ವಿಐಎಸ್‌ಎಲ್ ಕಾರ್ಖಾನೆ ವಿಚಾರದಲ್ಲಿ ಬಿಜೆಪಿಯವರು ಕೊಟ್ಟ ಮಾತು ಉಳಿಸಿಕೊಂ ಡಿಲ್ಲ: ಡಿ.ಕೆ.ಶಿವಕುಮಾರ್

 ವಿಜಯ ಸಂಘರ್ಷ



ಭದ್ರಾವತಿ: ಬಿಜೆಪಿ ನಾಯಕರು ಕೊಟ್ಟ ಮಾತಿನಂತೆ ಕೇಂದ್ರ ಸರ್ಕಾರದಿಂದ ವಿಐಎಸ್‌ಎಲ್ ಕಾರ್ಖಾನೆಗೆ ಬಂಡವಾಳ ತಂದು ಪುನರಾರಂಭ ವಿಫಲವಾಗಿದೆ.


ಅವರು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಿದರೆ ಕೇವಲ ಅರ್ಧ ಗಂಟೆಯಲ್ಲಿ ತೀರ್ಮಾನ ಮಾಡಬಹುದು. ಆದರೆ ಈ ಬಗ್ಗೆ ಡಬಲ್ ಇಂಜಿನ್ ಸರ್ಕಾರ ವಿಫಲವಾಗಿದೆ. ಹೀಗಾಗಿ ಬಿಜೆಪಿಯವರು ಈ ಜನರ ಮುಂದೆ ಬಂದು ಮತ ಕೇಳುವ ನೈತಿಕತೆ ಕಳೆದುಕೊಂಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹರಿಹಾಯ್ದಿದ್ದಾರೆ.


ಕಾಂಗ್ರೆಸ್ ಪಕ್ಷದ ಪ್ರಜಾಧ್ವನಿ ಸಮಾವೇಶಕ್ಕೂ ಮುನ್ನ ವಿಐಎಸ್ ಎಲ್ ಕಾರ್ಮಿಕರ ಜತೆ ಚರ್ಚೆ ನಡೆಸಿದ ಡಿ.ಕೆ. ಶಿವಕುಮಾರ್, ಅವರಿಂದ ಅಹವಾಲು ಆಲಿಸಿದರು. ಬಳಿಕ ಮಾತನಾಡಿ, ಬಿಜೆಪಿ ಸರ್ಕಾರದ ನಿರ್ಲಕ್ಷ್ಯತನದ ಬಗ್ಗೆ ಕಿಡಿಕಾರಿದರು. ಜೊತೆಗೆ ಈ ಕಾರ್ಖಾನೆಯನ್ನು ಮುಚ್ಚುವ ನಿರ್ಧಾರ ಕೈಬಿಟ್ಟು ಪುನರಾರಂಭ ಮಾಡಬೇಕು ಎಂದು ಹೇಳಿದರು.


ಈ ಸಂದರ್ಭದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಡಿ.ಕೆ. ಶಿವಕುಮಾರ್, ನಾವು ಮಲೆನಾಡು ಭಾಗಕ್ಕೆ ಬಂದಿದ್ದು, ಭದ್ರಾವತಿಯಲ್ಲಿ ಮಾತ್ರ ನಮ್ಮ ಪಕ್ಷದವರು ಶಾಸಕರಾಗಿದ್ದಾರೆ. ಕಳೆದ ಚುನಾವಣೆಯ ನಂತರ ತೀರ್ಥಹಳ್ಳಿ ಯ ಮಂಜುನಾಥ್ ಗೌಡ, ಸೊರಬದ ಮಧು ಬಂಗಾರಪ್ಪ ಅವರು ಕಾಂಗ್ರೆಸ್ ಸೇರಿದ್ದಾರೆ. ರಾಜ್ಯದಲ್ಲಿ ಬಿಜೆಪಿಯ ಡಬಲ್ ಎಂಜಿನ್‌ ಸರ್ಕಾರವಿದೆ. ಈ ಜಿಲ್ಲೆ ಬಹಳ ನಾಯಕರನ್ನು ನೀಡಿದೆ. ರಾಜ್ಯದ ಗೃಹ ಸಚಿವರು ಈ ಜಿಲ್ಲೆಯ ವರು. ಆದರೂ ಏಕೆ ಈ ನಿರ್ಲಕ್ಷ್ಯ ಎಂದು ಪ್ರಶ್ನೆ ಮಾಡಿದರು.


