ಚುನಾವಣೆ ಫಲಿತಾಂಶ ಹಿನ್ನಲೆ ಸಂಜೆ 6 ರಿಂದ ಜಿಲ್ಲಾದ್ಯಂತ 144 ಸೆಕ್ಷನ್ ಜಾರಿ..?

ವಿಜಯ ಸಂಘರ್ಷ
ಶಿವಮೊಗ್ಗ: ವಿಧಾನಸಭಾ ಚುನಾವಣೆಯ ಫಲಿತಾಂಶ ಹಿನ್ನೆಲೆ ಜಿಲ್ಲೆಯಲ್ಲಿ ಇಂದು ಸಂಜೆ 6 ಗಂಟೆಯಿಂದ 144 ಸೆಕ್ಷನ್ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ.
ಮೇ 12ರ ಸಂಜೆ 6 ರಿಂದ ಮೇ14 ರ ರಾತ್ರಿ 10 ರವರೆಗೆ ಈ ಆದೇಶ ಜಾರಿಯಲ್ಲಿರಲಿದೆ. ವಿಜಯೋತ್ಸವ ಸಾರ್ವಜನಿಕವಾಗಿ ಐದಕ್ಕಿಂತ ಹೆಚ್ಚು ಮಂದಿ ಗುಂಪು ಸೇರುವುದು, ಸಾರ್ವಜನಿಕವಾಗಿ ಚೂರಿ ಇನ್ನಿತರ ಆಯುಧಗಳನ್ನು ತೆಗೆದುಕೊಂಡು ಹೋಗುವುದು, ಸಾರ್ವಜನಿಕ ಸಮಾರಂಭ ಪ್ರತಿಭಟನೆ ನಡೆಸುವುದು ಎಲ್ಲವನ್ನು ನಾಳೆ ಜಿಲ್ಲೆಯಾದ್ಯಂತ ಸಂಪೂರ್ಣ ನಿಷೇದಿಸಲಾಗಿದೆ.

ಶವ ಸಂಸ್ಕಾರ, ಮದುವೆ ಅಥವಾ ಧಾರ್ಮಿಕ ಮೆರವಣಿಗೆಗಳಿಗೆ ಹಾಗೂ ಕೋವಿಡ್ 19 ಕಾರ್ಯಗಳಿಗೆ ಈ ಆದೇಶ ಅನ್ವಯಿಸುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ನಿಷೇದಾಜ್ಞೆ ವಿಧಿಸಿ ಆದೇಶ ಹೊರಡಿಸಿರುವುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ :+919743225795

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು