ವಿಜಯ ಸಂಘರ್ಷ
ಭದ್ರಾವತಿ: ಕೆಪಿಸಿಸಿ ಕಾರ್ಮಿಕ ವಿಭಾಗದ ರಾಜ್ಯಾಧ್ಯಕ್ಷ ಕೆ.ಪುಟ್ಟಸ್ವಾಮಿಗೌಡ ಇವರ ಶಿಫಾರಸಿನ ಮೇರೆಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್.ಸುಂದರೇಶ್, ಶಾಸಕ ಬಿ.ಕೆ.ಸಂಗಮೇಶ್ ರವರ ಸೂಚನೆ ಮೇರೆಗೆ ಬಿ.ಕೆ ರಮೇಶ್ ರವರನ್ನು ಜಿಲ್ಲಾ ಕಾರ್ಮಿಕ ವಿಭಾಗದ ಪ್ರಧಾನ ಕಾರ್ಯದರ್ಶಿಯನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತ ನೇಮಕ ಮಾಡಲಾಗಿದೆ.
ತಮಗೆ ವಹಿಸಲಾಗಿರುವ ಹೊಣೆಗಾರಿಕೆ ಯನ್ನು ನಿಷ್ಠೆಯಿಂದ ನಿರ್ವಹಿಸುತ್ತಾ ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾರ್ಗ ದರ್ಶನದಲ್ಲಿ ಹಾಗೂ ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸ್ಥಳೀಯ ನಾಯಕರುಗಳ ಸಹಾಯದೊಂದಿಗೆ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸಿ ಪಕ್ಷದ ಸಂಘಟನೆ ಹಾಗೂ ಕಾರ್ಮಿಕರ ಏಳಿಗೆಗಾಗಿ ಶ್ರಮಿಸು ವಂತೆ ಆದೇಶ ಪತ್ರದಲ್ಲಿ ಸೂಚಿಸಲಾಗಿದೆ.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ : +91 9743225795
Tags:
ನೇಮಕಾತಿ ಆದೇಶ