ಕಾರ್ಖಾನೆ ಉಳಿವಿಗಾಗಿ ಜೋಳಿಗೆ ಹಿಡಿಯಲು ಸಿದ್ದ : ಶ್ರೀ ಈಶ್ವರಾನಂದಪುರಿ ಸ್ವಾಮೀಜಿ

 ವಿಜಯ ಸಂಘರ್ಷ



ಭದ್ರಾವತಿ : ಗುತ್ತಿಗೆ ಕಾರ್ಮಿಕರು ನಡೆಸುತ್ತಿರುವ ಹೋರಾಟಕ್ಕೆ ಭಾನುವಾರ ಹೊಸದುರ್ಗ ಕನಕ ಗುರುಪೀಠದ ಶ್ರೀ ಈಶ್ವರಾನಂದಪುರಿ ಸ್ವಾಮೀಜಿ ಬೆಂಬಲ ಸೂಚಿಸಿ ಮಾತನಾಡಿದರು.


ಪ್ರತಿಷ್ಠಿತ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಗೆ ಪ್ರಸ್ತುತ ಮುಚ್ಚುವ ಸ್ಥಿತಿ ಎದುರಾಗಿರುವುದು ವಿಪರ್ಯಾಸದ ಸಂಗತಿಯಾಗಿದೆ. ಗುತ್ತಿಗೆ ಕಾರ್ಮಿಕರ ಹೋರಾಟ ಕೇಂದ್ರ ಸರ್ಕಾರದ ಗಮನ ಸೆಳೆಯುವಂತಾ ಗಬೇಕು. ಈ ನಿಟ್ಟಿನಲ್ಲಿ ಮಾಧ್ಯಮ ಗಳು ಇನ್ನೂ ಹೆಚ್ಚಿನ ಗಮನ ಹರಿಸ ಬೇಕಾಗಿದೆ. ಕೇಂದ್ರ ಸರ್ಕಾರ ತಕ್ಷಣ ತನ್ನ ನಿಲುವು ಬದಲಿಸಿಕೊಂಡು ಕಾರ್ಖಾನೆಗೆ ಅಗತ್ಯವಿರುವ ಬಂಡ ವಾಳ ಹೂಡಬೇಕು. ಒಂದು ವೇಳೆ ಅದು ಸಾಧ್ಯವಾಗದಿದ್ದಲ್ಲಿ ಮಠಾಧೀ ಶರು ಜೋಳಿಗೆ ಹಿಡಿದು ಕಾರ್ಖಾನೆ ಉಳಿಸಿಕೊಳ್ಳಲು ಮುಂದಾಗುವುದು ಸಿದ್ದ ಎಂದರು.


ರಕ್ತದಲ್ಲಿ ಕಾರ್ಮಿಕರ ಹೋರಾಟದ ಕೂಗು :


ಸಾವಿರಾರು ಗುತ್ತಿಗೆ ಕಾರ್ಮಿಕರು ಭಾನುವಾರ ಅಂಚೆ ಕಾರ್ಡ್‌ನಲ್ಲಿ ತಮ್ಮ ತಮ್ಮ ರಕ್ತದ ಮೂಲಕ ಆಂಗ್ಲ ಭಾಷೆ ಯಲ್ಲಿ 'ಸೇವ್ ವಿಐಎಸ್‌ಎಲ್, ಸೇವ್ ಭದ್ರಾವತಿ' ಎಂದು ಬರೆದು ಹೆಬ್ಬೆಟ್ಟು ಹಾಕುವ ಮೂಲಕ ಪ್ರಧಾನಿ ನರೇಂದ್ರ ಮೋದಿಯವರಿಗೆ ಕಾರ್ಖಾನೆ ಮುಚ್ಚು ವ ಆದೇಶ ಹಿಂಪಡೆಯುವಂತೆ, ಅಗತ್ಯವಿರುವ ಬಂಡವಾಳ ತೊಡಗಿ ಸುವಂತೆ ಆಗ್ರಹಿಸಿದ್ದಾರೆ.


ಗುತ್ತಿಗೆ ಕಾರ್ಮಿಕರು ಹೋರಾಟಕ್ಕೆ ಇದೀಗ ತಮ್ಮ ರಕ್ತ ಚೆಲ್ಲುತ್ತಿದ್ದು, ಮುಂದಿನ ದಿನಗಳಲ್ಲಿ ಹೋರಾಟ ಮತ್ತಷ್ಟು ಸ್ವರೂಪ ಪಡೆದುಕೊಳ್ಳುವ ಮೊದಲು ಕೇಂದ್ರ ಸರ್ಕಾರ ಎಚ್ಚೆತ್ತು ಕೊಳ್ಳಬೇಕಾಗಿದೆ.


ಗುತ್ತಿಗೆ ಕಾರ್ಮಿಕರ ಸಂಘದ ಅಧ್ಯಕ್ಷ ರು, ಪದಾಧಿಕಾರಿಗಳು, ತಾಲೂಕು ಕುರುಬರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ನಿರ್ದೇಶಕರು ಮತ್ತಿತರರು ಉಪಸ್ಥಿತರಿದ್ದರು.


ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ

+91 9743225795

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು