ವಿಜಯ ಸಂಘರ್ಷ
ಭದ್ರಾವತಿ: ನಗರದ ಹೃದಯ ಭಾಗದ ಭದ್ರಾನದಿಯ ಹಳೇಸೇತುವೆ ಪಕ್ಕದಲ್ಲಿ ನಿರ್ಮಾಣಗೊಳ್ಳುತ್ತಿರುವ ಸ್ಟೀಲ್ ಬ್ರಿಡ್ಜ್ ಹೊಸಸೇತುವೆ ಕಾಮಗಾರಿ ಅವೈಜ್ಞಾನಿಕವಾಗಿ, ಕಳಪೆ ಗುಣಮಟ್ಟ ದಿಂದ ಕೂಡಿದೆ ಎಂದು ಆರೋಪಿಸಿ ಶನಿವಾರ ತಾಲೂಕು ಸಾರ್ವಜನಿಕ ಹಿತರಕ್ಷಣಾ ಸಮಿತಿ ವತಿಯಿಂದ ರಸ್ತೆ ತಡೆ ನಡೆಸಿ ಪ್ರತಿಭಟಿಸಲಾಯಿತು.
ನಗರಸಭೆ ವಾರ್ಡ್ ನಂ.3 ರ ವ್ಯಾಪ್ತಿ ಯಲ್ಲಿ ಕಳೆದ ಸುಮಾರು 6 ವರ್ಷ ಗಳಿಂದ ಸೇತುವೆ ಕಾಮಗಾರಿ ನಡೆಯು ತ್ತಿದ್ದು, ಕಾಮಗಾರಿ ಮಂದಗತಿಯಲ್ಲಿ ಸಾಗುವ ಜೊತೆಗೆ ಕಳಪೆಯಿಂದ ಕೂಡಿದೆ. ಅಲ್ಲದೆ ಸೇತುವೆ ಕಾಮಗಾರಿ ಮೂಲ ನೀಲನಕ್ಷೆಯಂತೆ ಕೈಗೊಳ್ಳದೆ ಚುನಾವಣೆ ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ಒತ್ತಡಕ್ಕೆ ಮಣಿದು ತರಾತುರಿಯಲ್ಲಿ ಅವೈಜ್ಞಾನಿಕವಾಗಿ ಕಾಮಗಾರಿ ಕೈಗೊಳ್ಳಲಾಗುತ್ತಿದೆ ಎಂದು ಆರೋಪಿಸಿದರು.
ಕಾಮಗಾರಿಯನ್ನು ಮೂಲ ನೀಲನಕ್ಷೆ ಯಂತೆ ಸೇತುವೆ ಸಮೀಪದಲ್ಲಿರುವ ಕಟ್ಟಡಗಳನ್ನು ತೆರವುಗೊಳಿಸಿ ಕೈಗೊಳ್ಳ ಬೇಕು. ಆದರೆ ಇದೀಗ ತರಾತುರಿ ಯಲ್ಲಿ ಸೇತುವೆ ರಸ್ತೆಯನ್ನು ಓರೆಯಾ ಗಿ ನಿರ್ಮಾಣ ಮಾಡಲಾಗುತ್ತಿದೆ. ಇದರಿಂದ ವಾಹನಗಳ ಸಂಚಾರಕ್ಕೆ, ಪಾದಚಾರಿಗಳಿಗೆ ತೊಂದರೆಯಾ ಗಲಿದೆ. ತಕ್ಷಣ ಕಾಮಗಾರಿಯನ್ನು ಸ್ಥಗಿತಗೊಳಿಸಿ ಕಟ್ಟಡಗಳನ್ನು ತೆರವು ಗೊಳಿಸಿ ಮೂಲ ನೀಲನಕ್ಷೆ ಯಂತೆ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ತಹಸೀಲ್ದಾರ್ ಮೂಲಕ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ನಗರಸಭಾ ಸದಸ್ಯರಾದ ಜಾರ್ಜ್, ಆರ್. ಮೋಹನ್‌ಕುಮಾರ್, ಬಸವರಾಜ್ ಆನೆಕೊಪ್ಪ, ಉದಯ್ ಕುಮಾರ್, ನಗರಸಭೆ ಮಾಜಿ ಅಧ್ಯಕ್ಷ ಆರ್. ಕರುಣಾ ಮೂರ್ತಿ, ಮಾಜಿ ಉಪಾಧ್ಯಕ್ಷೆ ಸಾವಿತ್ರಮ್ಮ ಪುಟ್ಟೇಗೌಡ, ಮಾಜಿ ಸದಸ್ಯರಾದ ಎಂ.ಎ ಅಜಿತ್, ಮೋಹನ್‌ರಾವ್, ಗುಣಶೇಖರ್, ಮುಖಂಡರಾದ ಅಮೋಸ್, ನಕುಲ್, ಗೋಕುಲ್ ಕೃಷ್ಣ, ಪ್ರಕಾಶ್, ಧರ್ಮ ರಾಜ್, ತಬ್ರೇಸ್ ಖಾನ್ ಸೇರಿದಂತೆ ಸ್ಥಳೀಯ ಮುಖಂಡರು, ನಿವಾಸಿಗಳು ಪಾಲ್ಗೊಂಡಿದ್ದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ
+919743225795