ಶಿವಮೊಗ್ಗ ಜಿಲ್ಲೆಯಲ್ಲಿ ರೈತರು, ಕಾರ್ಮಿಕರು, ವ್ಯಾಪಾರ ವರ್ಗದವ ರನ್ನು ನೆಮ್ಮದಿಯಾಗಿ ಬದುಕಲು ಬಿಡುತ್ತಿಲ್ಲ. ನಾನು ಈ ಹಿಂದೆ ಶಿವಮೊಗ್ಗಕ್ಕೆ ಬಂದಾಗ ಜಾಗತಿಕ ಬಂಡವಾಳ ಹೂಡಿಕೆಯಲ್ಲಿ ಶಿವಮೊಗ್ಗಕ್ಕೆ ಎಷ್ಟು ಕೋಟಿ ಬಂಡವಾಳ ಹೂಡಿಕೆಯಾಗಿದೆ ಎಂದು ಕೇಳಿದ್ದೆ. ಮೈಸೂರು ಮಹಾರಾಜರು ಕೊಟ್ಟ ವಿಐಎಸ್‌ಎಲ್ ಕಾರ್ಖಾನೆಯನ್ನು ಕೇಂದ್ರ ಸರ್ಕಾರ ಮುಚ್ಚಲು ಹೋದಾಗ, ಸಿದ್ದರಾಮಯ್ಯ ಅವರ ಸರ್ಕಾರವಿತ್ತು. ಆಗ ಸಂಗಮೇಶ್ ಅವರು ಮಾಜಿ ಶಾಸಕರಾಗಿದ್ದರೂ ಈ ಕಾರ್ಖಾನೆಗೆ ಗಣಿ ಜಾಗ ಮಂಜೂರು ಮಾಡಿಸಿದ್ದರು. ಆದರೂ ಕೇಂದ್ರ ಸರ್ಕಾರ ಈ ಕಾರ್ಖಾನೆಗೆ ಬಂಡವಾಳ ಹೂಡಿಕೆ ಮಾಡಿ ಮತ್ತೆ ಆರಂಭಕ್ಕೆ ಆದ್ಯತೆ ನೀಡಲಿಲ್ಲ. ಚುನಾವಣೆ ಸಂದರ್ಭದಲ್ಲಿ ಯಡಿಯೂರಪ್ಪನವರು 1 ಸಾವಿರ ಕೋಟಿ ರೂ. ಬಂಡವಾಳ ಹೂಡಿಕೆ ಮಾಡುವ ಭರವಸೆ ನೀಡಿದರು. ನಂತರ ಕೇಂದ್ರ ಸಚಿವರು ಬಂದು 6 ಸಾವಿರ ಕೋಟಿ ರೂ. ಬಂಡವಾಳ ಹೂಡಿಕೆ ನೀಡುವುದಾಗಿ ಹೇಳಿದ್ದರು. ಇದ್ಯಾವುದನ್ನೂ ಮಾಡಲಿಲ್ಲ. ಶಿವಮೊಗ್ಗ ಸಂಸದರೂ ಸೇರಿ ರಾಜ್ಯದಿಂದ 25 ಬಿಜೆಪಿ ಸಂಸದರಿದ್ದಾರೆ. ಆದರೂ ವಿಶ್ವೇಶ್ವರಯ್ಯ ಅವರ ಹೆಸರಿನಲ್ಲಿರುವ ಈ ಕಾರ್ಖಾನೆ ಉಳಿಸಲು ಪ್ರಯತ್ನಿಸುತ್ತಿಲ್ಲ. ಕಾಂಗ್ರೆಸ್ ಸರ್ಕಾರ ಸ್ಥಾಪಿಸಿದ ಸಾರ್ವಜನಿಕ ಉದ್ದಿಮೆಗಳನ್ನು ಬಿಜೆಪಿ ಸರ್ಕಾರ ಖಾಸಗಿಯವರಿಗೆ ಮಾರುತ್ತಿದೆ. ಈಗ ಈ ಕಾರ್ಖಾನೆ ಮಾರಾಟ ಮಾಡಲು ಮುಂದಾಗಿದ್ದು, ಖರೀದಿ ಮಾಡಲು ಯಾರೂ ಬಂದಿಲ್ಲ ಎಂದು ಈಗ ಮುಚ್ಚಲು ಮುಂದಾಗಿದ್ದಾರೆ ಎಂದು ಡಿ.ಕೆ. ಶಿವಕುಮಾರ್‌ ಆಕ್ರೋಶ ವ್ಯಕ್ತಪಡಿಸಿದರು.


