ವಿಜಯ ಸಂಘರ್ಷ
ಭದ್ರಾವತಿ: ಸಾಲ ಮರು ಪಾವತಿ ಮಾಡಿಲ್ಲ ಎಂದು ರೈತರ ಮನೆ, ಚರಾಸ್ತಿ ಜಪ್ತಿಗೆ ಬ್ಯಾಂಕ್ ಅಧಿಕಾರಿ ಗಳು ಮುಂದಾಗಿದ್ದಾರೆ ಎಂದು ಆರೋಪಿಸಿ ಇಲ್ಲಿನ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ವಿರುದ್ಧ ಬುಧವಾರ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಅಧ್ಯಕ್ಷ ಎಚ್. ಆರ್. ಬಸವರಾಜಪ್ಪ ನೇತೃತ್ವದಲ್ಲಿ ಪ್ರತಿ ಭಟನೆ ನಡೆಸಲಾಯಿತು.
ರೈತರು ಮೊದಲೇ ಸಂಕಷ್ಟದಲ್ಲಿದ್ದಾರೆ. ಅತಿವೃಷ್ಟಿಯಿಂದ ಆದ ಹಾನಿ, ಬೆಳೆಗೆ ಸೂಕ್ತ ಬೆಲೆ ಸಿಗದೇ ಕಂಗಾಲಾಗಿದ್ದಾರೆ. ಸಾಲ ವಸೂಲಿ ನೆಪದಲ್ಲಿ ಅವರಿಗೆ ತೊಂದರೆ ಕೊಡುವುದನ್ನು ಸಹಿಸು ವುದಿಲ್ಲ ಎಂದು ಪ್ರತಿಭಟನಕಾರರು ಎಚ್ಚರಿಸಿದರು.
ಬ್ಯಾಂಕ್ ಅಧ್ಯಕ್ಷರು, ಸದಸ್ಯರು ಮತ್ತು ವ್ಯವಸ್ಥಾಪಕರೊಂದಿಗೆ ಚರ್ಚಿಸಿದ ನಂತರ ಪ್ರತಿಭಟನೆ ವಾಪಸ್ ಪಡೆಯಲಾಯಿತು.
ರೈತ ಸಂಘದ ರಾಜ್ಯ ಘಟಕದ ಉಪಾ ಧ್ಯಕ್ಷ ಹಿಟ್ಟೂರು ರಾಜು, ಟಿ.ಎಂ. ಚಂದ್ರಪ್ಪ, ಜಿಲ್ಲಾ ಗೌರವಾಧ್ಯಕ್ಷ ಈಶಣ್ಣ,ಜಿಲ್ಲಾ ಘಟಕದ ಅಧ್ಯಕ್ಷ ಎಸ್. ಶಿವಮೂರ್ತಿ, ಮುಖಂಡರಾದ ಇ.ಬಿ. ಜಗದೀಶ್, ಕೆ. ರಾಘವೇಂದ್ರ, ಪಿ.ಡಿ. ಮಂಜಪ್ಪ, ಪಿ.ಶೇಖರಪ್ಪ, ಎಂ.ಮಹ ದೇವಪ್ಪ, ಹುಲಿಮಟ್ಟಿ ಜಯಣ್ಣ, ಎಂ.ಡಿ. ನಾಗರಾಜ್, ಗುರುಶಾಂತ, ಜಿ.ಎನ್. ಪಂಚಾಕ್ಷರಿ, ಸಿ.ಚಂದ್ರಪ್ಪ ಹಾಗೂ ಪ್ರಗತಿಪರ ಸಂಘಟನೆಗಳ ಮುಖಂಡರು ಇದ್ದರು.