ವಿಜಯ ಸಂಘರ್ಷ
ಸಾಗರ: ಬಗರ್‌ಹುಕ್ಕುಂ ರೈತರ ಒಂದು ಗುಂಟೆ ಜಾಗವನ್ನೂಹೋಗಲು ಬಿಡುವುದಿಲ್ಲ. ರೈತರನ್ನು ಒಕ್ಕಲೆಬ್ಬಿ ಸಲು ಬಿಡುವುದಿಲ್ಲ. ಸರ್ಕಾರ ರೈತರ ಪರವಾಗಿದೆ ಎಂದು ಶಾಸಕ ಹಾಲಪ್ಪ ಹರತಾಳು ಹೇಳಿದರು.
ತಾಲ್ಲೂಕಿನ ಪಟಗುಪ್ಪ ಸೇತುವೆ ಬಳಿ ನಡೆದ ಶರಾವತಿ ಹಿನ್ನೀರ ಹಬ್ಬವನ್ನು ಉದ್ಘಾಟಿಸಿ ಮಾತನಾಡಿದರು.
ರೈತರು ಸರ್ಕರದ ಮೇಲೆ ನಂಬಿಕೆ ಇಡಬೇಕು. ಯಾವುದೇ ಕಾರಣಕ್ಕೂ ಆತಂಕ ಬೇಡ. ರೈತರ ಸಮಸ್ಯೆಗೆ ಕಾಂಗ್ರೆಸ್ ನೇರ ಕಾರಣ. ಅಧಿಕಾರ ಇದ್ದಾಗ ಸಮಸ್ಯೆ ಬಗೆಹರಿಸದೇ ಈಗ ನಮ್ಮ ಮೇಲೆ ಗೂಬೆ ಕೂರಿಸುತ್ತಿದ್ದಾರೆ ಎಂದರು.
ಶರಾವತಿ ನದಿಗೆ ಸೇತುವೆ ಕಟ್ಟುವಲ್ಲಿ ವಿಶೇಷ ಆಸಕ್ತಿ ತೋರಿದ್ದೇನೆ. ಇದೀಗ ಮೂರು ಸೇತುವೆ ಆಗುತ್ತಿದೆ' ಎಂದು ಹೇಳಿದರು.
'ಹಿನ್ನೀರ ಹಬ್ಬದ ವಿಚಾರದಲ್ಲಿ ವಿರೋ ಧಿಗಳು ಸುಮ್ಮನೆ ಆರೋಪ ಮಾಡು ತ್ತಾರೆ. ನಾಡಿಗೆ ಬೆಳಕು ನೀಡಿದ ಶರಾ ವತಿ ನದಿ ದಡದಲ್ಲಿ ಇರುವ ನಮಗೆ ಹಬ್ಬ ಆಚರಿಸುವ ಸಂಭ್ರಮ ಬೇಡವೇ. ನಮ್ಮ ಮಕ್ಕಳು ಏನು ಮಾಡಿದ್ದಾರೆ. ಇಷ್ಟು ಜನ ಕಲೆತು ಸಂಭ್ರಮ ಪಡುವ ಹಬ್ಬದ ಆಚರಣೆ ಕಣ್ಣೀರು ಹೇಗೆ ಆಗು ತ್ತದೆ. ಹೀನ್ನೀರನ್ನು ಪನ್ನೀರು ಮಾಡಿ ತೋರಿಸುತ್ತೇವೆ' ಎಂದರು.
ಮಾಜಿ ಶಾಸಕ ಬಿ. ಸ್ವಾಮಿರಾವ್, ಗಣ ಪತಿ ಬೆಳಗೋಡು, ಸುರೇಶ್ ಸ್ವಾಮಿರಾವ್, ಲೋಕನಾಥ್, ಗಣೇಶ್ ಪ್ರಸಾದ್, ಎಂ.ಎನ್. ಸುಧಾಕರ್ ಇದ್ದರು.