ಕಾರ್ಖಾನೆ ನೌಕರರ ಸಂಕಷ್ಟ ಆಲಿಸಿದ ಶಿವಕುಮಾರ್


ಇದಕ್ಕೂ ಮುನ್ನ ಡಿ.ಕೆ. ಶಿವಕುಮಾರ್ ಅವರು ಕಾರ್ಖಾನೆ ನೌಕಕರಿಂದ ಕಾರ್ಖಾನೆಯ ಸ್ಥಿತಿಗತಿಗಳ ಬಗ್ಗೆ ಹಾಗೂ ಅವರ ಕಷ್ಟಗಳ ಬಗ್ಗೆ ಮಾಹಿತಿ ನೀಡಲಾಗಿದೆ.


ಯಡಿಯೂರಪ್ಪನವರು ಕೇಂದ್ರ ಸರ್ಕಾರದಿಂದ ಕಾರ್ಖಾನೆಗೆ 1 ಸಾವಿರ ಕೋಟಿ ರೂ. ಬಂಡವಾಳ ಹೂಡಿಕೆ ಮಾಡುವ ಭರವಸೆ ನೀಡಿದ್ದರು. ನಂತರ ಕೇಂದ್ರ ಸಚಿವ ತೋಮರ್ ಅವರು 6 ಸಾವಿರ ಕೋಟಿ ಬಂಡವಾಳ ಹೂಡಿಕೆ ಮಾಡುವ ಮಾತು ಕೊಟ್ಟಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರ ಈ ಕಾರ್ಖಾನೆ ಪುನರಾರಂಭಕ್ಕೆ 150 ಗಣಿ ಭೂಮಿ ಮಂಜೂರು ಮಾಡಿದೆ. ಆದರೂ ಬಿಜೆಪಿ ನಾಯಕರು ಕೇಂದ್ರ ಸರ್ಕಾರದಿಂದ ಬಂಡವಾಳ ಹೂಡಿಕೆ ಮಾಡಿ ಸದೇ ಕೊಟ್ಟ ಮಾತುಉಳಿಸಿಕೊಂಡಿಲ್ಲ ಎಂದು ವಿವರಿಸಿದರು.


ಈ ಕಾರ್ಖಾನೆ ಮುಚ್ಚಿದರೆ ಸಾವಿರಾರು ಕುಟುಂಬಗಳು ಬೀದಿಗೆ ಬೀಳಲಿವೆ. ಹೀಗಾಗಿ ಕೂಡಲೇ ಕಾರ್ಖಾನೆ ಮುಚ್ಚುವ ಕೇಂದ್ರ ಸರ್ಕಾರದ ತೀರ್ಮಾನವನ್ನು ತಡೆ ಹಿಡಿಯಬೇಕು ಎಂದು ತಮ್ಮ ಅಳಲು ತೊಡಿಕೊಂಡರು.



ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ

+919743225795

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು