ರಾಜಕಾರಣಿಗಳೇ ಅಧಿಕಾರಿ ಗಳೇ ಕಾರ್ಮಿಕರ ನೋವು ಕೇಳಿ : ರವಿಕೃಷ್ಣ ರೆಡ್ಡಿ

 ವಿಜಯ ಸಂಘರ್ಷ



ಭದ್ರಾವತಿ: ನಗರದ ವಿಐಎಸ್ ಎಲ್ ಕಾರ್ಖಾನೆ ಗುತ್ತಿಗೆ ಕಾರ್ಮಿಕರು ಹಮ್ಮಿಕೊಂಡಿರುವ ಪ್ರತಿಭಟನೆಗೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಕಾರ್ಮಿ ಕರಿಗೆ ಬೆಂಬಲ ವ್ಯಕ್ತಪಡಿಸಿದರು.


ಈ ಸಂದರ್ಭದಲ್ಲಿ ಮಾತನಾಡಿದ ಪಕ್ಷದ ಅಧ್ಯಕ್ಷ ರವಿ ಕೃಷ್ಣಾರೆಡ್ಡಿ ಕೇಂದ್ರ ಸರ್ಕಾರದ ಧೋರಣೆ ತೀವ್ರವಾಗಿ ಖಂಡಿಸಿದರು.


ಗುತ್ತಿಗೆ ಕಾರ್ಮಿಕರು ಕಳೆದ ಎರಡು ತಿಂಗಳಿಂದ ನ್ಯಾಯತವಾಗಿಹೋರಾಟ ನಡೆಸುತ್ತಿದ್ದಾರೆ. ಆದರೆ ಇದುವರೆಗೂ ಯಾವೊಬ್ಬ ಅಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ ಕಾರ್ಮಿಕರ ನೋವಿಗೆ ಸ್ಪಂದಿಸದಿರುವುದು ವಿಷಾಧನೀಯ, ಕೇಂದ್ರ ಸರ್ಕಾರ ಕಾರ್ಖಾನೆ ಮುಚ್ಚುವ ಆದೇಶವನ್ನು ಹಿಂಪಪಡೆದು ಬಂಡವಾಳ ಕೂಡಲೇ ತೊಡಗಿಸಿ ಕಾರ್ಖಾನೆ ನಡೆಸಲು ಮುಂದಾಗಬೇಕೆಂದು ಅಗ್ರಹಿಸಿದರು.


ಈ ಸಂದರ್ಭದಲ್ಲಿ ಜೆಡಿಯು ಪಕ್ಷದ ರಾಜ್ಯ ಕಾರ್ಯದರ್ಶಿ ಶಶಿ ಕುಮಾರ್ ಎಸ್ ಗೌಡ, ಕೆಆರ್ ಎಸ್ ಪಕ್ಷದ ಮುಖಂಡರಾದ ತೀರ್ಥ, ತ್ಯಾಗರಾಜ್ ಸೇರಿದಂತೆ ನೂರಾರು ಕಾರ್ಮಿಕರು ಭಾಗವಹಿಸಿದ್ದರು.


ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ

+919743225795

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು