ವಿಜಯ ಸಂಘರ್ಷ
ಭದ್ರಾವತಿ: ವಿಧಾನಸಭಾ ಚುನಾವಣೆಗೆ 2ನೇ ಬಾರಿಗೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು, ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ನನ್ನನ್ನು ಬೆಂಬಲಿಸುವಂತೆ ಪಕ್ಷೇತರ ಅಭ್ಯರ್ಥಿ ಎಸ್.ಕೆ ಸುಧೀಂದ್ರ ಮನವಿ ಮಾಡಿದರು.
ಅವರು ಸೋಮವಾರ ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿ, ನಾನು ವಿಐಎಸ್‌ಎಲ್ ಕಾರ್ಖಾನೆ ನಿವೃತ್ತ ಕಾರ್ಮಿಕರಾದ ದಿವಂಗತ ಕೃಷ್ಣಮೂರ್ತಿ ಮತ್ತು ಸುಮತಿ ಪುತ್ರನಾಗಿದ್ದೇನೆ. ಇಲ್ಲಿಯೇ ಹುಟ್ಟಿ ಬೆಳೆದಿ ದ್ದು, ವಿದ್ಯಾರ್ಥಿ ದೆಸೆಯಿಂದಲೇ ನನ್ನ ರಾಜಕೀಯ ಜೀವನ ಆರಂಭಗೊಂಡಿದೆ. ಸುಮಾರು 29 ವರ್ಷಗಳಿಂದ ತೆರೆಮರೆ ಯಲ್ಲಿ ಕೈಲಾದಷ್ಟು ಸಾಮಾಜಿಕ ಸೇವಾ ಕಾರ್ಯಗಳನ್ನು ಹಾಗು ಹೋರಾಟಗಳನ್ನು ನಡೆಸಿಕೊಂಡು ಬಂದಿದ್ದೇನೆ ಎಂದರು.
ನಾನು ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಯ ಗುರಿ ಹೊಂದಿದ್ದೇನೆ. ಈ ಹಿನ್ನಲೆಯಲ್ಲಿ ಮತದಾರರು ಈ ಬಾರಿ ಚುನಾವಣೆಯಲ್ಲಿ ಮತ ಖರೀದಿ ಮಾಡು ವವರಿಗೆ ಮತ ನೀಡಲಾರೆ, ಅಭಿವೃದ್ಧಿ ಮಾಡುವವರಿಗಾಗಿ ಮಾತ್ರ ನನ್ನ ಮತ, ಆರ್ಥಿಕತೆ, ಸಾಮಾಜಿಕತೆಯ ಜ್ಞಾನ ಮತ್ತು ನ್ಯಾಯ ಪರತೆಯ ನೀತಿಯುಳ್ಳವರಿಗೆ ನನ್ನ ಮತ, ಸ್ವಜನ ಪಕ್ಷಪಾತಿಗಳನ್ನು ಧಿಕ್ಕರಿಸಿ ಸರ್ವರನ್ನೂ ಸಮಾನರೆಂದು ಕಾಣುವವ ರಿಗೆ ನನ್ನ ಮತ, ವಿಧಾನಸಭೆಯಲ್ಲಿ ಮೌನವಾಗಿದ್ದು ಮತಯಾಚನೆಗೆ ಮಾತ್ರ ಬಾಯಿ ಬಿಡುವವರಿಗೆ ನನ್ನ ಮತವಿಲ್ಲ ಹಾಗು ನನ್ನ ಒಂದು ಮತ ಕ್ಷೇತ್ರದ ಭವಿಷ್ಯ ಬದಲಾಯಿಸುತ್ತದೆ ಎಂಬ ತಿಳುವಳಿಕೆ ಯಿಂದ ನಾನು ಕಡ್ಡಾಯವಾಗಿ ಮತದಾನ ಮಾಡುತ್ತಿದ್ದೇನೆ ಎಂಬ ನಿರ್ಧಾರಗಳನ್ನು ಕೈಗೊಳ್ಳುವ ಮೂಲಕ ಬೆಂಬಿಸುವಂತೆ ಮನವಿ ಮಾಡಿದರು.
ಸುದ್ದಿ ಹಾಗೂ ಜಾಹೀರಾತಿಗಳಿಗಾಗಿ ಸಂಪರ್ಕಿಸಿ :+919743225795
Tags:
S.K.Sudhindra Press meet