ಅವಳಿ ಕಾರ್ಖಾನೆಗಳ ಉಳಿವಿಗಾಗಿ ಹೋರಾಟ ಅನಿವಾರ್ಯ: ಬಸವರಾಜ್ ಆನೆಕೊಪ್ಪ

 ವಿಜಯ ಸಂಘರ್ಷ



ಭದ್ರಾವತಿ: ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಉಳಿವಿಗಾಗಿ ಹೋರಾಟ ಅನಿವಾ ರ್ಯವಾಗಿದೆ ಎಂದು ನಗರಸಭಾ ಸದಸ್ಯ ಹಾಗೂ ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಸಂಘದ ಅಧ್ಯಕ್ಷ ಬಸವರಾಜ್ ಬಿ. ಆನೆಕೊಪ್ಪ ಹೇಳಿದರು.


ಭಾನುವಾರ ನಗರದ ಬೈಪಾಸ್ ರಸ್ತೆ ಮಿಲ್ಟ್ರಿಕ್ಯಾಂಪ್‌ನಲ್ಲಿರುವ ಲೋಕೋ ಪಯೋಗಿ ಇಲಾಖೆ ಪ್ರವಾಸಿ ಮಂದಿರ ದ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾ ಗಿದ್ದ ಕಾರ್ಯಕರ್ತರ ಸಭೆ ಹಾಗು ವಿಐಎಸ್‌ಎಲ್ ಮತ್ತು ಎಂಪಿಎಂ ಕಾರ್ಖಾನೆಗಳ ಉಳಿವಿಗಾಗಿ ಬೆಂಬಲ ಸೂಚಿಸಿ ಹಮ್ಮಿಕೊಳ್ಳಲಾಗಿದ್ದ ಪೂರ್ವ ಭಾವಿ ಸಭೆಯಲ್ಲಿ ಮಾತನಾಡಿದರು.

ಗುತ್ತಿಗೆ ಕಾರ್ಮಿಕರು ನಡೆಸುತ್ತಿರುವ ಅನಿರ್ಧಿಷ್ಟಾವಧಿ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ), ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಸಂಘ ಮತ್ತು ಡಾ. ಬಿ.ಆರ್ ಅಂಬೇಡ್ಕರ್ ಪಡೆ ವತಿಯಿಂದ ಬೆಂಬಲ ಸೂಚಿಸಿ ನಗರದ ವಿವಿಧ ಸಂಘ-ಸಂಸ್ಥೆಗಳ ಸಹಯೋಗ ದೊಂದಿಗೆ ಹೋರಾಟ ನಡೆಸಲು ತೀರ್ಮಾನಿಸಲಾಯಿತು.


ಪ್ರಸ್ತುತ ವಿಐಎಸ್‌ಎಲ್ ಮತ್ತು ಎಂಪಿ ಎಂ ಕಾರ್ಖಾನೆಗಳ ಉಳಿವಿಗಾಗಿ ಹೋರಾಟದ ಅಗತ್ಯವಿದೆ. ಈ ಹಿನ್ನಲೆ ಯಲ್ಲಿ ನಾವುಗಳು ಒಗ್ಗಟ್ಟಾಗಿ ಗುತ್ತಿಗೆ ಕಾರ್ಮಿಕರು ನಡೆಸುತ್ತಿರುವ ಹೋರಾ ಟಕ್ಕೆ ಬೆಂಬಲ ಸೂಚಿಸಬೇಕಾಗಿದೆ ಎಂದರು.


ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಜಿಲ್ಲಾ ಸಂಘ ಟನಾ ಸಂಚಾಲಕ ಆರ್ ಹರೀಶ್ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಪ್ರಧಾನ ಸಂಚಾಲಕ ಎಸ್.ಪುಟ್ಟ ರಾಜು, ಡಾ. ಬಿ.ಆರ್ ಅಂಬೇಡರ್ ಎಸ್.ಸಿ/ಎಸ್‌ಟಿ ಪಡೆ ಅಧ್ಯಕ್ಷ ವೆಂಕಟೇಶ್ ಉಜ್ಜನಿಪುರ, ದಲಿತ ಮುಖಂಡ ಸಂಪತ್, ಜಮೀರ್ (ಕೆಂಪು ಸೇನೆ), ಹನುಮಂತಪ್ಪ, ಅಣ್ಣಪ್ಪ, ಸಂತೋಷ್, ಶಿವಕುಮಾರ್, ಶ್ರೀನಿ ವಾಸ್, ಮಂಜುನಾಥ್ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ನಂತರ ಬೆಂಬಲ ಸೂಚಿಸುವ ನಿರ್ಣ ಯ ಕೈಗೊಂಡು ಹೋರಾಟದ ರೂಪು ರೇಷೆಗಳ ಕುರಿತು ಚರ್ಚಿಸಲಾಯಿತು. 


ಈ ಸಂದರ್ಭದಲ್ಲಿ ಎಂಪಿಎಂ ಹಾಗೂ ವಿಐಎಸ್ಎಲ್ ಕಾರ್ಖಾನೆಗಳ ನಿವೃತ್ತ ನೌಕರರು ಮತ್ತಿತರರಿದ್ದರು.


ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ

+919743225795

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು