ಉಕ್ಕಿನ ನಗರಕ್ಕಾಗಮಿಸುವ ಪಂಚರತ್ನ ಯಾತ್ರೆ ಸ್ವಾಗತಿ ಸಲು ಜೆಡಿಎಸ್ ಸಿದ್ಧತೆ

 ವಿಜಯ ಸಂಘರ್ಷ



ಭದ್ರಾವತಿ: ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಫೆ.21 ರಂದು ನಗರಕ್ಕೆ ಪಂಚರತ್ನ ಯಾತ್ರೆ ಮೂಲಕ ಆಗಮಿಸಲಿದ್ದು, ಒಂದೇ ತಿಂಗಳಿನಲ್ಲಿ 2 ನೇ ಬಾರಿಗೆ ಕ್ಷೇತ್ರಕ್ಕೆ ಆಗಮಿಸುತ್ತಿರುವುದು ವಿಶೇಷತೆ ಯಾಗಿದೆ.


ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಮುಚ್ಚುವ ಆದೇಶ ದ ವಿರುದ್ಧ ಗುತ್ತಿಗೆ ಕಾರ್ಮಿಕರು ನಡೆಸುತ್ತಿರುವ ಅನಿರ್ಧಿಷ್ಟಾವಧಿ ಹೋರಾಟಕ್ಕೆ ಬೆಂಬಲ ಸೂಚಿಸಿ ಫೆ.3 ರಂದು ಬಹಿರಂಗ ಸಭೆಯಲ್ಲಿ ಪಾಲ್ಗೊಂಡು ಮಾತನಾಡುವ ಮೂಲ ಕ ವಿಐಎಸ್‌ಎಲ್ ಕಾರ್ಖಾನೆ ಉಳಿಸಿ ಕೊಳ್ಳುವ ಭರವಸೆ ನೀಡಿದ್ದರು.


ಈ ನಡುವೆ ಕೇಂದ್ರ ಸರ್ಕಾರ ಕಾರ್ಖಾನೆ ಮುಚ್ಚುವ ಕುರಿತು ಸ್ಪಷ್ಟಪಡಿಸಿದೆ. ಇದರಿಂದಾಗಿ ಕಾರ್ಮಿಕ ವಲಯದಲ್ಲಿ ಆತಂಕದ ಕಾರ್ಮೋಡ ಆವರಿಸಿ ಕೊಂಡಿದೆ. ಕಾರ್ಖಾನೆ ಉಳಿಸುವ ಸಂಬಂಧ ಕುಮಾರ ಸ್ವಾಮಿಯವರ ಮುಂದಿನ ನಿಲುವಿ ಗಾಗಿ ಎದುರು ನೋಡುವಂತಾಗಿದೆ.

ರಾಜ್ಯಾದ್ಯಂತ ಪಂಚರತ್ನ ಯಾತ್ರೆ ಸಂಚರಿ ಸುತ್ತಿದ್ದು, ಫೆ.21 ರಂದು ಬೆಳಿಗ್ಗೆ 9 ಗಂಟೆಗೆ ತಾಲೂಕಿನ ಗಡಿಭಾಗ ಕಾರೇಹಳ್ಳಿಗೆ ಆಗಮಿಸಲಿದ್ದು, ನಂತರ ಯಾತ್ರೆ ಕೆಂಪೇಗೌಡ ನಗರ, ಬಾರಂ ದೂರು, ಕೆಂಚೇನಹಳ್ಳಿ, ಮಾವಿನಕೆರೆ, ತಾಷ್ಕೆಂಟ್‌ನಗರ, ಯರೇಹಳ್ಳಿ, ಮಾರು ತಿನಗರ, ಶಿವನಿಕ್ರಾಸ್, ಗೌರಾಪುರ, ಬಸವನಗುಡಿ, ಕೆ.ಎಚ್ ನಗರ, ಅಂತ ರಗಂಗೆ, ಕಾಚಗೊಂಡನಹಳ್ಳಿ, ಅಶ್ವಥ್‌ ನಗರ, ಶಿವಾಜಿ ವೃತ್ತ, ರಂಗಪ್ಪ ವೃತ್ತ, ಮಾಧವಚಾರ್ ವೃತ್ತ, ಹಾಲಪ್ಪ ವೃತ್ತ, ಅಂಡರ್‌ಬ್ರಿಡ್ಜ್, ಹೊಸ ಸೇತುವೆ, ಕೆಎಸ್‌ಆರ್‌ಟಿಸಿ ಬಸ್ ಡಿಪೋ ವೃತ್ತ, ಕಂಚಿಬಾಗಿಲು ವೃತ್ತ ಮೂಲಕ ಕನಕಮಂಟಪ ಮೈದಾನ ತಲುಪಲಿದೆ.


ಸಂಜೆ 4 ಗಂಟೆಗೆ ಕನಕಮಂಟಪ ಮೈದಾನದಲ್ಲಿ ನಡೆಯಲಿರುವ ವೇದಿಕೆ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯ ಮಂತ್ರಿ ಎಚ್.ಡಿ ಕುಮಾರಸ್ವಾಮಿ, ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ, ವಿಧಾನ ಪರಿಷತ್ ಸದಸ್ಯ ಭೋಜೇಗೌಡ, ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಶಾರದ ಅಪ್ಪಾಜಿ, ಪಕ್ಷದ ನಗರ ಘಟಕದ ಅಧ್ಯಕ್ಷ ಆರ್. ಕರುಣಾಮೂರ್ತಿ, ಯುವ ಘಟಕದ  ಜಿಲ್ಲಾಧ್ಯಕ್ಷ ಮಧುಕುಮಾರ್ ಮತ್ತಿತರರು ಪಾಲ್ಗೊಳ್ಳಲಿದ್ದಾರೆ ಎಂದು ಪಕ್ಷದ ಯುವ ಘಟಕದ ತಾಲ್ಲೂಕು ಅಧ್ಯಕ್ಷ ಎಂ. ಎ.ಅಜಿತ್ ಮಾಧ್ಯಮಕ್ಕೆ ತಿಳಿಸಿದರು.


ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ

+919743225795

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು