ವಿಜಯ ಸಂಘರ್ಷ
ಭದ್ರಾವತಿ: ನಗರ ಹೊಸಮನೆ ಮುಖ್ಯ ರಸ್ತೆ ಹೊಂದಿಕೊಂಡಂತೆ ಇರುವ ಕಸಾಯಿ ಸಂತೆ ಮೈದಾನದಲ್ಲಿರುವ ಕಸಾಯಿಖಾನೆಗಳು ಸಾರ್ವಜನಿಕರಿಗೆ ಉಪಯೋಗವಾಗದೆ ನಗರಸಭೆ ನಿರ್ಲಕ್ಷದಿಂದ ಪಾಳು ಬಿದ್ದಿದ್ದು ತಕ್ಷಣ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಜೆಡಿಯು ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಎಸ್ ಗೌಡ ಒತ್ತಾಯಿಸಿದರು.
ಮಂಗಳವಾರ ನಗರಸಭೆ ಮುಂಭಾಗ ಪ್ರತಿಭಟನೆ ನಡೆಸಿ ಮಾತನಾಡಿದ ಅವರು ಸಾರ್ವಜನಿಕರಿಗೆ ಅನುಕೂಲ ವಾಗುವಂತೆ ನಗರಸಭೆ ವ್ಯಾಪ್ತಿಯ ಹೊಸಮನೆ ಸಂತೆ ಮೈದಾನದಲ್ಲಿ ಹೊಂದಿಕೊಂಡಿರು ವಂತೆ ಇರುವ ಕಸಾಯಿ ಕಾನೆ 2008 ರಲ್ಲಿ ಅಂದಿನ ಉಪಮುಖ್ಯಮಂತ್ರಿ ಬಿ.ಎಸ್.ಯಡಿ ಯೂರಪ್ಪ ರವರ ನೇತೃತ್ವದಲ್ಲಿ ಉದ್ಘಾಟನೆ ಮಾಡಿ ಇಲ್ಲಿಗೆ 15 ವರ್ಷ ಕಳೆದರೂ ಸಹ ಇಲ್ಲಿಯವರೆಗೂ ಸಾರ್ವಜನಿಕರಿಗೆ ಅನುಕೂಲವಾಗದೆ ಪಾಳು ಬಿದ್ದ ಸ್ಥಿತಿಯಲ್ಲಿವೆ ಎಂದು ದೂರಿದರು.
ಟೆಂಡರ್ ನಿಯಮಗಳು ಅವೈಜ್ಞಾನಿಕ ವಾಗಿದ್ದು 15 ರಿಂದ 20 ಮಳಿಗೆಗಳು ಖಾಲಿ ಇವೆ. ಇಂತಹ ಪರಿಸ್ಥಿತಿಯಲ್ಲಿ ಟೆಂಡರ್ ದಾರರು ಆಸಕ್ತಿ ವಹಿಸುತ್ತಿಲ್ಲ ಎಂದು ಕಿಡಿ ಕಾರಿದರು.
ನಗರಸಭೆ ಟೆಂಡರ್ ಕರೆಯುವ ಸಂದರ್ಭದಲ್ಲಿ ಕಡಿಮೆ ಮೊತ್ತಕ್ಕೆ ಟೆಂಡರ್ ಕರೆದು ಸಾರ್ವಜನಿಕ ಉಪಯೋಗಕ್ಕೆ ಬಳಸಿಕೊಳ್ಳಬೇಕು, ಅಥವಾ ಆ ಜಾಗದಲ್ಲಿ ಸಬ್ ರಿಜಿಸ್ಟರ್ ಕಚೇರಿ, ಅಬಕಾರಿ ಇಲಾಖೆಗಳು ಸೇರಿದಂತೆ ಹಲವು ಬಾಡಿಗೆ ಕಟ್ಟಡ ದಲ್ಲಿ ಇದ್ದು ಇಂಥಹ ಯಾವುದಾದರೂ ಸರ್ಕಾರಿ ಕಚೇರಿಗಳನ್ನಾಗಿ ಪರಿವರ್ತನೆ ಮಾಡಬೇಕೆಂದು ಆಗ್ರಹಿಸಿದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ
+919743225795