ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಯುವಕರು ಪೊಲೀಸ್ ಬಲೆಗೆ!

 ವಿಜಯ ಸಂಘರ್ಷ



ಭದ್ರಾವತಿ: ಗಾಂಜಾ ಮಾರಾಟ ಅಡ್ಡೆ ಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ, ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಮೂವರು ಯುವಕರನ್ನು ಬಂಧಿಸಿದ ಘಟನೆ ನಗರದ ಹೊಳೆ ಹೊನ್ನೂರು ರಸ್ತೆಯ ಲಕ್ಷ್ಮೀ ಸಾಮಿಲ್ ಸಮೀಪ ನಡೆದಿದೆ.


ಸೀಗೆಬಾಗಿ ನಿವಾಸಿ ರೋಷನ್ (27), ವೀರಾಪುರದ ಮೊಹಮ್ಮದ್ ಇಬ್ರಾಹಿಂ ಮೀರ್ ಯಾನೆ ಟಕ್ಕರ್ (24) ಹಾಗೂ ಭದ್ರಾ ಕಾಲೋನಿ ನಿವಾಸಿ ಮಂಜುನಾಥ್ ಯಾನೆ ಕ್ಯಾತೆ (27) ಬಂಧಿತ ಆರೋಪಿಗಳೆಂದು ಗುರುತಿಸಲಾಗಿದೆ.


ಆರೋಪಿಗಳಿಂದ 7 ಸಾವಿರ ರೂ. ಮೌಲ್ಯದ 195 ಗ್ರಾಂ ತೂಕದ ಒಣ ಗಾಂಜಾ, 690 ನಗದು, ಕೃತ್ಯಕ್ಕೆ ಬಳಸಿದ್ದ ಬೈಕ್ ನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಹಳೇನಗರ ಪೊಲೀಸ್ ಠಾಣೆಯಲ್ಲಿ ಎನ್.ಡಿ.ಪಿ.ಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.


ಖಚಿತ ವರ್ತಮಾನದ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಉಪ ವಿಭಾಗದ ಹಿರಿಯ ಸಹಾಯಕ ಪೊಲೀಸ್ ಅಧೀಕ್ಷಕರಾದ ಜಿತೇಂದ್ರ ಕುಮಾರ್ ದಯಾಮ ನೇತೃತ್ವದಲ್ಲಿ ಹಳೇನಗರ ಪೊಲೀಸ್ ಠಾಣೆ ಪಿಎಸ್ಐ ಶರಣಪ್ಪ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.


 ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ

+919743225795

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು