ವಿಜಯ ಸಂಘರ್ಷ
ಭದ್ರಾವತಿ : ದೇಶದ ಸಂವಿಧಾನ ನಿರ್ಮಾತೃ, ಭಾರತರತ್ನ ಡಾ. ಬಾಬಾ ಸಾಹೇಬ್ ಅಂಬೇಡ್ಕರ್‌ರವರು ಬದುಕಿ ರುವಾಗ ಕಾಂಗ್ರೆಸ್ ಪಕ್ಷ ಅವರಿಗೆ ಕನಿಷ್ಠ ಮಟ್ಟದ ಗೌರವ ಸಹ ನೀಡ ಲಿಲ್ಲ. ಸಾವಿನ ನಂತರವೂ ಅವರನ್ನು ಅವಮಾನಿಸಿತು. ಇಂತಹ ಪಕ್ಷಕ್ಕೆ ಅಂಬೇಡ್ಕರ್ ಹೆಸರು ಹೇಳುವ ಹಾಗು ದೇಶದ ಜನರ ಮತ ಕೇಳುವ ಯಾವುದೇ ನೈತಿಕತೆ ಇಲ್ಲವಾಗಿದೆ ಎಂದು ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾ ಪ್ರಭಾರಿ, ವಿಧಾನ ಪರಿಷತ್ ಸದಸ್ಯ ಮೋನಪ್ಪ ಭಂಡಾರಿ ಹೇಳಿದರು.
ಅವರು ಜಿಲ್ಲಾ ಬಿಜೆಪಿ ಎಸ್.ಸಿ ಮೋರ್ಚಾ ವತಿಯಿಂದ ಪಕ್ಷದ ಮಂಡಲ ಕಛೇರಿ ಮುಂಭಾಗ ಹಮ್ಮಿಕೊಳ್ಳಲಾಗಿದ್ದ 'ನಮ್ಮ ನಡೆ ಭೀಮ ನಡೆ' ಸಮಾವೇಶ ಉದ್ಘಾಟಿಸಿ ಮಾತನಾಡಿದರು.
ಕಾಂಗ್ರೆಸ್ ಪಕ್ಷ ಅಂಬೇಡ್ಕರ್‌ರವರನ್ನು ಹೆಸರಿಗೆ ಮಾತ್ರ ಮೀಸಲು ಮಾಡಿತು ಹೊರತು ಅವರಿಗೆ ಯಾವುದೇ ಕನಿಷ್ಠ ಮಟ್ಟದ ಗೌರವ ನೀಡಲಿಲ್ಲ. ಚುನಾ ವಣೆಯಲ್ಲಿ ಅವರನ್ನು ಸೋಲಿಸುವ ಹುನ್ನಾರ ನಡೆಸಿತು.
ಅಂಬೇಡ್ಕರ್‌ರವರಿಗೆ ಅಂದು ಬಿಜೆಪಿ ಪಕ್ಷದ ಮಾತೃ ಸಂಘಟನೆ ಜನಸಂಘ ಬೆಂಬಲ ನೀಡಿತು. ದೆಹಲಿಯಲ್ಲಿ ಅಂಬೇಡ್ಕರ್‌ರವರ ಕೊನೆಯ ಅವಧಿ ಯಲ್ಲಿ ಅವರ ಅಂತ್ಯ ಸಂಸ್ಕಾರಕ್ಕೂ ಕಾಂಗ್ರೆಸ್ ಅವಕಾಶ ನೀಡಲಿಲ್ಲ. ಈ ಪಕ್ಷಕ್ಕೆ ದಲಿತರು, ಪರಿಶಿಷ್ಟರು ಕೇವಲ ೫ ವರ್ಷಗಳಿಗೆ ಒಮ್ಮೆ ಮಾತ್ರ ಕಾಣಿಸುತ್ತಾರೆ. ನಮ್ಮನ್ನು ಮತ ಬ್ಯಾಂಕ್ ರೀತಿಯಲ್ಲಿ ನೋಡುತ್ತಿದ್ದಾರೆ. ನಮ್ಮ ಮೇಲೆ ಯಾವುದೇ ರೀತಿ ಕಾಳಜಿ, ಬದ್ಧತೆ ಇಲ್ಲವಾಗಿದೆ. ನಮ್ಮ ಶಕ್ತಿ ತೋರಿಸುವ ದಿನಗಳು ಇಂದು ಎದುರಾಗಿವೆ ಎಂದರು.
