತ್ತು.
ಇಂತಹ ಕಾರ್ಖಾನೆಗೆ ಮುಗಿದ ಅಧ್ಯಾಯವೆಂದು ಕೆಲ ರಾಜಕಾರಣಿ ಗಳು ಹೇಳುತ್ತಿರುವುದು ರಾಜಕೀಯ ದಿವಾಳಿತನಕ್ಕೆ ಕಾರಣವಾಗಿದೆ ಎಂದು ಕಿಡಿಕಾರಿದರು.
ಈ ಸಂದರ್ಭದಲ್ಲಿ ರೈತ ಸಂಘದ ಪ್ರಧಾನ ಕಾರ್ಯದರ್ಶಿ, ವೀರೇಶ್ ಸೇರಿದಂತೆ ಸಂಘದ ಪದಾಧಿಕಾರಿ ಗಳು, ಗುತ್ತಿಗೆ ಕಾರ್ಮಿಕರು ಅವ ಲಂಬತ್ತಿರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.
ಯಾವುದೇ ಕಾರಣಕ್ಕೂ ಕಾರ್ಖಾನೆ ಮುಚ್ಚ ಬಾರದು ಎಂದರು.ಕಾರ್ಖಾನೆ ಸಂಪತ್ತು ಕೇವಲ ಸ್ವಯಂ ಪ್ರೇರಿತ ರಾಗಿ ಬೆಳಿಗ್ಗೆಯಿಂದಲೇ ಹೋಟೆಲ್ ಗಳು, ಪೆಟ್ರೋಲ್ ಬಂಕ್‌ಗಳು, ಚಿತ್ರಮಂದಿರಗಳು ಸೇರಿದಂತೆ ಅಂಗಡಿ-ಮುಂಗಟ್ಟುಗಳು ಮುಚ್ಚಲ್ಪ ಟ್ಟಿದ್ದವು. ಸರ್ಕಾರಿ ಹಾಗು ಖಾಸಗಿ ಬಸ್‌ಗಳ ಸಂಚಾರ ಸ್ಥಗಿತ ಗೊಂಡಿತ್ತು. ಆಟೋ ಸಂಚಾರ ವಿರಳ ವಾಗಿತ್ತು.
ಶಾಲಾ-ಕಾಲೇಜುಗಳು ರಜೆ ಘೋಷಿಸಿದ್ದವು. ಉಳಿದಂತೆ ಕೆಲವು ಸರ್ಕಾರಿ ಕಛೇರಿಗಳು ಸಹ ಬಂದ್‌ಗೆ ಬೆಂಬಲ ವ್ಯಕ್ತಪಡಿಸಿ ರಜೆ ಘೋಷಿ ಸಿದ್ದವು. ನಗರದ ವಕೀಲರು ಸಹ ನ್ಯಾಯಾಲಯಗಳಲ್ಲಿ ಕಲಾಪಗಳಿಂದ ದೂರ ಉಳಿದು ತಾಲೂಕು ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿ ಬೆಂಬಲ ವ್ಯಕ್ತಪಡಿಸಿದರು.
ಭದ್ರಾವತಿಯಲ್ಲಿ ವಿಐಎಸ್‌ಎಲ್ ಕಾರ್ಖಾನೆ ಉಳಿವಿಗಾಗಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಭದ್ರಾವತಿ ಬಂದ್ ಹಿನ್ನಲೆಯಲ್ಲಿ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣ ಬಿಕೋ ಎನ್ನುತ್ತಿರುವುದು.
ನಗರದ ಪ್ರಮುಖ ವೃತ್ತಗಳಲ್ಲಿ ಗುತ್ತಿಗೆ ಕಾರ್ಮಿಕರು ಟೈರ್‌ಗಳಿಗೆ ಬೆಂಕಿ ಹಚ್ಚಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ ಕ್ಷೇತ್ರದಾ ದ್ಯಂತ ಬೈಕ್ ರ‍್ಯಾಲಿ ನಡೆಸಿ ಬಂದ್‌ಗೆ ಸಹಕರಿಸುವಂತೆ ಮನವಿ ಮಾಡಿದರು. ನಗರಸಭೆ ಸೇರಿದಂತೆ ಸ್ಥಳೀಯ ಸಂಸ್ಥೆ ಗಳ ಚುನಾಯಿತ ಪ್ರತಿನಿಧಿಗಳು, ಗುತ್ತಿಗೆ ಕಾರ್ಮಿಕರ ಸಂಘಟನೆಗಳ ಅಧ್ಯಕ್ಷರು, ಪದಾಧಿಕಾರಿಗಳು,
ಕಾಯಂ ಹಾಗು ನಿವೃತ್ತ ಕಾರ್ಮಿಕ ಸಂಘಟನೆಗಳ ಪ್ರಮುಖರು, ತಾಲೂಕು ವರ್ತಕರ ಸಂಘ, ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ಕನ್ನಡ ಸಾಹಿತ್ಯ ಪರಿಷತ್, ಕೇರಳ ಸಮಾಜ, ಕ್ರೈಸ್ತ ಸಮಾಜ, ಮಾಜಿ ಸೈನಿಕರ ಸಂಘ, ಮಾದಿಗ ಸಮಾಜ, ಜಯಕರ್ನಾಟಕ ಸಂಘಟನೆ, ಒಕ್ಕಲಿಗರ ಸಂಘ, ಭದ್ರಾವತಿ ಪ್ರಜಾ ವಿಮೋಚನೆ ಸಂಘ, ಮಾನವ ಹಕ್ಕು ಗಳ ಹೋರಾಟ ಸಮಿತಿ, ಕರುನಾಡು ಪ್ರಜಾ ಸಂರಕ್ಷಣಾ ವೇದಿಕೆ, ಅಂಜು ಮಾನ್ ಇಸ್ಲಾವುಲ್ ಮುಸ್ಲಿ ಮೀನ್, ಸರ್ಕಾರಿ ಪಡಿತರ ವಿತರಕರ ಸಂಘ, ಅಖಿಲ ಭಾರತ ವೀರಶೈವ ಲಿಂಗಾ ಯತ ಮಹಾಸಭಾ, ವಾಲ್ಮೀಕಿ ಸಮಾ ಜ, ಅಂಬೇಡ್ಕರ್ ಯುವ ಪಡೆ, ಅಕ್ಷರ ದಾಸೋಹ ಬಿಸಿಯೂಟ ನೌಕರರ ಸಂಘ ಸೇರಿದಂತೆ ವಿವಿಧ ಸಂಘ- ಸಂಸ್ಥೆಗಳು, ಕಾಂಗ್ರೆಸ್, ಜೆಡಿಎಸ್, ಎಎಪಿ, ಕೆಆರ್‌ಎಸ್ ಸೇರಿದಂತೆ ವಿವಿ ಧ ರಾಜಕೀಯ ಪಕ್ಷಗಳು, ಬೆಂಬಲ ಸೂಚಿಸಿದ್ದವು.
ಸುದ್ದಿ ಹಾಗೂ ಜಾಹೀತಾತಿಗಾಗಿ ಸಂಪರ್ಕಿಸಿ
+919743225795