ಪಕ್ಷೇತರ ಅಭ್ಯರ್ಥಿ ಕಾಂಗ್ರೆಸ್ ಹೆಸರು ಬಳಸದಂತೆ ಚುನಾವಣಾ ಅಧಿಕಾರಿಗೆ ದೂರು

ವಿಜಯ ಸಂಘರ್ಷ 
ಶಿಕಾರಿಪುರ: ಸಾರ್ವತ್ರಿಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಶಿಕಾರಿಪುರ ವಿಧಾನಸಭಾ ಕ್ಷೇತ್ರವು ರಂಗೇರುತ್ತಿದ್ದು ಕಾಂಗ್ರೆಸ್ ಪಕ್ಷದ ಬಂಡಾಯ ಅಭ್ಯರ್ಥಿ ಎಂದು ಹೇಳಿಕೊಂಡು ತಾಲೂಕಿನ ಮತದಾರರಲ್ಲಿ ಮತಯಾಚಿಸುತ್ತಿರುವ ಪಕ್ಷೇತರ ಅಭ್ಯರ್ಥಿ ನಾಗರಾಜ್ ಗೌಡ ವಿರುದ್ಧ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿ ಗೋಣಿ ಮಾಲತೇಶ್  ಚುನಾವಣಾ ಅಧಿಕಾರಿಗಳಿಗೆ ಲಿಖಿತ ದೂರು ನೀಡಿದ್ದಾರೆ.

ನಂತರ ಮಾಧ್ಯಮಗಳೊಂದಿಗೆ ಮಾತನಾಡಿ ಕಾಂಗ್ರೆಸ್ ಪಕ್ಷಕ್ಕೆ ದ್ರೋಹ ಮಾಡಿ ಪಕ್ಷೇತರ ರಾಗಿ ಸ್ಪರ್ಧಿಸಿರುವ ನಾಗರಾಜ್ ಗೌಡ ಪಕ್ಷೇತರ ಅಭ್ಯರ್ಥಿ ಎಂದೇ ಬಿಂಬಿಸಿಕೊಳ್ಳ ಬೇಕು ಕಾಂಗ್ರೆಸ್ ಪಕ್ಷದ ಬಂಡಾಯ ಅಭ್ಯರ್ಥಿ ಎಂದು ಪ್ರಚಾರ ಮಾಡಿಕೊಳ್ಳು ತ್ತಿದ್ದು ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಕಾರ್ಡುಗಳನ್ನು ತಾಲೂಕಿನ ಗ್ರಾಮಗಳಲ್ಲಿ ಹಂಚುತ್ತಾ ತಾಲೂಕಿನ ಮತದಾರರಲ್ಲಿ ಗೊಂದಲ ಉಂಟು ಮಾಡುತ್ತಿದ್ದಾರೆ.

ಕಾಂಗ್ರೆಸ್ ಪಕ್ಷ ಬಿಟ್ಟು ಸ್ವತಂತ್ರವಾಗಿ ಚುನಾವಣೆ ನಡೆಸುತ್ತಿರುವ ಪಕ್ಷೇತರರು ಪಕ್ಷೇತರ ಅಭ್ಯರ್ಥಿ ಎಂದೇ ಬಿಂಬಿಸಿ ಕೊಂಡು ಮತ ಕೇಳಬೇಕು ಎಂದು ಆಗ್ರಹಿಸಿದರು.

 ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ :+919743225795

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು