ವಿಜಯ ಸಂಘರ್ಷ
ಭದ್ರಾವತಿ: ನಗರದ ಜನ್ನಾಪುರ ಭಾಗ ದಲ್ಲಿ ನಗರಸಭಾ ಮಾಜಿ ಅಧ್ಯಕ್ಷೆ ಎಂಎಸ್.ಸುಧಾಮಣಿ ಅವರ ನೇತೃತ್ವದಲ್ಲಿ ಬುಧವಾರ ಕಾಂಗ್ರೆಸ್ ಪಕ್ಷದ ಗ್ಯಾರೆಂಟಿ ಕಾರ್ಡ್ ವಿತರಿಸಲಾಯಿತು.
ನಂತರ ಪಕ್ಷದ ಪ್ರಣಾಳಿಕೆಯ ಬಗ್ಗೆ ಮಹಿಳೆಯರಿಗೆ ಸವಿಸ್ತಾರವಾಗಿ ವಿವರಿಸಿದರು.
ಸ್ಥಳೀಯ ಮಹಿಳಾ ಮುಖಂಡರಾದ ಹೇಮಾವತಿ ರವರು ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಕಾರ್ಡ್ ಬಿಡುಗಡೆಗೊಳಿಸಿ ಈ ಭಾರಿ ಕ್ಷೇತ್ರದ ಶಾಸಕ ಬಿ.ಕೆ.ಸಂಗಮೇಶ್ವರ್ ರವರನ್ನು ಗೆಲ್ಲಿಸುವ ಮೂಲಕ ಮಂತ್ರಿ ಯನ್ನಾಗಿಸಲು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಆಶೀರ್ವಾದಿ ಸುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ನೂರಾರು ಮಹಿಳೆ ಯರು ಭಾಗವಹಿಸಿದ್ದರು.