ವಿಜಯ ಸಂಘರ್ಷ
ಭದ್ರಾವತಿ: ನಗರಸಭೆ ಉಪಾಧ್ಯಕ್ಷ ರಾಗಿ ವಾರ್ಡ್ ನಂ. 26 ರ ಕಾಂಗ್ರೆಸ್ ಪಕ್ಷದ ನಗರಸಭಾ ಸದಸ್ಯೆ ಸರ್ವ ಮಂಗಳ ಭೈರಪ್ಪ ನಡೆದ ಚುನಾವಣೆ ಯಲ್ಲಿ ಆಯ್ಕೆಯಾಗಿದ್ದಾರೆ.
ಸರ್ವಮಂಗಳರವರು 18 ಹಾಗು ಇವರ ಪ್ರತಿಸ್ಪರ್ಧಿ ವಾರ್ಡ್ ನಂ.25 ರ ಜೆಡಿಎಸ್ ಪಕ್ಷದ ನಗರಸಭಾ ಸದಸ್ಯ ಉದಯ ಕುಮಾರ್ 11 ಮತಗಳನ್ನು ಪಡೆದು ಕೊಂಡರು. ಒಟ್ಟು 35 ಸದಸ್ಯ ಬಲ ಹೊಂದಿರುವ ನಗರಸಭೆಯಲ್ಲಿ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಪರಿಶಿಷ್ಟ ಜಾತಿಗೆ ಮೀಸಲಾದ ಉಪಾಧ್ಯಕ್ಷ ಸ್ಥಾನದ ಅಧಿಕಾರ ಒಪ್ಪಂದದಂತೆ ಹಂಚಿಕೆ ಮಾಡಿಕೊಂಡಿದ್ದು, ಮೊದಲ ಒಪ್ಪಂದ ಅವಧಿಗೆ ಚನ್ನಪ್ಪ ಅಧಿಕಾರ ಪೂರೈಸಿದ್ದಾರೆ.
ಇದೀಗ 2 ನೇ ಒಪ್ಪಂದದ ಅವಧಿಗೆ ಸರ್ವಮಂಗಳಆಯ್ಕೆಯಾಗಿದ್ದಾರೆ.ಚುನಾವಣೆಯಲ್ಲಿ ಬಿಜೆಪಿ ಪಕ್ಷದ 3 ಸದಸ್ಯರು ಹಾಗು ಓರ್ವ ಪಕ್ಷೇತರ ಸದಸ್ಯ ತಟಸ್ಥರಾಗಿ ಉಳಿದು ಕೊಂಡಿ ದ್ದು, ಓರ್ವ ಜೆಡಿಎಸ್ ಸದಸ್ಯ ಚುನಾ ವಣೆಯಲ್ಲಿ ಪಾಲ್ಗೊಂಡಿಲ್ಲ.
ಉಪವಿಭಾಗಾಧಿಕಾರಿ ರವಿಚಂದ್ರ ನಾಯಕ್ ಚುನಾವಣಾಧಿಕಾರಿ ಕರ್ತವ್ಯ ನಿರ್ವಹಿಸಿ ದರು. ಪೌರಾಯುಕ್ತ ಮನುಕುಮಾರ್ ಉಪಸ್ಥಿತರಿದ್ದರು.