ಎಸ್.ಸಿ ಮೋರ್ಚಾ ಜಿಲ್ಲಾಧ್ಯಕ್ಷ ಕಾಸರವಳ್ಳಿ ಶ್ರೀನಿವಾಸ್ ಮಾತನಾಡಿ, ದೇಶದ ಪ್ರಧಾನಿ ನರೇಂದ್ರ ಮೋದಿ ಯವರು ಮೊದಲು ದೇಶದ ಸಂವಿ ಧಾನಕ್ಕೆ ನಮಸ್ಕರಿಸಿದರು. ಆ ಮೂಲಕ ಅವರು ಬಾಬಾ ಸಾಹೇಬ್ ಅಂಬೇಡ್ಕರ್‌ರವರನ್ನು ಗೌರವದಿಂದ ಕಂಡಿದ್ದಾರೆ. ಅಲ್ಲದೆ ಅಂಬೇಡ್ಕರ್ ರವರ ಜನ್ಮಸ್ಥಳ, ವಿದ್ಯಾಭ್ಯಾಸ ನಡೆಸಿದ ಸ್ಥಳ, ಅವರು ಮರಣ ಹೊಂದಿದ ಸ್ಥಳ ಹಾಗು ಸಮಾದಿ ಸ್ಥಳ ಒಟ್ಟು ೫ ಪಂಚ ಸ್ಥಳಗಳ ಅಭಿವೃದ್ಧಿ ಕೈಗೊಂಡಿದ್ದಾರೆ. ಕೇಂದ್ರ ಹಾಗು ರಾಜ್ಯದಲ್ಲಿ ಪರಿಶಿಷ್ಟರು, ದಲಿತರಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಈ ಹಿಂದಿನ ಕಾಂಗ್ರೆಸ್ ಪಕ್ಷ ಮಾಡದಿರುವ ಕೆಲಸಗಳನ್ನು ಬಿಜೆಪಿ ಪಕ್ಷ ತನ್ನ ಅಧಿಕಾರದ ಅವಧಿಯಲ್ಲಿ ಮಾಡಿ ತೋರಿಸಿದೆ. ಈ ಹಿನ್ನಲೆಯಲ್ಲಿ ನಾವೆಲ್ಲರೂ ಸಹ ಬಿಜೆಪಿ ಪಕ್ಷವನ್ನು ಇನ್ನೂ ಹೆಚ್ಚಿನ ರೀತಿಯಲ್ಲಿ ಸಂಘಟಿಸುವ ಮೂಲಕ ಪುನಃ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಶ್ರಮಿಸಬೇಕಾಗಿದೆ ಎಂದರು.
ಪಕ್ಷದ ರಾಜ್ಯ ನಾಯಕ ಪಟಾಪಟ್ ಶ್ರೀನಿವಾಸ್, ವಿಧಾನ ಪರಿಷತ್ ಮಾಜಿ ಸದಸ್ಯ ಆರ್.ಕೆ ಸಿದ್ದರಾಮಣ್ಣ, ಓಬಿಸಿ ಮೋರ್ಚಾ ಉಪಾಧ್ಯಕ್ಷ ಅಶೋಕ್ ಮೂರ್ತಿ, ಕಾಡಾ ಅಧ್ಯಕ್ಷೆ ಕೆ.ಬಿ ಪವಿತ್ರ ರಾಮಯ್ಯ, ದೇವರಾಜ್ ಮಂಡೇನ್ ಕೊಪ್ಪ, ಜಯರಾಮ್ ನಾಯ್ಕ್, ಎಂ. ರಾಜು, ಬಿಜೆಪಿ ತಾಲೂಕು ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್, ಎಸ್.ಸಿ ಮೋರ್ಚಾ ತಾಲೂಕು ಅಧ್ಯಕ್ಷ ಗಣೇಶ್ ರಾವ್, ಪ್ರಮುಖರಾದ ಕೂಡ್ಲಿಗೆರೆ ಹಾಲೇಶ್, ಎಸ್. ಕುಮಾರ್, ತೀರ್ಥಯ್ಯ, ಜಿ. ಆನಂದಕುಮಾರ್, ಕೆ. ಮಂಜುನಾಥ್, ಎಂ. ಪ್ರಭಾಕರ್, ಚಂದ್ರು ದೇವರನರಸೀಪುರ, ವಿವಿಧ ತಾಲೂಕುಗಳ ಎಸ್.ಸಿ ಮೋರ್ಚಾ ಅಧ್ಯಕ್ಷರುಗಳಾದ ಚಂದ್ರಶೇಖರ್, ತಿಪ್ಪೇಶ್ ಆನವೇರಿ, ಯೋಗೇಶ್, ಮಂಜುನಾಥ್, ರುಕ್ಮಿಣಿ ರಾಜ್, ರವಿಕುಮಾರ್, ಆನಂದಪ್ಪ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿದ್ದರು.
ಜಿಲ್ಲೆಯ ವಿವಿಧ ತಾಲೂಕುಗಳಿಂದ ಪಕ್ಷದ ಎಸ್.ಸಿ ಮೋರ್ಚಾ ಮುಖಂ ಡರು, ಕಾರ್ಯಕರ್ತರು ಸೇರಿದಂತೆ ವಿವಿಧ ಮೋರ್ಚಾಗಳ ಪ್ರಮುಖರು ಪಾಲ್ಗೊಂಡಿದ್ದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ
+919743225795